ಚೆನ್ನೈ: ತಮಿಳುನಾಡಿನ ಚೆನ್ನೈನ ಅವಡಿಯ ತಿರುಮಲ್ಲೈವೋವಲ್‌ನಲ್ಲಿರುವ ಅಪಾರ್ಟ್‌ಮೆಂಟ್‌ನ ಕಿಟಕಿಯಿಂದ ಏಳು ತಿಂಗಳ ಮಗುವೊಂದು ವಿಂಡೋ ಪೋರ್ಚ್ ಮೇಲೆ ಬಿದ್ದ ಘಟನೆ ನಡೆದಿದೆ.
ತಾಯಿಯ ಮಡಿಲಿನಲ್ಲಿ ಆಟವಾಡುತ್ತಿದ್ದ ಮಗು ಇದ್ದಕ್ಕಿದ್ದಂತೆ ಕಿಟಕಿಯಿಂದ ಪ್ಲಾಸ್ಟಿಕ್ ಶೀಟ್ ಕವರ್ ಮಾಡಲಾಗಿದ್ದ ವಿಂಡೋ ಪೋರ್ಚ್ ಮೇಲೆ ಬಿದ್ದಿದೆ.
ಅದೃಷ್ಟವಶಾತ್ ಸ್ಥಳೀಯರ ಸಹಾಯದಿಂದ ಮಗು ದೊಡ್ಡ ಅನಾಹುತವೊಂದು ತಪ್ಪಿದೆ.
ಮಗುವಿನ ರಕ್ಷಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಂಡೋ ಪೋರ್ಚ್ ಮೇಲೆ ಬಿದ್ದ ಮಗುವಿನ ರಕ್ಷಣೆಗೆ ದೌಡಾಯಿಸಿದ್ದ ಅಪಾರ್ಟ್‌ಮೆಂಟ್ ನಿವಾಸಿಗಳು ಮತ್ತೊಂದು ಕಿಟಕಿಯಿಂದ ಹೊರಬಂದು ಮಗುವನ್ನು ರಕ್ಷಿಸಿಲು ಹರಸಾಹನ ಪಟ್ಟರು.
ನಾಲ್ಕೈದು ಜನ ಕಿಟಕಿಯ ಹೊರ ಭಾಗದಲ್ಲಿರುವ ಸಣ್ಣ ಜಾಗದಲ್ಲಿ ನಿಂತು ಮಗುವಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ರಕ್ಷಿಸಿದ್ದಾರೆ. ಇನ್ನು ಕೆಳಗೆ ಅನೇಕ ಜನ ದೊಡ್ಡ ಬಟ್ಟೆಯೊಂದು ಹಿಡಿದು ಮಗುವಿನ ರಕ್ಷಣೆಗೆ ಸಹಾಯ ಮಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsAppGroup:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1