ಮೈಸೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ಅಬ್ಬರದ ಪ್ರಚಾರ ನಡೆಸುತ್ತಿರುವ ರಾಜಕಾರಣಿಗಳು, ಜನರನ್ನು ಸೆಳೆಯುವ ಯತ್ನ ನಡೆಸುತ್ತಿದ್ದಾರೆ. ಬಿಜೆಪಿಯಲ್ಲಂತು ಚುನಾವಣೆ ಹತ್ತಿರವಾಗುತ್ತಿದ್ದಂತೆ ಹೈಕಮಾಂಡ್ ನಾಯಕರು ಪದೇ ಪದೇ ರಾಜ್ಯಕ್ಕೆ ಎಂಟ್ರಿಯಾಗುತ್ತಿದ್ದಾರೆ.
ಇಂದು ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ರಾತ್ರಿ 9.30ಕ್ಕೆ ಮೈಸೂರಿಗೆ ಬಂದಿಳಿಯುವ ಅಮಿತ್ ಶಾ, ಖಾಸಗಿ ಹೊಟೇಲ್ ನಲ್ಲಿ ತಂಗಲಿದ್ದಾರೆ. ನಂತರ ನಾಳೆ ಬೆಳಗ್ಗೆ ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ, ತಾಯಿಗೆ ವಿಶೇಷ ಪೂಜೆ ಸಲ್ಲಿಸಿ, ದರ್ಶನ ಪಡೆಯಲಿದ್ದಾರೆ. ಬಳಿಕ ತಮ್ಮ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ.
ಗುಂಡ್ಲುಪೇಟೆ ಅಭ್ಯರ್ಥಿ ನಿರಂಜನ್ ಪರವಾಗಿ ಅಮಿತ್ ಶಾ ಮತಯಾಚನೆ ಮಾಡಲಿದ್ದಾರೆ. ಅವರ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ. ಬಳಿಕ ಅಲ್ಲಿಂದ ಹಾಸನಕ್ಕೆ ತೆರಳಲಿದ್ದಾರೆ. ಹಾಸನ ಪ್ರವಾಸವನ್ನು ಮುಗಿಸಿ, ಮತ್ತೆ ಮೈಸೂರಿಗೆ ಬರಲಿದ್ದಾರೆ.
The post ಇಂದು ರಾತ್ರಿ ಮೈಸೂರಿಗೆ ಬರುವ ಅಮಿತ್ ಶಾ.. ನಾಳೆಯಿಂದ ನಿರಂಜನ್ ಪರ ಮತಯಾಚನೆ..! first appeared on Kannada News | suddione.
from ರಾಷ್ಟ್ರೀಯ ಸುದ್ದಿ – Kannada News | suddione https://ift.tt/rG4PuFl
via IFTTT