ವಿದ್ಯಾರ್ಥಿಗಳ ಹಾಸ್ಟೆಲ್ ಪ್ರವೇಶಾತಿ ಆಯ್ಕೆ ಪ್ರಕ್ರಿಯೆಯಲ್ಲಿ ವಿಳಂಬ; ಎಬಿವಿಪಿ ಜಿಲ್ಲಾ ಘಟಕದಿಂದ ಪ್ರತಿಭಟನೆ.

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಗ್ರಾಮೀಣ ಭಾಗದಿಂದ ಬಡ ಮತ್ತು ಪ್ರತಿಭಾವಂತ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣವನ್ನು ಪಡೆಯಬೇಕೆಂಬ ಆಶಯವನ್ನ ಇಟ್ಟುಕೊಂಡು ನಗರ ಪ್ರದೇಶಗಳಿಗೆ ಬರುತ್ತಾರೆ, ಆ ವಿದ್ಯಾರ್ಥಿಗಳಿಗೆ ಸರ್ಕಾರಗಳು ಮೂಲಭೂತ ಸೌಲಭ್ಯಗಳನ್ನ ಒದಗಿಸುವುದು ಆದ್ಯ ಕರ್ತವ್ಯವಾಗಿದೆ, ಆದರೆ ಕರ್ನಾಟಕ ರಾಜ್ಯದಲ್ಲಿ ಕಾಲೇಜು ಮತ್ತು ಪ್ರೌಢ ಶಾಲೆಗಳು ಪ್ರಾರಂಭವಾದ ಮೂರು ತಿಂಗಳಗಳ ವರೆಗೆ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಾತಿ ಸಿಗುತ್ತಿಲ್ಲ, ಜೂನ್ ತಿಂಗಳಲ್ಲಿ ಶಾಲಾ- ಕಾಲೇಜುಗಳು ಪ್ರಾರಂಭವಾದರೂ ಸಹಿತ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಾತಿ ಸಿಗುವುದರಲ್ಲಿ ಸಪ್ಟಂಬರ್‍ವರೆಗೂ ತಲುಪುವ ಹಂತವನ್ನು ಸರ್ಕಾರ ಮತ್ತು ಅಧಿಕಾರಿಗಳು ಮಾಡುತ್ತಿರುವುದರಿಂದ ಸಾವಿರಾರು ವಿದ್ಯಾರ್ಥಿಗಳು ಮೂರು ತಿಂಗಳುಗಳ ಕಾಲ ಎಲ್ಲಿ ಉಳಿದುಕೊಂಡು ಶಿಕ್ಷಣವನ್ನ ಪಡೆಯಬೇಕು ಎಂಬುವ ಸಾಮಾನ್ಯಜ್ಞಾನವು ಸರ್ಕಾರಗಳಿಗೆ ಇಲ್ಲದಂತಾಗಿದೆ, ರಾಜ್ಯ ಸರ್ಕಾರಕೂಡಲೇ ಈ ವರ್ಷದ ಹಾಸ್ಟೆಲ್‍ಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ತಕ್ಷಣವೇ ಪೂರ್ಣಗೊಳಿಸಿ, ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಾತಿ ಕಲ್ಪಿಸಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತದೆ.

ಹಾಸ್ಟೆಲ್‍ಗಳಿಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಲ್ಲಿ 40% ವಿದ್ಯಾರ್ಥಿಗಳಿಗೆ ಮಾತ್ರ ವಸತಿ ನಿಲಯಗಳನ್ನ್ನು ಕಲ್ಪಿಸಿಕೊಡುವ ವ್ಯವಸ್ಥೆ ಈಗ ನಮ್ಮ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಲಭ್ಯವಿದೆ, ಆದರೆ ಇನ್ನುಳಿದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಈ ವ್ಯವಸ್ಥೆಯಿಂದ ವಂಚಿತರಾಗಿ ತಮ್ಮ ಉನ್ನತ ಶಿಕ್ಷಣವನ್ನ ಪಡೆಯಲು ಕಷ್ಟಕರವಾಗುತ್ತಿದೆ, ಸರ್ಕಾರ ಕೂಡಲೇ ಹಾಸ್ಟೆಲಗಳ ಸಂಖ್ಯೆಯನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ವಿಶೇಷ ಅನುದಾನವನ್ನ ನೀಡಿ ಹಾಸ್ಟೆಲ್‍ಗಳ ಸಂಖ್ಯೆಗಳನ್ನ ಹೆಚ್ಚಳ ಮಾಡಬೇಕು  ಹಾಗೂ ಈಗಿರುವ ಹಾಸ್ಟೆಲ್‍ಗಳಿಗೆ ಮೂಲಭೂತ ಸೌಲಭ್ಯವನ್ನು ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ಎಬಿವಿಪಿ ಒತ್ತಾಯಿಸುತ್ತದೆ.

ಲಕ್ಷಾಂತರ ಬಡ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನವನ್ನು ನಂಬಿ ಶಿಕ್ಷಣವನ್ನ ಪಡೆಯುತ್ತಿದ್ದಾರೆ, ತಮ್ಮ ಶಿಕ್ಷಣಕ್ಕೆ ಸರ್ಕಾರಗಳು ನೀಡುವ ವಿದ್ಯಾರ್ಥಿವೇತನ ಸಹಕಾರಿಯಾಗಲಿದೆ ಎಂಬ ಭಾವನೆಯೊಂದಿಗೆ ಅರ್ಜಿ ಸಲ್ಲಿಸಿದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಕಳೆದ ವರ್ಷದ ವಿದ್ಯಾರ್ಥಿವೇತನ ಜಮೆಯಾಗದೆ ಬಹಳಷಟ್ಟು ತೊಂದರೆಯನ್ನು ಅನುಭವಿಸುತ್ತಿದ್ದಾರೆ, ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನವನ್ನು ಕಡಿತಗೊಳಿಸಿರುವುದು, ವಿದ್ಯಾಸಿರಿ ವಿದ್ಯಾರ್ಥಿ ವೇತನ ಸರಿಯಾಗಿ ಜಮೆಯಾಗದೇ ಇರುವುದು, ರೈತ ವಿದ್ಯಾನಿಧಿಯನ್ನು ರದ್ದುಗೊಳಿಸಿರುವುದು, ಹಾಗೂ ಇನ್ನುಳಿದ ವಿದ್ಯಾರ್ಥಿ ವೇತನವು ಸರಿಯಾಗಿ ವಿದ್ಯಾರ್ಥಿಗಳಿಗೆ ಜಮೆ ಮಾಡದೆ ವಿದ್ಯಾರ್ಥಿ ವಿರೋಧಿ ನೀತಿಯನ್ನು ಅನುಸರಿಸುತ್ತಿರುವ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಸಂಬಂಧಿಸಿದ ಸಚಿವರು ತಕ್ಷಣವೇ ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳ ಖಾತೆಗೆ ಜಮೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ವಿದ್ಯಾರ್ಥಿ ಪರಿಷತ್‍ ಆಗ್ರಹಿಸುತ್ತದೆ.

ಹಾಸ್ಟೆಲ್‍ಗಳಿಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನುಕೂಡಲೇ ಪೂರ್ಣಗೊಳಿಸಿ ಹಾಸ್ಟೆಲ್‍ಗಳಿಗೆ ಪ್ರವೇಶಾತಿ ನೀಡಬೇಕು.ರಾಜ್ಯದಲ್ಲಿ ಸಮಾಜಕಲ್ಯಾಣ ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ಇಲಾಖೆಗಳ ಹಾಸ್ಟೆಲ್‍ಗಳ ಸಂಖ್ಯೆಯನ್ನು ಹೆಚ್ಚಳ ಮಾಡಬೇಕು. ಬಾಕಿ ಉಳಿದಿರುವ ಹಿಂದಿನ ವರ್ಷದ ವಿದ್ಯಾರ್ಥಿ ವೇತನವನ್ನು ತಕ್ಷಣವೇ ವಿದ್ಯಾರ್ಥಿಗಳ ಖಾತೆಗೆ ಜಮೆ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಲಾಯಿತು,

ಈ ಸಂದರ್ಭದಲ್ಲಿ ನಗರ ಕಾರ್ಯದರ್ಶಿ ಗೋಪಿ, ಸಾಮಾಜಿಕ ಜಾಲತಾಣ ಚಿತ್ರಸ್ವಾಮಿ, ಸುದೀಪ್ ಹಾಸ್ಟೆಲ್ ಪ್ರಮುಖ್, ಸಿದ್ದೇಶ್, ಕಾರ್ಯಕರ್ತರು ಮಧು, ಸಂಜು, ತಿಪ್ಪೇಶ, ದರ್ಶನ್, ಮನೋಜ್, ಜೀವನ್ ಹಾಗೂ ಇನ್ನು ಇತರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *