ಅಖಿಲ ಭಾರತ 13ನೆಯ ಶರಣ ಸಾಹಿತ್ಯ ಸಮ್ಮೇಳನ.

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ ಡಿ. 24 ದಿನಾಂಕ 18 ಮತ್ತು 19, ಜನವರಿ, 2025ರಂದು ಚಿತ್ರದುರ್ಗದಲ್ಲಿ ಅಖಿಲ ಭಾರತ 13ನೆಯ ಶರಣ ಸಾಹಿತ್ಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್‍ನ ಅಧ್ಯಕ್ಷರಾದ ಕೆ.ಎಂ.ವಿರೇಶ್ ತಿಳಿಸಿದ್ದಾರೆ.

ಅಖಿಲ ಭಾರತ 13ನೆಯ ಶರಣ ಸಾಹಿತ್ಯ ಸಮ್ಮೇಳನವು ಚಿತ್ರದುರ್ಗದ ಮುರುಘಾಮಠದ ಅನುಭವ ಮಂಟಪದಲ್ಲಿ ನಡೆಯಲಿದೆ,
ಸಮ್ಮೇಳನದ ಅಂಗವಾಗಿ ಡಿ. 27 ರ ಶುಕ್ರವಾರ ಸಂಜೆ 5 ಗಂಟೆಗೆ ಸಮ್ಮೇಳನ ಕಾರ್ಯಕ್ರಮದ ರೂಪುರೇಷೆಗಳ ಸಿದ್ದತೆಗಾಗಿ
ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ, ಈ ಸಭೆಗೆ ಆಗಮಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಬೇಕಾಗಿ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *