Skip to content
  • Thursday, March 26, 2026
  • ABOUT US
  • CONTACT US
  • Privacy Policy

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Privacy Policy
  • Horoscope
  • Home
  • Sports
  • IPL 2023: ಚೆನ್ನೈ ತಂಡದಲ್ಲಿ ಎಲ್ಲವೂ ಸರಿಯಿಲ್ಲ: ಜಡೇಜಾ ಮನವೊಲಿಸಲು ಮುಂದಾದ CSK ಸಿಇಒ
Sports

IPL 2023: ಚೆನ್ನೈ ತಂಡದಲ್ಲಿ ಎಲ್ಲವೂ ಸರಿಯಿಲ್ಲ: ಜಡೇಜಾ ಮನವೊಲಿಸಲು ಮುಂದಾದ CSK ಸಿಇಒ

May 25, 2023
samagrasuddi

IPL 2023: ಐಪಿಎಲ್​ ಸೀಸನ್ 16 ಇನ್ನೇನು ಮುಗಿಯಲಿದೆ ಅನ್ನುವಷ್ಟರಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಸುದ್ದಿಗಳು ಹರಿದಾಡಲಾರಂಭಿಸಿದೆ. ಈ ಸುದ್ದಿಗಳನ್ನು ಪುಷ್ಠೀಕರಿಸುವಂತಹ ಸನ್ನಿವೇಶಗಳು ಕೂಡ ಕಂಡು ಬರಲಾರಂಭಿಸಿದೆ.ಹೌದು, ಕೆಲ ದಿನಗಳ ಹಿಂದೆ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ಬಳಿಕ ಮಹೇಂದ್ರ ಸಿಂಗ್ ಧೋನಿ ಹಾಗೂ ರವೀಂದ್ರ ಜಡೇಜಾ ನಡುವೆ ಮೈದಾನದಲ್ಲೇ ವಾಕ್ಸಮರ ನಡೆದಿತ್ತು. ಎಲ್ಲಾ ಆಟಗಾರರು ಪ್ಲೇಆಫ್ ಪ್ರವೇಶಿಸಿದ ಸಂಭ್ರಮದಲ್ಲಿದ್ದರೆ ಇತ್ತ ಧೋನಿ ಜಡೇಜಾಗೆ ಕ್ಲಾಸ್ ತೆಗೆದುಕೊಂಡಿದ್ದರು.ಅಲ್ಲದೆ ಸಿಎಸ್​ಕೆ ನಾಯಕನ ಮಾತುಗಳನ್ನು ಆಲಿಸುತ್ತಿದ್ದ ಜಡೇಜಾ ಅವರ ಮುಖದಲ್ಲಿ ಯಾವುದೇ ನಗು ಇರಲಿಲ್ಲ. ಅಲ್ಲದೆ ನಿರಾಶಭಾವದೊಂದಿಗೆ ಅವರು ಡಗೌಟ್​ಗೆ ತೆರಳಿದ್ದರು. ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಬೆನ್ನಲ್ಲೇ  ಜಡೇಜಾ ಸೋಷಿಯಲ್ ಮೀಡಿಯಾದಲ್ಲಿ ಕರ್ಮ ರಿಟರ್ನ್ಸ್ ಎನ್ನುವ ಪೋಸ್ಟ್ ಹಂಚಿಕೊಂಡಿದ್ದರು.ಕರ್ಮವು ನಿಮ್ಮ ಬಳಿಗೆ ಬಂದೇ ಬರುತ್ತದೆ. ಅದು ಬೇಗನೆ ಬರಬಹುದು ಅಥವಾ ತಡವಾಗಬಹುದು. ಆದರೆ ಅದು ಖಂಡಿತವಾಗಿಯೂ ಬಂದೇ ಬರುತ್ತದೆ ಎಂಬ ಪೋಸ್ಟ್​ ಅನ್ನು ಜಡೇಜಾ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದರು. ಈ ಪೋಸ್ಟ್​ ಅನ್ನು ಶೇರ್ ಮಾಡಿರುವ ಜಡೇಜಾ ಅವರ ಪತ್ನಿ ರಿವಾಬಾ..ನಿಮ್ಮ ಸ್ವಂತ ಹಾದಿಯನ್ನು ಅನುಸರಿಸಿ ಎಂದು ಬರೆದುಕೊಂಡಿದ್ದರು.ಇದು ಅಲ್ಲಿಗೆ ಮುಗಿಯಿತು ಅಂದುಕೊಂಡರೆ, ಐಪಿಎಲ್​ ಮೊದಲ ಕ್ವಾಲಿಫೈಯರ್ ಪಂದ್ಯದ ಬಳಿಕ ಮತ್ತೊಂದು ಘಟನೆ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂ ಸಾಕ್ಷಿಯಾಯಿತು. ಗುಜರಾತ್ ಟೈಟಾನ್ಸ್ ವಿರುದ್ಧ ಸಿಎಸ್​ಕೆ ಗೆದ್ದ ಬಳಿಕ ಎಲ್ಲರೂ ಸಂಭ್ರಮದಲ್ಲಿದ್ದರೆ, ಇತ್ತ ರವೀಂದ್ರ ಜಡೇಜಾ ಏಕಾಂಗಿಯಾಗಿ ತೆರಳಿದ್ದರು.ಇದೇ ವೇಳೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸಿಇಒ ಕಾಸಿ ವಿಶ್ವನಾಥನ್ ಅವರು ಜಡೇಜಾ ಅವರನ್ನು ಸಮಾಧಾನಪಡಿಸಲು ಮುಂದಾಗಿದ್ದಾರೆ. ಕೆಲ ಕ್ಷಣಗಳ ಕಾಲ ಕಾಸಿ ವಿಶ್ವನಾಥನ್ ಅವರು ಜಡೇಜಾ ಜೊತೆ ಮಾತನಾಡಿದರು.ಆದರೆ ಸಿಎಸ್​ಕೆ ಸಿಇಒ ಅವರ ಮಾತುಗಳನ್ನು ಆಲಿಸಿದ ಜಡೇಜಾ ನಿರಾಸಕ್ತಿಯಿಂದಲೇ ಸಾಗಿದರು. ಇದೀಗ ಎಲ್ಲಾ ಆಟಗಾರರು ಫೈನಲ್ ಪ್ರವೇಶಿಸಿದ ಸಂಭ್ರಮದಲ್ಲಿರುವಾಗ ಕಾಸಿ ವಿಶ್ವನಾಥನ್ ಅವರು ಜಡೇಜಾ ಅವರನ್ನು ಸಮಾಧಾನಪಡಿಸುತ್ತಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.ಇದರ ಬೆನ್ನಲ್ಲೇ ಸಿಎಸ್​ಕೆ ತಂಡದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಮಾತುಗಳು ಮತ್ತೆ ಕೇಳಿ ಬರಲಾರಂಭಿಸಿದೆ. ಏಕೆಂದರೆ ಈ ಹಿಂದೆ ಕೂಡ ಜಡೇಜಾ ಸಿಎಸ್​ಕೆ ಫ್ರಾಂಚೈಸಿ ಜೊತೆ ಮುನಿಸಿಕೊಂಡಿದ್ದರು. ಇದಕ್ಕೆ ಮುಖ್ಯ ಕಾರಣ ಕಳೆದ ಸೀಸನ್​ನಲ್ಲಿ ನಾಯಕತ್ವ ನೀಡಿ ಕೆಲ ಪಂದ್ಯಗಳ ಬಳಿಕ ಕಪ್ತಾನನ ಸ್ಥಾನದಿಂದ ಕೆಳಗಿಳಿಸಿದ್ದು.
ಇದಾದ ಬಳಿಕ ಜಡೇಜಾ ಸಿಎಸ್​ಕೆ ಪರ ಆಡುವುದಿಲ್ಲ ಎಂಬ ಸುದ್ದಿಗಳು ಕೂಡ ಹರಿದಾಡಿದ್ದವು. ಅಂತಿಮವಾಗಿ ಸಿಎಸ್​ಕೆ ಫ್ರಾಂಚೈಸಿಯು ಸ್ಟಾರ್ ಆಲ್​ರೌಂಡರ್​ನ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದರು. ಇದೀಗ ಐಪಿಎಲ್​ನ ಮುಕ್ತಾಯದ ಹಂತದಲ್ಲೇ ರವೀಂದ್ರ ಜಡೇಜಾ ಹಾಗೂ ಸಿಎಸ್​ಕೆ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಸುದ್ದಿಗಳು ಕೇಳಿ ಬರಲಾರಂಭಿಸಿರುವುದು ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.

source https://tv9kannada.com/photo-gallery/cricket-photos/ipl-2023-ravindra-jadejas-animated-conversation-with-csk-ceo-kannada-news-zp-586946.html

Tags: Chennai, Cricket, CSK, IPL, IPL 2023, Ravindra jadeja, samagrasuddi, T-20, TATA IPL 2023, ಸಮಗ್ರ ಸುದ್ದಿ

Post navigation

IPL 2023: ಮಳೆಯಿಂದ ಕ್ವಾಲಿಫೈಯರ್ 2 ಪಂದ್ಯ ರದ್ದಾದರೆ ಯಾವ ತಂಡ ಫೈನಲ್​ಗೇರಲಿದೆ ಗೊತ್ತಾ?
ಬೆಂಡೆ ಕಾಯಿಯನ್ನು ಈ ರೀತಿ ತಿಂದು ನೋಡಿ ಚಿಟಿಕೆಯಲ್ಲಿ ನಿಯಂತ್ರಣಕ್ಕೆ ಬರುವುದು ಬ್ಲಡ್ ಶುಗರ್

Leave a Reply Cancel reply

Your email address will not be published. Required fields are marked *

CITIES

Cities

ಕರ್ನಾಟಕ ಹವಾಮಾನ ಎಚ್ಚರಿಕೆ Weather Alert Karnataka Today.

March 22, 2026
samagrasuddi

ಇಂದಿನ ಹವಾಮಾನ ಸ್ಥಿತಿಕರ್ನಾಟಕ ರಾಜ್ಯದಲ್ಲಿ ಇಂದಿನ ಹವಾಮಾನವು ಬಿಸಿಲು ಹಾಗೂ ಮೋಡ ಕವಿದ ವಾತಾವರಣದ ಮಿಶ್ರಣವಾಗಿರಲಿದೆ. ಕೆಲವು ಜಿಲ್ಲೆಗಳಲ್ಲಿ ಮಧ್ಯಾಹ್ನದಿಂದ ಸಂಜೆವರೆಗೆ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.ತಾಪಮಾನ: ಸುಮಾರು 34°C ರಿಂದ 37°Cಬೆಳಗ್ಗೆ: ಬಿಸಿಲು ಹೆಚ್ಚಾಗಿರುತ್ತದೆಮಧ್ಯಾಹ್ನ/ಸಂಜೆ: ಮೋಡ ಕವಿದು ಮಳೆಯ ಸಾಧ್ಯತೆಮಳೆ…

Cities

ತುರುವೇಕೆರೆಯ ವಿದ್ಯಾರಣ್ಯ”D Ed College”ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಭರ್ಜರಿ ಯಶಸ್ಸು.

March 18, 2026
samagrasuddi
Cities

Karnataka Weather Today: ರಾಜ್ಯದಲ್ಲಿಂದು ಮಳೆಯ ಮುನ್ಸೂಚನೆ, ಹೇಗಿರಲಿದೆ ಹವಾಮಾನ?

March 18, 2026
samagrasuddi
Cities

LPG Helpline Karnataka: ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್.

March 16, 2026
samagrasuddi
Cities

ಯುಗಾದಿ ಮತ್ತು ರಂಜಾನ್ ಹಬ್ಬದ ಸಂಭ್ರಮ: KSRTCಯಿಂದ 2,000 ವಿಶೇಷ ಬಸ್‌ಗಳ ವ್ಯವಸ್ಥೆ, ಮುಂಗಡ ಟಿಕೆಟ್ ಮೇಲೆ ಭರ್ಜರಿ ರಿಯಾಯಿತಿ!

March 15, 2026
samagrasuddi

You may Missed

Spiritual

2026 ಶ್ರೀರಾಮನವಮಿ: ಶುಭ ಮುಹೂರ್ತ, ಪೂಜಾ ವಿಧಿ ಮತ್ತು ಆಧ್ಯಾತ್ಮಿಕ ಮಹತ್ವದ ಸಂಪೂರ್ಣ ಮಾಹಿತಿ

March 25, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80

March 23, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 7 | ದಿನ 79

March 22, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 6 | ದಿನ 78

March 21, 2026
samagrasuddi
  • 2026 ಶ್ರೀರಾಮನವಮಿ: ಶುಭ ಮುಹೂರ್ತ, ಪೂಜಾ ವಿಧಿ ಮತ್ತು ಆಧ್ಯಾತ್ಮಿಕ ಮಹತ್ವದ ಸಂಪೂರ್ಣ ಮಾಹಿತಿ
  • RCB New Era:ಬೃಹತ್ ಮೊತ್ತಕ್ಕೆ ಮಾರಾಟವಾದ ಆರ್‌ಸಿಬಿ; ಹೊಸ ಮಾಲೀಕರು ಯಾರು? ಕೊಹ್ಲಿ ಭವಿಷ್ಯವೇನು? ಸಂಪೂರ್ಣ ವಿವರ.
  • UPSC ನಿಂದ ಮೆಗಾ ನೇಮಕಾತಿ: 1300ಕ್ಕೂ ಅಧಿಕ ವೈದ್ಯಾಧಿಕಾರಿ ಹುದ್ದೆಗಳು ಖಾಲಿ, ಮಾ.31 ಕಡೆ ದಿನ.
  • ಕರ್ನಾಟಕ ಆಯುಷ್ ಇಲಾಖೆ ನೇಮಕಾತಿ 2026:ಬೆಂಗಳೂರಿನಲ್ಲಿ ಖಾತೆ ಸಹಾಯಕ ಹುದ್ದೆಗೆ ನೇರ ಸಂದರ್ಶನ | AYUSH Karnataka Recruitment
  • ಇತಿಹಾಸದಲ್ಲೇ ಮೊದಲ ಬಾರಿಗೆ 94ರ ಗಡಿ ದಾಟಿದ ಡಾಲರ್: ರೂಪಾಯಿ ಮೌಲ್ಯ ತೀವ್ರ ಕುಸಿತಕ್ಕೆ ಕಾರಣಗಳೇನು?
Copyright © 2026
CONTACT US
Theme by: Theme Horse
Proudly Powered by: WordPress