ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಡಿ. 11 ಕರ್ನಾಟಕ ವಿಧಾನ ಪರಿಷತ್‍ಗೆ ಆಗ್ನೆಯ ಪದವೀಧರರ ಕ್ಷೇತ್ರದಿಂದ ಮುಂದಿನ ವರ್ಷ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಬಯಸಿ ಮುಸ್ಲಿಂ ಸಮಾಜದ ಹಿರಿಯ ಮುಖಂಡ ಹಾಗೂ ಶಿಕ್ಷಣ ಇಲಾಖೆಯ ನಿವೃತ್ತ ಅಧಿಕಾರಿ ಸೈಯದ್ ಅಫಾಖ್ ಅಹಮದ್ ಶುಕ್ರವಾರದಂದು ಅರ್ಜಿ ಸಲ್ಲಿಸಿದರು.
ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ತಮ್ಮ ಬೆಂಬಲಿಗರೊಂದಿಗೆ ಆಗಮಿಸಿದ ಸೈಯದ್ ಅಫಾಖ್ ಅಹಮದ್ ಅವರು, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ.ಕೆ. ತಾಜ್‍ಪೀರ್ ಅವರಿಗೆ ಅಧಿಕೃತವಾಗಿ ಆಗ್ನೆಯ ಪದವೀಧರರ ಚುನಾವಣೆಯಲ್ಲಿ ಟಿಕೆಟ್ ನೀಡುವಂತೆ ಕೋರಿ ಅರ್ಜಿಯನ್ನು ಸಲ್ಲಿಸಿದರು. ಅರ್ಜಿ ಸ್ವೀಕರಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ.ಕೆ. ತಾಜ್‍ಪೀರ್ ಕಾಂಗ್ರೆಸ್ ಪಕ್ಷದಲ್ಲಿ ಆಕಾಂಕ್ಷಿಗಳ ಸಂಖ್ಯೆ ಸಹಜವಾಗಿ ಹೆಚ್ಚುತ್ತಲೇ ಹೋಗುತ್ತದೆ.
ಚುನಾವಣೆಯಲ್ಲಿ ಸ್ಪರ್ಧೆ ಮಾಡಲು, ಟಿಕೆಟ್ ಕೇಳಲು ಎಲ್ಲರಿಗೂ ಹಕ್ಕಿದೆ. ಆದರೆ ಅಂತಿಮವಾಗಿ ಹೈಕ ಮಾಂಡ್ ತೀರ್ಮಾನ ಕೈಗೊಳ್ಳುತ್ತದೆ. ಪಕ್ಷದ ತೀರ್ಮಾನಕ್ಕೆಎಲ್ಲರೂ ಬದ್ದರಾಗಬೇಕು ಎಂದು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸೈಯದ್ ಅಫಾಖ್ ಆಹಮದ್ ಶಿಕ್ಷಣ ಇಲಾಖೆಯಲ್ಲಿ 1993 ರಿಂದ 2023 ಜನವರಿ ವರೆಗೆ ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳಲ್ಲಿ ಶಿಕ್ಷಣ ಇಲಾಖೆಯಲ್ಲಿ ಸೇವೆ 30 ವರ್ಷಗಳ ಸೇವೆ ಸಲ್ಲಿಸಿದ್ದು, ಆಗ್ನೇಯ ಶಿಕ್ಷಕರ ಕ್ಷೇತ್ರದ 2024ರ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಶಿಕ್ಷಕರ ವಿಭಾಗದ ಮಾಜಿ ಉಪಾಧ್ಯಕ್ಷರಾಗಿ ಅಲ್ಪಸಂಖ್ಯಾತ ಆಯೋಗದ ಜಿಲ್ಲಾ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದೇನೆ ಚಿತ್ರದುರ್ಗ ದಾವಣಗೆರೆ ಕೋಲಾರ ತುಮಕೂರು ಬಹಳಷ್ಟು ಅಲ್ಪಸಂಖ್ಯಾತರ ವರ್ಗದ ಪದವೀದರರು ನೊಂದಣಿ ಆಗಿರುವುದರಿಂದ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ನನಗೆ ಅವಕಾಶ ನೀಡಬೇಕು, ಕಾಂಗ್ರೆಸ್ ಪಕ್ಷದ ನಿಷ್ಠೆ ಮತ್ತು ಪ್ರಮಾಣಿಕತೆಯ ಕಾರ್ಯಕರ್ತನಾಗಿದ್ದು ಸ್ಥಳೀಯನಾಗಿರುವ ನನ್ನ ಸೇವೆಯನ್ನು ಗುರುತಿಸಿ 2026ನೇ ಸಾಲಿನ ಕರ್ನಾಟಕ ವಿಧಾನ ಪರಿಷತ್ ಚಿತ್ರಮರ್ಗ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿಕೇಟ್ ನೀಡಿ ಇನ್ನು ಹೆಚ್ಚಿನ ಸೇವೆ ಮಾಡಲು ಅವಕಾಶ ಮಾಡಿಕೊಡಬೇಕಾಗಿ ಮನವಿ ಮಾಡಿದರು.
ಕನ್ನಡ ಸಾಹಿತ್ಯ ಪರಿಷತ್ ಮತ್ತು ಕರ್ನಾಟಕ ವಿಜ್ಞಾನ ಪರಿಷತ್ ಅಜೀವ ಸದಸ್ಯತ್ವರಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಲಿಫಿಕ ನೌಕರರ ಸಂಘದ ಉಪಾಧ್ಯಕ್ಷರಾಗಿ, ಅಹಿಂದ ನೌಕರರ ಸಂಘದಲ್ಲಿ ಉಪಾಧ್ಯಕ್ಷನಾಗಿ ಕರ್ನಾಟಕ ಕ್ಸ್ ಬೋರ್ಡ್ ನಲ್ಲಿ ವಿವಿಧ ಸಂಸ್ಥೆಗಳಲ್ಲಿ ಆಡಳಿತಾಧಿಕಾರಿಯಾಗಿ ಮುಸ್ಲಿಂ ಗ್ರಾಜುಯೋಟ್ ನೌಕರರ ಸಂಘದಲ್ಲಿ ಉಪಾಧ್ಯಕ್ಷನಾಗಿ ಅಲ್ಪಸಂಖ್ಯಾತರ ಆಯೋಗದ ಜಿಲ್ಲಾ ಸಮಿತಿ ಸದಸ್ಯನಾಗಿ ಸೇವೆ ಸಲ್ಲಿಸಿದ್ದೇನೆ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿಗಳಾದ ಡಿ.ಎನ್.ಮೈಲಾರಪ್ಪ, ಕೆ.ಪಿ.ಸಂಪತ್‍ಕುಮಾರ್, ಗ್ಯಾರೆಂಟಿ ಯೋಜನೆಗಳ ಅನಷ್ಟಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಗಂಜಿಗಟ್ಟೆ ಶಿವಣ್ಣ, ಜಿಲ್ಲಾಕಾಂಗ್ರೆಸ್ ಹಿಂದುಳಿದ ವಿಭಾಗದ ಅಧ್ಯಕ್ಷ ಎನ್.ಡಿ.ಕುಮಾರ್, ಹಸೀಬ್ ಅಹಮದ್‍ಜುನೈದಿ, ಶಬ್ಬಿರ್, ಪುರುಷೋತ್ತಮ್ ನಾಯ್ಕ ಹಾಜರಿದ್ದರು.