ಮತ್ತೊಂದು ಶಾಕ್: ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಪ್ರಸ್ತಾವನೆ, ಸಾರ್ವಜನಿಕರ ಆಕ್ರೋಶ.

ಸೆಂ 14 : ಇತ್ತೀಚೆಗಷ್ಟೇ ದರ ಏರಿಕೆ ಬೆಳವಣಿಗಳಿಂದ ಹೈರಾಣಿಗಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರವೇ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಹೌದು.. ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರವೇ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ಇದೆ.

ವಿದ್ಯುತ್ ದರ ಏರಿಕೆ ಮಾಡುವಂತೆ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗಕ್ಕೆ ಬೆಸ್ಕಾಂ ಪ್ರಸ್ತಾವನೆ ಸಲ್ಲಿಸಿದೆ.


ಮೂಲಗಳ ಪ್ರಕಾರ ಪ್ರತಿ ಯೂನಿಟ್ ಗೆ 1 ರೂಪಾಯಿಯಂತೆ ವಿದ್ಯುತ್ ದರ ಏರಿಕೆ ಮಾಡಬೇಕು ಎಂದು ಬೆಸ್ಕಾಂ ಮನವಿ ಮಾಡಿದೆ. ಈಗಾಗಲೇ ವಾಣಿಜ್ಯ, ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಮಾಡಿ ಶಾಕ್ ಕೊಟ್ಟಿರುವ ಬೆಸ್ಕಾಂ, ಇದೀಗ ಮತ್ತೆ ವಿದ್ಯುತ್ ದರ ಹೆಚ್ಚಳ ಮಾಡುವಂತೆ ಪ್ರಸ್ತಾವನೆ ಸಲ್ಲಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.


ಎಫ್ ಕೆಸಿಸಿಐ ವಿರೋಧ
ಬೆಸ್ಕಾಂ ಪ್ರಸ್ತಾವನೆ ಬಗ್ಗೆ ಎಫ್ ಕೆಸಿಸಿಐ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ರಾಜ್ಯದಲ್ಲಿ ಪ್ರತಿ ಯೂನಿಟ್ ಗೆ 1 ರೂಪಾಯಿ ವಿದ್ಯುತ್ ದರ ಏರಿಕೆ ಮಾಡುವ ಪ್ರಸ್ತಾವನೆಗೆ ಸಾವರ್ಜನಿಕರು, ಉದ್ಯಮಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Views: 10

Leave a Reply

Your email address will not be published. Required fields are marked *