![](https://samagrasuddi.co.in/wp-content/uploads/2024/06/image-55.png)
ಚಿತ್ರದುರ್ಗ: ನಗರದ ಪ್ರತಿಷ್ಠಿತ ಶಾಲೆಗಳಲ್ಲೊಂದಾದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ, ವಿದ್ಯಾರ್ಥಿಯಾದ ಅಭಯ್ ಸಿ ಐ ಇವರು 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625 ಕ್ಕೆ 623 ಅಂಕಗಳನ್ನು ಪಡೆದು ರಾಜ್ಯಕ್ಕೆ 3ನೇ ರ್ಯಾಂಕ್ ಪಡೆದಿರುತ್ತಾರೆ.
ಈ ಹಿಂದೆ 625ಕ್ಕೆ 620 ಅಂಕಗಳನ್ನು ಗಳಿಸಿ ಚಿತ್ರದುರ್ಗ ಜಿಲ್ಲೆಗೆ ಪ್ರಥಮ ರ್ಯಾಂಕ್ ಪಡೆದಿದ್ದರು. ಮರು ಮೌಲ್ಯಮಾಪನದಲ್ಲಿ 3 ಅಂಕಗಳನ್ನು ಹೆಚ್ಚು ಗಳಿಸಿ 623 ಅಂಕಗಳೊಂದಿಗೆ ರಾಜ್ಯಕ್ಕೆ ಮೂರನೇ ರ್ಯಾಂಕ್ ಪಡೆದ ಅಭಯ್.ಸಿ.ಐ ವಿದ್ಯಾರ್ಥಿಗೆ ಶಾಲಾ ಆಡಳಿತ ಮಂಡಳಿ ಹಾಗು ಶಿಕ್ಷಕ ವೃಂದದವರು ಅಭಿನಂದಿಸಿರುತ್ತಾರೆ.