Nagabhushana Car Accident: ಕೌಸಲ್ಯಾ ಸುಪ್ರಜಾ ರಾಮ ಸಿನಿಮಾದಲ್ಲಿ ಮಿಂಚಿದ್ದ ನಟ ನಾಗಭೂಷಣ ಕಾರು ಡಿಕ್ಕಿ ಹೊಡೆದು ಮಹಿಳೆ ಸಾವನ್ನಪ್ಪಿದ್ದಾರೆ. ಸದ್ಯ ಇವರ ವಿರುದ್ಧ ಕೇಸ್ ದಾಖಲಾಗಿದೆ.

Actor Nagabhushana: ನಟ ನಾಗಭೂಷನ ಇತ್ತೀಚಿಗಷ್ಟೇ ಕೌಸಲ್ಯಾ ಸುಪ್ರಜಾ ರಾಮ ಸಿನಿಮಾದಲ್ಲಿ ಡಾರ್ಲಿಂಗ್ ಕೃಷ್ಣ ಅವರ ಜೊತೆ ನಟಿಸಿ ಅಭಿಮಾನಿಗಳ ಗಮನ ಸೆಳೆದಿದ್ದರು. ಇದೀಗ ನಟ ನಾಗಭೂಷನ್ ವಿರುದ್ಧ ಹಿಟ್ & ರನ್ ಆರೋಪ ಕೇಳಿಬರುತ್ತಿದೆ.
ನಟ ಖಾಸಗಿ ವಾಹಿನಿಯ ಕಾರ್ಯಕ್ರಮ ಮುಗಿಸಿ ಉತ್ತರಹಳ್ಳಿಯಿಂದ ಕೋಣನಕುಂಟೆ ಕ್ರಾಸ್ ದಾರಿಯ ಮಧ್ಯೆ ಸಂಚರಿಸುವಾಗ ಈ ಅಪಘಾತ ನಡೆದಿದ್ದು, ಮಹಿಳೆ ಸಾವನ್ನಪ್ಪಿದ್ದಾರೆ. ಇನ್ನೊಬ್ಬರಿಗೆ ಗಂಭಿರ ಗಾಯವಾಗಿದೆ. ಶನಿವಾರ ಅಕ್ಟೋಬರ್ 30ರಂದು ರಾತ್ರಿ ಈ ಘಟನೆ ನಡೆದಿದೆ.
ನಾಗಭೂಷನ್ ಕಾರನ್ನು ವೇಗವಾಗಿ ಡ್ರೈವ್ ಮಾಡಿಕೊಂಡುಬಂದು ಫುಟ್ಪಾತ್ನಲ್ಲಿ ಹೋಗುತ್ತಿದ್ದ ಶ್ರೀ ಕೃಷ್ಣ ಬಿ (58) ಹಾಗೂ ಪ್ರೇಮ. ಎಸ್(48) ಅವರಿಗೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತಕ್ಕೀಡಾದ ಗಾಯಾಳುಗಳನ್ನು ನಾಗಭೂಷನ್ ರಾತ್ರಿಯೇ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಪ್ರೇಮ. ಎಸ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಸದ್ಯ ಈ ಬಗ್ಗೆ ಕುಮಾರಸ್ವಾಮಿ ಸಂಚಾರಿ ಪೋಲಿಸ್ ಠಾಣೆಯಲ್ಲಿ ಪಾರ್ಥ ಎಂಬುವವರಿಂದ ಕೇಸ್ ದಾಖಲಾಗಿದೆ. ಇನ್ನೂ ಇತ್ತೀಚೆಗಷ್ಟೇ ಕೌಸಲ್ಯಾ ಸುಪ್ರಜಾ ರಾಮ ಸಿನಿಮಾ ಮೂಲಕ ಕನ್ನಡ ಅಭಿಮಾನಿಗಳ ಹೃದಯ ಗೆದ್ದಿದ್ದ ನಟ ಆದರೆ ಅದರ ಬೆನ್ನಲೇ ಈ ಅಪಘಾತವಾಗಿದ್ದು ದುರದೃಷ್ಟಕರ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group : https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharechat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1