ಚಿತ್ರದುರ್ಗ ಮೇ. 6
ವರದಿ ಮತ್ತು ಪೋಟೋ ಕೃಪೆ, ಸುರೇಶ್ ಪಟ್ಟಣ್
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 50 ವರ್ಷದ ರಾಜಕೀಯ ಜೀವನದ ಹಿನ್ನಲೆಯಲ್ಲಿ ಮೇ. 9 ರಂದು ನಡೆಯಲಿರುವ ಅಭೀಮಾನೋತ್ಸವ ಕಾರ್ಯಕ್ರಮಕ್ಕೆ ಬೇಕಾದ ಸಕಲ ಸಿದ್ದತೆಯನ್ನು ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದರು.
ಚಿತ್ರದುರ್ಗ ನಗರದ ಹೊರವಲಯದ ಶ್ರೀ ಮಾದರ ಚೆನ್ನಯ್ಯ ಗುರುಪೀಠದ ಪಕ್ಕದಲ್ಲಿರುವ ಮೈದಾನದಲ್ಲಿ ನಡೆಸಲು ಉದ್ದೇಶಿಸಿರುವ ಅಭೀಮಾನೋತ್ಸವ ಕಾರ್ಯಕ್ರಮದ ಸ್ಥಳದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧೆಡೆಗಳಿಂದ ಯಡಿಯೂರಪ್ಪ ರವರ 10 ಲಕ್ಷ ಅಭೀಮಾನಿಗಳು ಆಗಮಿಸಲಿದ್ದಾರೆ. ಇದ್ದಲ್ಲದೆ ಕೇಂದ್ರದ ಗೃಹ ಸಚಿವರಾದ ಅಮಿತ್ ಷಾ ಸೇರಿದಂತೆ ರಾಜ್ಯದ ವಿವಿಧ 1000 ಮಠಾದೀಶರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮೇ 9ರಂದು ಬೆಳಿಗ್ಗೆ ಪಶ್ಚಿಮ ಬಂಗಾಲದಲ್ಲಿ ಬಿಜೆಪಿ ನೂತನ ಮುಖ್ಯಮಂತ್ರಿಗಳ ಪ್ರಮಾಣವಚನ ನಡೆಯಲಿದೆ. ಆದ್ದರಿಂದ ಮಾಜಿ ಮುಖ್ಯಮಂತ್ರಿಗಳಾದ ಬಿಎಸ್‍ವೈ ಅಭಿಮಾನೋತ್ಸವವು ಬೆಳಿಗ್ಗೆಯ ಬದಲಾಗಿ ಮಧ್ಯಾಹ್ನ 2 ಗಂಟೆಯಿಂದ 5 ಗಂಟೆಯವರೆಗೆ ನಡೆಯಲಿದೆ. 3.45ರವೇಳೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೀ ಅವರು ಆಗಮಿಸಲಿದ್ದಾರೆ ಎಂದರು.


ರಾಜ್ಯದ ಎಲ್ಲಾ ಮಠಾಧೀಶರನ್ನು ಸ್ವಯಂ ಆಗಿ ಕರೆಯಬೇಕು ಎಂಬ ಅಭಿಲಾಷೆ ನಮಗೂ ಇದೆ ಆದರೆ ಸಮಯ ಮತ್ತು ಕೆಲಸದ ಒತ್ತಡದಿಂದ ಅಗುತ್ತಿಲ್ಲ ಈ ಹಿನ್ನಲೆಯಲ್ಲಿ ನಮ್ಮ ಕಾರ್ಯಕ್ರಮಕ್ಕೆ ಎಲ್ಲಾ ಮಠಾಧೀಶರು ಆಗಮಿಸುವುದರ ಮೂಲಕ ಯಡೆಯೂರಪ್ಪರವರನ್ನು ಆರ್ಶೀವಾದ ಮಾಡಬೇಕೆಂದು ಮನವಿ ಮಾಡಿ, ಈ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧೆಡೆಗಳಿಂದ ಸುಮಾರು 10 ಸಾವಿರ ಬಸ್ಸ್ ಗಳು ಹಾಗೂ 4 ರಿಂದ 5 ಸಾವಿರ ವಿವಿಧ ರೀತಿಯ ವಾಹನಗಳು ಆಗಮಿಸಲಿವೆ. ಈ ಕಾರ್ಯಕ್ರಮಕ್ಕೆ ನಮ್ಮ ನಿರೀಕ್ಷೆ ಮೀರಿ ಜನರಿಂದ ಸ್ಪಂದನೆ ಸಿಕ್ಕಿದೆ ಕಾರ್ಯಕ್ರಮ ಯಶಸ್ವಿಯಾಗಲಿದೆ ಎಂದು ಬಿ.ವೈ. ವಿಜಯೇಂದ್ರ ತಿಳಿಸಿದರು.
ಮಾಜಿ ಡಿಸಿಎಂ ಮತ್ತು ಸಂಸದ ಗೋವಿಂದ ಕಾರಜೋಳ ಮಾತನಾಡಿ, ಬಿ.ಎಸ್.ಯಡಿಯೂರಪ್ಪ ಅವರ 50 ವರ್ಷಗಳ ಸಮಾಜಸೇವೆ, ಜೀವನಚರಿತ್ರೆಯನ್ನು ನಾವು ಐತಿಹಾಸಿಕ ನಗರ ಚಿತ್ರದುರ್ಗದಲ್ಲಿ ಒಂದು ಸಾಂಸ್ಕøತಿಕ ಹಬ್ಬದ ರೀತಿಯಲ್ಲಿ ಆಚರಿಸಲು ನಿರ್ಧರಿಸಿದ್ದೇವೆ. ಅವರ ಜೀವನಚರಿತ್ರೆ ಮತ್ತು ಸದನದಲ್ಲಿ ಯಡಿಯೂರಪ್ಪನವರು ಎಂಬ ಸಂಬಂಧ ಕೆಂದಾವರೆ- ಕಮಲದಲ್ಲಿ ಅರಳಿದ ಹೂ’ ಸದನದಲ್ಲಿ ಶಿಕಾರಿ’ ಎಂಬ 2 ಗ್ರಂಥಗಳನ್ನು ಅವತ್ತು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿ ಮೇ 8ರಂದು ಸಂಜೆ ಯಡಿಯೂರಪ್ಪನವರ ಪುರಪ್ರವೇಶ ನಡೆಯಲಿದೆ. ಇದನ್ನು ನಾಡಿನ ಸಾಂಸ್ಕೃತಿಕ ಹಬ್ಬದ ರೀತಿಯಲ್ಲಿ ಮಾಡಲು ತಯಾರಿ ಮಾಡಿದ್ದೇವೆ. 24 ಜಾನಪದ ಕಲಾತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ. ಎಲ್ಲರೂ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಮನವಿ ಮಾಡಿದರು.
ಶಾಸಕರಾದ ಹರೀಶ್ ಪುಂಜ, ರಘು ಕೌಟಿಲ್ಯ, ಬಾಸ್ಕರ್ ರಾವ್, ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ , ಎಸ್.ಕೆ.ಬಸವರಾಜನ್, ರಾಜ್ಯ ಕಾರ್ಯದರ್ಶಿ ತಮ್ಮೇಶ್ ಗೌಡ, ಲಿಂಗಮೂರ್ತಿ, ಮಲ್ಲಿಕಾರ್ಜನ್ ಸಂಪತ್ ಕುಮಾರ್, ಸೌಭಾಗ್ಯ ಬಸವರಾಜನ್, ಲೋಕೇಶ್ ನಾಗರಾಜ್, ಸೋಮು, ನಾಗರಾಜ್ ಬೇದ್ರೇ, ದಗ್ಗೆ ಶಿವಪ್ರಕಾಶ್ ಯಶವಂತ ಸೇರಿದಂತೆ ಇತರರು ಭಾಗವಹಿಸಿದ್ದರು.

