ಚಿತ್ರದುರ್ಗ ನ. 11
ಪೋಟೋ ಮತ್ತು ವರದಿ ಸುರೇಶ್ ಪಟ್ಟಣ್
ಕರ್ನಾಟಕ ರಾಜ್ಯಕ್ಕೆ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಗಳು, ಪಾರ್ಲಿಮೆಂಟ್‍ನ ವಿರೋಧ ಪಕ್ಷದ ಉಪ ನಾಯಕರಾದ ಅಖೀಲೇಶ್ ಯಾದವ್ ಭೇಟಿ ನೀಡಲಿದ್ದಾರೆ ಎಂದು ಸಮಾಜವಾದಿ ಪಾರ್ಟಿಯ ಜಿಲ್ಲಾಧ್ಯಕ್ಷರಾದ ಲಕ್ಷ್ಮೀಕಾಂತ್ ತಿಳಿಸಿದ್ದಾರೆ.
ಚಿತ್ರದುರ್ಗ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಟಿಯಲ್ಲಿ ಈ ಮಾಹಿತಿ ನೀಡಿದ ಅವರು, ಕರ್ನಾಟಕ ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸುವ ಸಲುವಾಗಿ ಹಿಂದುಳಿದ ಅಲ್ಪ ಸಂಖ್ಯಾತ ಹಾಗೂ ದಲಿತರನ್ನು ಜಾಗೃತಿ ಮಾಡುವ ಸಲುವಾಗಿ ಆಗಮಿಸುತ್ತಿದ್ದ ಹಾಗೂ ಮುಂಬರುವ ಆಗ್ನೇಯ ಪದವೀಧರ, ಸ್ಥಳಿಯ ಹಾಗೂ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ನಮ್ಮ ಪಕ್ಷದಿಂದ ಸ್ಪರ್ದೆ ಮಾಡುವ ಸಲುವಾಗಿ ಪಕ್ಷದ ಕಾರ್ಯಕರ್ತರಲ್ಲಿ ಜಾಗೃತಿಯನ್ನು ಮೂಡಿಸಲುವ ಸಲುವಾಗಿ ಆಗಮಿಸುತ್ತಿದ್ದಾರೆ ಎಂದರು.
ನ. 15ರ ಸಂಜೆ ಬೆಂಗಳೂರನ್ನು ತಲುಪಲಿರುವ ಅಖೀಲೇಶ್ ಯಾದವ್ ನ. 16ರ ಭಾನುವಾರ ಚಿತ್ರದುರ್ಗಕ್ಕೆ ಭೇಟಿ ನೀಡಲಿದ್ದಾರೆ. ಅಂದು ಅವರು ಸಮಾಜವಾದಿ ಪಾರ್ಟಿಯ ರಾಜ್ಯಾಧ್ಯಕ್ಷರಾದ ಮಂಜಪ್ಪರವರ ನಿವಾಸಕ್ಕೆ ಭೇಟಿ ನೀಡಿ ತದ ನಂತರ ಪಕ್ಷದ ಕಾರ್ಯಕರ್ತರ ಜೊತೆಯಲ್ಲಿ ಸಮಾಲೋಚನೆಯನ್ನು ನಡೆಸಲಿದ್ದಾರೆ ಎಂದು ತಿಳಿಸಿದರು.
ಗೋಷ್ಟಿಯಲ್ಲಿ ಚಿತ್ರದುರ್ಗ ಎಸ್.ಸಿ.ಘಟಕದ ಅಧ್ಯಕ್ಷರಾದ ರವಿ, ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷ ಮೆಹಬೂಬ್ ಪಾಷ ಹೊಸದುರ್ಗ ತಾಲ್ಲೂಕು ಅಧ್ಯಕ್ಷರಾದ ನಾಗರಾಜ್ ಉಪಸ್ಥಿತರಿದ್ದರು
Views: 20