Abdullah Shafique: ಡಕ್​..ಡಕ್..ಡಕ್​..ಡಕ್…ಸೊನ್ನೆ ಸುತ್ತಿ ದಾಖಲೆ ಬರೆದ ಪಾಕ್ ಕ್ರಿಕೆಟಿಗ

ಹ್ಯಾಟ್ರಿಕ್ ಗೋಲ್ಡನ್ ಡಕ್ ಮೂಲಕ ಸೂರ್ಯಕುಮಾರ್ ಯಾದವ್ ದಾಖಲೆ ಬರೆದ ಬೆನ್ನಲ್ಲೇ, ಪಾಕಿಸ್ತಾನದ ಬ್ಯಾಟರ್​ ಅಬ್ದುಲ್ಲಾ ಶಫೀಕ್ ಸತತ ನಾಲ್ಕು ಬಾರಿ ಶೂನ್ಯಕ್ಕೆ ಔಟಾಗಿ ಅನಗತ್ಯ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.2020 ರಲ್ಲಿ ಪಾಕ್​ ತಂಡದಲ್ಲಿ ಸ್ಥಾನ ಪಡೆದಿದ್ದ ಅಬ್ದುಲ್ಲಾ ಶಫೀಕ್ ಚೊಚ್ಚಲ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಅಜೇಯ 41 ರನ್ ಬಾರಿಸಿ ಮಿಂಚಿದ್ದರು. ಇದಾದ ಬಳಿಕ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿ ನಿರಾಸೆ ಮೂಡಿಸಿದ್ದರು. ಇದಾದ ಬಳಿಕ ಅಫ್ಘಾನಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಡಕ್​ ಔಟ್ ಆಗಿದ್ದರು. ಆ ಬಳಿಕ ಶಫೀಕ್​ ರನ್ನು ತಂಡದಿಂದ ಕೈ ಬಿಡಲಾಗಿತ್ತು.ಅನಂತರ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಅಫ್ಘಾನಿಸ್ತಾನ್ ವಿರುದ್ಧದ ಸರಣಿಗೆ ಆಯ್ಕೆಯಾಗಿದ್ದರು. ಆದರೆ ಶಾರ್ಜಾದಲ್ಲಿ ನಡೆದ ಅಫ್ಘಾನ್ ವಿರುದ್ಧದ 2 ಪಂದ್ಯಗಳಲ್ಲೂ ಅಬ್ದುಲ್ಲಾ ಶಫೀಕ್ ಸೊನ್ನೆ ಸುತ್ತಿದ್ದಾರೆ. ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಬ್ಯಾಕ್ ಟು ಬ್ಯಾಕ್ 4 ಬಾರಿ ಶೂನ್ಯಕ್ಕೆ ಔಟಾದ ಆಟಗಾರ ಎಂಬ ದಾಖಲೆ ಅಬ್ದುಲ್ಲಾ ಶಫೀಕ್ ಪಾಲಾಗಿದೆ.ಇದಾಗ್ಯೂ ಅಬ್ದುಲ್ಲಾ ಶಫೀಕ್​ ಸೂರ್ಯಕುಮಾರ್ ಯಾದವ್ ಹೆಸರಿನಲ್ಲಿರುವ ಅನಗತ್ಯ ದಾಖಲೆಯಿಂದ ಪಾರಾಗಿದ್ದಾರೆ ಎನ್ನಬಹುದು. ಏಕೆಂದರೆ ಶಫೀಕ್ 4 ಬಾರಿ ಶೂನ್ಯಕ್ಕೆ ಔಟಾಗಿದ್ದರೂ ಗೋಲ್ಡನ್ ಡಕ್ ಆಗಿಲ್ಲ. ಅವರು ಅಫ್ಘಾನಿಸ್ತಾನ್ ವಿರುದ್ಧ ಮೊದಲ ಪಂದ್ಯದಲ್ಲಿ 2 ಎಸೆತಗಳನ್ನು ಎದುರಿಸಿದ್ದರು.ಅಂದರೆ ಬ್ಯಾಟರ್​ರೊಬ್ಬರು ಎದುರಿಸಿದ ಮೊದಲ ಎಸೆತದಲ್ಲೇ ಔಟಾದರೆ ಅದನ್ನು ಗೋಲ್ಡನ್ ಡಕ್ ಎಂದು ಪರಿಗಣಿಸಲಾಗುತ್ತದೆ. ಅದರಂತೆ ಕ್ರಿಕೆಟ್​ ಇತಿಹಾಸದಲ್ಲಿ ಹ್ಯಾಟ್ರಿಕ್ ಗೋಲ್ಡನ್ ಡಕ್​ಗೆ ಔಟಾದ ಹೀನಾಯ ದಾಖಲೆಯೊಂದು ಸೂರ್ಯಕುಮಾರ್ ಯಾದವ್ ಹೆಸರಿನಲ್ಲಿದೆ.ಇತ್ತ ಟಿ20 ಕ್ರಿಕೆಟ್​ನಲ್ಲಿ ಸತತ 4 ಬಾರಿ ಶೂನ್ಯಕ್ಕೆ ವಿಕೆಟ್ ಒಪ್ಪಿಸುವ ಮೂಲಕ ಅಬ್ದುಲ್ಲಾ ಶಫೀಕ್ ಇದೀಗ ಅನಗತ್ಯ ದಾಖಲೆಗಳ ಪುಟದಲ್ಲಿ ಹೊಸ ಅಧ್ಯಾಯ ಬರೆದಿರುವುದು ವಿಶೇಷ.

source https://tv9kannada.com/photo-gallery/cricket-photos/abdullah-shafique-first-to-register-four-consecutive-ducks-in-t20is-kannada-news-zp-au50-543941.html

Leave a Reply

Your email address will not be published. Required fields are marked *