ಹೊಸ ವಿಶ್ವವಿದ್ಯಾಲಯಗಳನ್ನುಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಎಬಿವಿಪಿಯಿಂದ ತೀವ್ರ ಖಂಡನೆ.

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ ಫೇ. 17: ರಾಜ್ಯದ 9 ವಿಶ್ವ ವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯ ಸರ್ಕಾರ ಕೂಡಲೇ ವಿಶ್ವವಿದ್ಯಾಲಯಗಳನ್ನ ಮುಚ್ಚುವ ನಿರ್ಧಾರದಿಂದ ಹಿಂದೆ ಸರಿದು ವಿಶ್ವವಿದ್ಯಾಲಯಗಳ ಮೂಲಭೂತ ಸೌಲಭ್ಯಕ್ಕೆ ಅನುದಾನವನ್ನು ನೀಡಿ ವಿಶ್ವವಿದ್ಯಾಲಯಗಳ ಉನ್ನತೀಕರಣಕ್ಕಾಗಿ ಅನುದಾನ ನೀಡುವಂತೆ ಮನವಿ ಮಾಡಿದೆ.

ಜಿಲ್ಲಾಧಿಕಾರಿಗಳು ಮುಖಾಂತರ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉನ್ನತ ಶಿಕ್ಷಣ ಸಚಿವರಾದ ಎಂ.ಸಿ.ಸುಧಾಕರ್‌ರವರಿಗೆ ಮನವಿ ಸಲ್ಲಿಸಿ ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಯ ಕೇಂದ್ರಗಳು ಅಲ್ಲಿಂದ ಹೊರಡುವ ವಿದ್ಯಾರ್ಥಿಗಳು ದೇಶದ ಅಭಿವೃದ್ಧಿಗೆ ಪೂರಕವಾಗಿಕಾರ್ಯನಿರ್ವಹಿಸುವ ವ್ಯಕ್ತಿಗಳಾಗುತ್ತಾರೆ, ಅಂತಹ ವಿಶ್ವವಿದ್ಯಾಲಯಗಳಿಗೆ ಮೂಲಭೂತ ಸೌಲಭ್ಯಗಳನ್ನ ನೀಡುವುದು ಸರ್ಕಾರಗಳ ಆದ್ಯಕರ್ತವ್ಯ, ಆದರೆ ಕರ್ನಾಟಕ ರಾಜ್ಯದಲ್ಲಿ ಹಿಂದಿನ ಸರ್ಕಾರ ಘೋಷಣೆ ಮಾಡಿದ್ದ ಹೊಸ ವಿಶ್ವವಿದ್ಯಾಲಯಗಳನ್ನು ಇಂದಿನ ರಾಜ್ಯ ಸರ್ಕಾರ ಮುಚ್ಚಲು ಹೊರಟಿರುವುದನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತೀವ್ರವಾಗಿ ಖಂಡಿಸಿದೆ.

ಕರ್ನಾಟಕ ರಾಜ್ಯದ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ ಅವರ ನೇತೃತ್ವದ ಸಚಿವ ಸಂಪುಟದ ಉಪಸಮಿತಿಯು
ಆರ್ಥಿಕ ಹಾಗೂ ಮೂಲಭೂತ ಸೌಲಭ್ಯಗಳ ನೆಪವನ್ನು ಹೇಳಿ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವುದು ಶಿಕ್ಷಣ ವಿರೋಧಿ
ನೀತಿಯಾಗಿದೆ.ಸರ್ಕಾರಗಳು ವಿಶ್ವವಿದ್ಯಾಲಯಗಳ ಸ್ಥಾಪನೆ ಹಾಗೂ ಮುಚ್ಚುವ ಮನಸೋ ಇಚ್ಛೆ ಕಾರ್ಯದಿಂದ ವಿಶ್ವವಿದ್ಯಾಲಯಗಳ
ಮೇಲೆ ಮತ್ತು ಶೈಕ್ಷಣಿಕ ಕ್ಷೇತ್ರದ ಮೇಲೆ ಇರುವ ವಿಶ್ವಾಸಾರ್ಹತೆ ಕಡಿಮೆಯಾಗುತ್ತದೆ. ವಿಶ್ವವಿದ್ಯಾಲಯಗಳ ಕುರಿತುಯಾವುದೇ
ನಿರ್ಣಯಗಳನ್ನ ತೆಗೆದುಕೊಳ್ಳಬೇಕಾದರೆ ಶಿಕ್ಷಣ ತಜ್ಞರ ಸಲಹೆಗಳನ್ನು ತೆಗೆದುಕೊಳ್ಳಬೇಕೆ ಹೊರತು ರಾಜಕೀಯ ಕೇಂದ್ರಿತ
ನಿರ್ಧಾರಗಳು ಆಗಬಾರದು ಎಂಬುದು ಎಬಿವಿಪಿಯ ಆಶಯಾಗಿದೆ.


ಸಾಮಾನ್ಯವಾಗಿ 10,000 ವಿದ್ಯಾರ್ಥಿಗಳಿಗೆ ಒಂದು ವಿಶ್ವವಿದ್ಯಾಲಯಗಳು ಇರಬೇಕೆಂಬುವುದು ಆದರ್ಶವಾದ ವಿಚಾರವಾಗಿದೆ.ಆದರೆ
ನಮ್ಮಲ್ಲಿರುವ ವಿದ್ಯಾರ್ಥಿಗಳ ಸಂಖ್ಯೆಗೆ ಹೋಲಿಕೆ ಮಾಡಿದರೆ ಈಗಿರುವ ವಿಶ್ವವಿದ್ಯಾಲಯಗಳ ಸಂಖ್ಯೆ ಕಡಿಮೆ ಇದೆ. ವಿದ್ಯಾರ್ಥಿಗಳ
ಅಂಕಪಟ್ಟಿ, ಪ್ರಮಾಣ ಪತ್ರ, ಹಾಗೂ ಇನ್ನಿತರ ಸಮಸ್ಯೆಗಳ ಪರಿಹಾರಕ್ಕೆ ಸುಮಾರು 200 ಕಿಮೀ ವಿಧ್ಯಾರ್ಥಿಗಳು ಪ್ರಯಾಣ
ಮಾಡಬೇಕು,ಇಂತಹ ಸಮಸ್ಯೆ ಪರಿಹಾರಕ್ಕೆ ಹೊಸ ವಿವಿಗಳು ಸಹಕಾರಿಯಾಗಬೇಕು, ಯಾವುದೇ ಸರ್ಕಾರಗಳು ಘೋಷಣೆ ಮಾಡಿದ
ವಿಶ್ವವಿದ್ಯಾಲಯಗಳನ್ನು ಅಭಿವೃದ್ಧಿಪಡಿಸಬೇಕೆ ಹೊರತು ಅತಂತ್ರಗೊಳಿಸಬಾರದು, ರಾಜ್ಯದಲ್ಲಿ ಆಳ್ವಿಕೆ ಮಾಡುತ್ತಿರುವ ರಾಜ್ಯ
ಸರ್ಕಾರ ಎರಡು ವಷ ಕಳೆದರೂ ಸಹಿತ ವಿಶ್ವವಿದ್ಯಾಲಯಗಳ ಅಭಿವೃದ್ಧಿ ಕಿಂಚಿತ್ತುಗಮನಕೊಡದೆ ಈಗ ಮೂಲಭೂತ ಸೌಲಭ್ಯಗಳ
ನೆಪವೊಡ್ಡಿ ಮುಚ್ಚುತ್ತಿರುವುದನ್ನು ನೋಡಿದರೆ ಸರ್ಕಾರ ವಿದ್ಯಾರ್ಥಿ ವಿರೋಧಿ,ಶಿಕ್ಷಣ ವಿರೋಧಿ ನೀತಿಯನ್ನುಅನುಸರಿಸುತ್ತಿರುವುದು
ಸ್ಪಷ್ಟವಾಗಿ ಕಾಣುತ್ತಿದೆ.

ರಾಜ್ಯ ಸರ್ಕಾರ ಕೂಡಲೇ ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರದಿಂದ ಹಿಂದೆ ಸರಿದು ವಿಶ್ವವಿದ್ಯಾಲಯಗಳ ಮೂಲಭೂತ ಸೌಲಭ್ಯಕ್ಕೆಅನುದಾನವನ್ನು ನೀಡಿ ವಿಶ್ವವಿದ್ಯಾಲಯಗಳ ಉನ್ನತೀಕರಣಕ್ಕಾಗಿ ಅನುದಾನ ನೀಡುವಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯ ಸರ್ಕಾರಕ್ಕೆಆಗ್ರಹಿಸುತ್ತದೆ.


ಈ ಸಂದರ್ಭದಲ್ಲಿ ಕನಕರಾಜ್ ಕೋಡಿಹಳ್ಳಿ ಜಿಲ್ಲಾ ಸಂಚಾಲಕರು, ತಿಪ್ಪೇಶ್.ಜೆ.ಎಸ್ ಜಿಲ್ಲಾ ಸಹ ಸಂಚಾಲಕರು, ಪ್ರೀತಮ್,
ಚಂದ್ರಕಲಾ ರಾಜ್ಯ ಕಾರ್ಯಕಾರಿಣಿ ಸದಸ್ಯರು, ಮನೋಜ್, ಮಹೇಶ್, ಗೌರಿಶಂಕರ್, ಮನು ಮತ್ತು ಎಬಿವಿಬಿ ಮುಖಂಡರು
ಭಾಗವಹಿಸಿದ್ದರು.

Leave a Reply

Your email address will not be published. Required fields are marked *