ಕಿಂಗ್ ಕೊಹ್ಲಿ ಬತ್ತಳಿಕೆಗೆ ಮತ್ತೊಂದು ರೆಕಾರ್ಡ್: ಜಾಕ್ವೆಸ್ ಕಾಲಿಸ್’ರ ಈ ವಿಶ್ವದಾಖಲೆಯನ್ನೇ ಮುರಿಯಲಿದ್ದಾರೆ ವಿರಾಟ್!

IND vs WI, 2nd Test: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು ಇನ್ನಿಂಗ್ಸ್ ಮತ್ತು 141 ರನ್‌ ಗಳಿಂದ ಗೆಲ್ಲುವ ಮೂಲಕ ಟೀಮ್ ಇಂಡಿಯಾ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

IND vs WI, 2nd Test: ಟ್ರಿನಿಡಾಡ್‌ನಲ್ಲಿ ನಾಳೆಯಿಂದ ಪ್ರಾರಂಭವಾಗುವ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಡ್ಯಾಶಿಂಗ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾದ ಶ್ರೇಷ್ಠ ಆಲ್‌ರೌಂಡರ್ ಜಾಕ್ವೆಸ್ ಕಾಲಿಸ್ ಅವರ ಶ್ರೇಷ್ಠ ದಾಖಲೆಯನ್ನು ಮುರಿಯಲಿದ್ದಾರೆ. ವೆಸ್ಟ್ ಇಂಡೀಸ್ ಮತ್ತು ಭಾರತ ನಡುವಿನ ಎರಡನೇ ಟೆಸ್ಟ್ ಪಂದ್ಯ ನಾಳೆ ಜುಲೈ 20 ರಿಂದ ಟ್ರಿನಿಡಾಡ್‌ನಲ್ಲಿ ನಡೆಯಲಿದೆ.

ಈ ಪಂದ್ಯ ಭಾರತೀಯ ಕಾಲಮಾನ ರಾತ್ರಿ 7:30ಕ್ಕೆ ನಡೆಯಲಿದೆ. ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು ಇನ್ನಿಂಗ್ಸ್ ಮತ್ತು 141 ರನ್‌ ಗಳಿಂದ ಗೆಲ್ಲುವ ಮೂಲಕ ಟೀಮ್ ಇಂಡಿಯಾ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಮೊದಲ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ 76 ರನ್‌ಗಳ ಇನ್ನಿಂಗ್ಸ್ ಆಡುವ ಮೂಲಕ ಅಭಿಮಾನಿಗಳ ಹೃದಯ ಗೆದ್ದಿದ್ದರು. ಆದರೆ ಎರಡನೇ ಟೆಸ್ಟ್ ಪಂದ್ಯದಲ್ಲಿ 74 ರನ್ ಗಳಿಸಿದ ತಕ್ಷಣ ಅವರು ದಕ್ಷಿಣ ಆಫ್ರಿಕಾದ ಆಲ್‌ರೌಂಡರ್ ಜಾಕ್ವೆಸ್ ಕಾಲಿಸ್ ಅವರ ಶ್ರೇಷ್ಠ ದಾಖಲೆಯನ್ನು ಮುರಿಯಲಿದ್ದಾರೆ.

ಟ್ರಿನಿಡಾಡ್ ನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ 74 ರನ್ ಗಳಿಸಿದರೆ, ದಕ್ಷಿಣ ಆಫ್ರಿಕಾದ ಕ್ರಿಕೆಟಿಗ ಜಾಕ್ವೆಸ್ ಕಾಲಿಸ್ ಅವರ ಶ್ರೇಷ್ಠ ದಾಖಲೆಯನ್ನು ಮುರಿಯಲಿದ್ದಾರೆ. ವಿರಾಟ್ ಕೊಹ್ಲಿ 74 ರನ್ ಗಳಿಸುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 25,535 ರನ್ ಗಳಿಸಲಿದ್ದಾರೆ. ಈ ಸಂದರ್ಭದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ ನಲ್ಲಿ 25,534 ರನ್ ಗಳಿಸಿರುವ ದಕ್ಷಿಣ ಆಫ್ರಿಕಾದ ಆಲ್‌ರೌಂಡರ್ ಜಾಕ್ವೆಸ್ ಕಾಲಿಸ್‌ ಗಿಂತ ಮುಂದೆ ಹೋಗುತ್ತಾರೆ. ಸದ್ಯ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 25,461 ರನ್ ಗಳಿಸಿರುವ ದಾಖಲೆ ಹೊಂದಿದ್ದಾರೆ.

ಈ ಅವಧಿಯಲ್ಲಿ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 25,500 ರನ್‌ಗಳ ಗಡಿ ದಾಟಲಿದ್ದಾರೆ. ಸಚಿನ್ ತೆಂಡೂಲ್ಕರ್ ನಂತರ ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಈ ಶ್ರೇಷ್ಠ ಸಾಧನೆ ಮಾಡಿದ ಎರಡನೇ ಭಾರತೀಯ ಬ್ಯಾಟ್ಸ್‌ಮನ್ ಆಗಲಿದ್ದಾರೆ. ಪ್ರಸ್ತುತ ಆಡುತ್ತಿರುವ ಕ್ರಿಕೆಟಿಗರ ಪೈಕಿ ವಿರಾಟ್ ಕೊಹ್ಲಿ ಈ ದಾಖಲೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಆಗಲಿದ್ದಾರೆ. ವಿರಾಟ್ ಕೊಹ್ಲಿ ಇದುವರೆಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 25,461 ರನ್ ಗಳಿಸಿದ್ದಾರೆ. ಸಚಿನ್ ತೆಂಡೂಲ್ಕರ್ ಇದುವರೆಗೆ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಗರಿಷ್ಠ 34,357 ರನ್ ಗಳಿಸಿದ್ದಾರೆ.

ಮಹೇಂದ್ರ ಸಿಂಗ್ ಧೋನಿ ಮತ್ತು ಸೌರವ್ ಗಂಗೂಲಿಯಂತಹ ಅನುಭವಿ ಆಟಗಾರರು ಕೂಡ ತಮ್ಮ ಇಡೀ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನದಲ್ಲಿ ಈ ಶ್ರೇಷ್ಠ ದಾಖಲೆಯನ್ನು ಮಾಡಲು ಸಾಧ್ಯವಾಗಲಿಲ್ಲ. ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸೌರವ್ ಗಂಗೂಲಿ 18,575 ರನ್ ಮತ್ತು ಮಹೇಂದ್ರ ಸಿಂಗ್ ಧೋನಿ 17,266 ರನ್ ಗಳಿಸಿದ್ದಾರೆ. ಮಹೇಂದ್ರ ಸಿಂಗ್ ಧೋನಿ ಮತ್ತು ಸೌರವ್ ಗಂಗೂಲಿಯಂತಹ ಅನುಭವಿಗಳು ತಮ್ಮ ಇಡೀ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನದಲ್ಲಿ 25,000 ರನ್ ಪೂರೈಸಲು ಸಾಧ್ಯವಾಗಲಿಲ್ಲ.

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ

1. ಸಚಿನ್ ತೆಂಡೂಲ್ಕರ್ (ಭಾರತ) – 34357 ರನ್

2. ಕುಮಾರ್ ಸಂಗಕ್ಕಾರ (ಶ್ರೀಲಂಕಾ) – 28016 ರನ್

3. ರಿಕಿ ಪಾಂಟಿಂಗ್ (ಆಸ್ಟ್ರೇಲಿಯಾ) – 27483 ರನ್

4. ಮಹೇಲಾ ಜಯವರ್ಧನೆ (ಶ್ರೀಲಂಕಾ) – 25957 ರನ್

5. ಜಾಕ್ವೆಸ್ ಕಾಲಿಸ್ (ದಕ್ಷಿಣ ಆಫ್ರಿಕಾ) – 25534 ರನ್

6. ವಿರಾಟ್ ಕೊಹ್ಲಿ (ಭಾರತ) – 25461 ರನ್

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕಗಳು

1. ಸಚಿನ್ ತೆಂಡೂಲ್ಕರ್ (ಭಾರತ) – 100 ಶತಕಗಳು

2. ವಿರಾಟ್ ಕೊಹ್ಲಿ (ಭಾರತ) – 75 ಶತಕಗಳು

3. ರಿಕಿ ಪಾಂಟಿಂಗ್ (ಆಸ್ಟ್ರೇಲಿಯಾ) – 71 ಶತಕಗಳು

4. ಕುಮಾರ್ ಸಂಗಕ್ಕಾರ (ಶ್ರೀಲಂಕಾ) – 63 ಶತಕಗಳು

5. ಜಾಕ್ವೆಸ್ ಕಾಲಿಸ್ (ದಕ್ಷಿಣ ಆಫ್ರಿಕಾ) – 62 ಶತಕಗಳು

6. ಹಾಶಿಮ್ ಆಮ್ಲಾ (ದಕ್ಷಿಣ ಆಫ್ರಿಕಾ) – 55 ಶತಕಗಳು

Source : https://zeenews.india.com/kannada/sports/virat-kohli-will-break-the-world-record-of-jacques-kallis-in-the-second-test-146683

Leave a Reply

Your email address will not be published. Required fields are marked *