ಬೆಂಗಳೂರು, ಜೂನ್ 10: ನರೇಂದ್ರ ಮೋದಿ ಅವರು ಭಾನುವಾರ ಪ್ರಧಾನ ಮಂತ್ರಿಯಾಗಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದರು. ಮೋದಿ ಜೊತೆಗೆ ಹಲವು ಸಂಸದರು ಸಹ ಕ್ಯಾಬಿನೆಟ್ ಹಾಗೂ ರಾಜ್ಯ ಖಾತೆ ಸಚಿವರೂ ಸಹ ಪ್ರಮಾಣವಚನ ಸ್ವೀಕರಿಸಿದ್ದರು.

ನರೇಂದ್ರ ಮೋದಿ ಅವರ ಕ್ಯಾಬಿನೆಟ್ ನಲ್ಲಿ ಕರ್ನಾಟಕದ ಐವರಿಗೆ ಅವಕಾಶವನ್ನ ನೀಡಿಲಾಗಿದೆ. ಇದೀಗ ಖಾತೆ ಹಂಚಿಕೆ ಮಾಡಲಾಗಿದ್ದು,ನಿರ್ಮಲಾ ಸೀತಾರಾಮನ್, ಎಚ್ಡಿ ಕುಮಾರಸ್ವಾಮಿ ಹಾಗೂ ಪ್ರಹ್ಲಾದ್ ಜೋಶಿ ಅವರಿಗೆ ಕ್ಯಾಬಿನೆಟ್ ದರ್ಜೆಯ ಖಾತೆಯನ್ನ ನೀಡಲಾಗಿದೆ. ಇನ್ನೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಕೃಷಿ ಖಾತೆ ಸಿಗಲಿದೆ ಎನ್ನಲಾಗಿತ್ತು. ಆದರೆ, ಕೃಷಿ ಖಾತೆ ಮಿಸ್ ಆಗಿದ್ದು ಕುಮಾರಸ್ವಾಮಿ ಅವರಿಗೆ ನಿರಾಸೆಯಾಗಿದೆ.
ನರೇಂದ್ರ ಮೋದಿ ಸಂಪುಟದಲ್ಲಿ ಈ ಬಾರಿ ಕರ್ನಾಟಕದಿಂದ ಆಯ್ಕೆಯಾದ ಐವರಿಗೆ ಮಂತ್ರಿ ಸ್ಥಾನ ಸಿಕ್ಕಿದೆ. ಮೂವರಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ಸಿಕ್ಕರೆ, ಇನ್ನುಳಿದ ಇಬ್ಬರಿಗೆ ರಾಜ್ಯ ಖಾತೆ ಸಿಕ್ಕಿದೆ. ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್, ಧಾರವಾಡದ ಪ್ರಲ್ಹಾದ್ ಜೋಶಿ, ಮಂಡ್ಯದ ಎಚ್ಡಿ ಕುಮಾರಸ್ವಾಮಿ ಅವರಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ಸಿಕ್ಕಿದ್ದರೆ, ಬೆಂಗಳೂರು ಉತ್ತರ ಕ್ಷೇತ್ರದ ಶೋಭಾ ಕರಂದ್ಲಾಜೆ ಹಾಗೂ ತುಮಕೂರು ಕ್ಷೇತ್ರದ ವಿ ಸೋಮಣ್ಣ ಅವರಿಗೆ ರಾಜ್ಯ ಖಾತೆ ಸಚಿವ ಸ್ಥಾನ ಸಿಕ್ಕಿದೆ.
ಹೆಚ್ ಡಿ ಕುಮಾರಸ್ವಾಮಿ
ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಭರ್ಜರಿ ಗೆಲುವು ಸಾಧಿಸಿದ್ದು, ಮೋದಿ ಸಂಪುಟದಲ್ಲಿ ಮಂತ್ರಿಯಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮಂಡ್ಯ ಸಂಸದ ಎಚ್ಡಿ ಕುಮಾರಸ್ವಾಮಿ ಅವರು ಮೋದಿ ಸರ್ಕಾರದಲ್ಲಿ ಕ್ಯಾಬಿನೆಟ್ ದರ್ಜೆ ಸಚಿವರಾಗಿದ್ದು, ಕುಮಾರಸ್ವಾಮಿ ಅವರ ಬಯಸಿದಂತೆ ಕೃಷಿ ಖಾತೆ ಸಿಗದೆ ನಿರಾಸೆಯಾಗಿದ್ದು, ಕುಮಾರಸ್ವಾಮಿ ಅವರಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ನೀಡಲಾಗಿದೆ.
ನಿರ್ಮಲಾ ಸೀತಾರಾಮನ್
ಕರ್ನಾಟಕ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಅವರೂ ಸಹ ಪ್ರಧಾನಿ ನರೇಂದ್ರ ಮೋದಿ ಕ್ಯಾಬಿನೆಟ್ ನಲ್ಲಿ ಎರಡನೇ ಬಾರಿಗೆ ಅವಕಾಶ ಗಿಟ್ಟಿಸಿಕೊಂಡಿದ್ದು, ಈ ಬಾರಿಯೂ ಸಹ ಅವರಿಗೆ ಹಣಕಾಸು ಇಲಾಖೆ ನೀಡಲಾಗಿದೆ. ಕಳೆದ ಬಾರಿ ಸರ್ಕಾರದಲ್ಲೂ ನಿರ್ಮಲಾ ಸೀತಾರಾಮಾನ್ ಅವರು ಹಣಕಾಸು ಇಲಾಖೆ ಖಾತೆ ಸಚಿವೆಯಾಗಿದ್ದರು.
ಪ್ರಹ್ಲಾದ್ ಜೋಶಿ
ಕಳೆದ ಬಾರಿ ಮೋದಿ ಸಂಪುಟದಲ್ಲಿ ಸಂಸದೀಯ ವ್ಯವಹಾರ ಖಾತೆ ಸಚಿವರಾಗಿದ್ದ ಪ್ರಹ್ಲಾದ್ ಜೋಶಿ ಅವರಿಗೆ ಮಹತ್ವದ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ನೀಡಲಾಗಿದೆ. ಇದರ ಜೊತೆಗೆ ನವೀಕರಿಸಬಹುದಾದ ಇಂಧನ ಇಲಾಖೆಯ ಜವಾಬ್ದಾರಿ ಸಹ ನೀಡಲಾಗಿದೆ.
ಶೋಭಾ ಕರಂದ್ಲಾಜೆ
ಬೆಂಗಳೂರು ಉತ್ತರದಿಂದ ಗೆದ್ದು ಮೋದಿ ಸರ್ಕಾರದಲ್ಲಿ ರಾಜ್ಯ ಖಾತೆ ಸಚಿವೆಯಾಗಿರುವ ಶೋಭಾ ಕರಂದ್ಲಾಜೆ ಅವರು ಕಳೆದ ಬಾರಿ ಸರ್ಕಾರದಲ್ಲಿ ರಾಜ್ಯ ಕೃಷಿ ಖಾತೆ ನೀಡಲಾಗಿತ್ತು. ಇದೀಗ ಸೂಕ್ಷ್ಮ, ಸಣ್ಣ ,ಮಧ್ಯಮ ಕೈಗಾರಿಕೆ ರಾಜ್ಯ ಖಾತೆ ನೀಡಲಾಗಿದೆ.
ವಿ ಸೋಮಣ್ಣ
ತುಮಕೂರು ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿ ಮೋದಿ ಸಂಪುಟದಲ್ಲಿ ಮೊದಲ ಬಾರಿಗೆ ಮಂತ್ರಿಯಾಗಿರುವ ವಿ ಸೋಮಣ್ಣ ಅವರಿಗೆ ಜಲ ಶಕ್ತಿ ರಾಜ್ಯ ಖಾತೆ ಮತ್ತು ರೈಲ್ವೆ ಸಚಿವಾಲಯದ ರಾಜ್ಯ ಖಾತೆ ನೀಡಲಾಗಿದೆ.
Views: 0