ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯಲ್ಲಿ ಉಚಿತ ಶಿಕ್ಷಣವನ್ನು 6, 7, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಲ್ಲಿ ನೀಡಲಿದ್ದು, ಈ ತರಗತಿಗಳಿಗೆ ಪ್ರವೇಶ ಪಡೆಯಲು ಬಯಸುವವರು, ಈಗ ಅರ್ಜಿ ಸಲ್ಲಿಸಿ, ಪ್ರವೇಶ ಪ್ರಕ್ರಿಯೆಯ ಆಯ್ಕೆ ಪರೀಕ್ಷೆಗೆ ಹಾಜರಾಗಬೇಕಾಗುತ್ತದೆ. ಇದಕ್ಕೆ ಸಂಬಂಧಿತ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ ನೋಡಿ.
ಹೈಲೈಟ್ಸ್:
- ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯಲ್ಲಿ ಉಚಿತ ಶಿಕ್ಷಣ.
- ಮುಂದಿನ ಶೈಕ್ಷಣಿಕ ವರ್ಷದ ಪ್ರವೇಶಾತಿಗೆ ಈಗಲೇ ಅರ್ಜಿ ಆಹ್ವಾನ.
- 6, 7, 8 ಮತ್ತು 9ನೇ ತರಗತಿ ಪ್ರವೇಶದ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು.
ಮೂಡುಬಿದಿರೆಯ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯಲ್ಲಿ 2025-26 ನೇ ಶೈಕ್ಷಣಿಕ ವರ್ಷದ ಸಂಪೂರ್ಣ ಉಚಿತ ಶಿಕ್ಷಣ ಸೌಲಭ್ಯದಡಿಯಲ್ಲಿ ಉಚಿತ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳ ಪೋಷಕರು ಈ ಮಾಹಿತಿಗಳನ್ನು ಓದಿಕೊಂಡು ಅರ್ಜಿ ಸಲ್ಲಿಸಿ.
ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯಲ್ಲಿ 2025-26 ನೇ ಶೈಕ್ಷಣಿಕ ವರ್ಷದಲ್ಲಿ 6, 7, 8 ಮತ್ತು 9ನೇ ತರಗತಿಗಳಿಗೆ ಉಚಿತ ಶಿಕ್ಷಣ ಸೌಲಭ್ಯದಡಿಯಲ್ಲಿ ಉಚಿತ ಶಿಕ್ಷಣ ಪಡೆಯಬಹುದಾಗಿದೆ. ಈ ಸೌಲಭ್ಯಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
6ನೇ ತರಗತಿಗೆ ಉಚಿತ ಶಿಕ್ಷಣಕ್ಕಾಗಿ 5 ತರಗತಿ ಓದುತ್ತಿರುವವರು, 7ನೇ ತರಗತಿಗೆ ಉಚಿತ ಶಿಕ್ಷಣ ಸೌಲಭ್ಯದಡಿ ಪ್ರವೇಶ ಪಡೆಯಲು 6ನೇ ತರಗತಿ ಓದುತ್ತಿರುವವರು, 8ನೇ ತರಗತಿಗೆ ಉಚಿತ ಶಿಕ್ಷಣ ಸೌಲಭ್ಯದಡಿ ಪ್ರವೇಶ ಪಡೆಯಲು 7ನೇ ತರಗತಿಯಲ್ಲಿ ಪ್ರಸ್ತುತ ವ್ಯಾಸಂಗ ಮಾಡುತ್ತಿರಬೇಕು, 9ನೇ ತರಗತಿಗೆ ಉಚಿತ ಶಿಕ್ಷಣ ಸೌಲಭ್ಯದಡಿ ಪ್ರವೇಶ ಪಡೆಯಲು 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು.
ಶೈಕ್ಷಣಿಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಪಡೆಯಲು ಇದೊಂದು ಸುವರ್ಣಾವಕಾಶವಾಗಿದೆ. ಆಸಕ್ತ ವಿದ್ಯಾರ್ಥಿಗಳು www.alvasschools.com ಈ ಅಂತರ್ಜಾಲದಲ್ಲಿ ಇರುವ ಲಿಂಕನ್ನು ತೆರೆದು ಅರ್ಜಿಯನ್ನು ಭರ್ತಿಮಾಡಬೇಕು. ನಂತರ ಒಂದು ಪ್ರತಿಯನ್ನು ಪ್ರಿಂಟ್ ತೆಗೆದುಕೊಂಡು, ಅಗತ್ಯ – ಪೂರಕ ದಾಖಲೆಗಳೊಂದಿಗೆ ವಿಳಾಸ – ಅಧ್ಯಕ್ಷರು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆ, ದಕ್ಷಿಣ ಕನ್ನಡ – 574227 ಇವರಿಗೆ ಸಲ್ಲಿಸುವುದು.
- ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 15-01-2025 ರ ಒಳಗೆ ತಲುಪುವಂತೆ ಕಳುಹಿಸಿಕೊಡಬೇಕು.
- ಆಯ್ಕೆ ಪ್ರಕ್ರಿಯೆ ನಡೆಸುವ ದಿನಾಂಕ: 02-03-2025
- ಆಯ್ಕೆ ಪ್ರಕ್ರಿಯೆ ನಡೆಸುವ ಸ್ಥಳ: ಆಳ್ವಾಸ್ ಆವರಣ, ವಿದ್ಯಾಗಿರಿ, ಮೂಡುಬಿದಿರೆ, ದಕ್ಷಿಣ ಕನ್ನಡ.
ಅರ್ಜಿ ಇಲ್ಲದೆ ನೇರವಾಗಿ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ಇರುವುದಿಲ್ಲ. ಆಯ್ಕೆ ಪ್ರಕ್ರಿಯೆಯಲ್ಲಿ ಉತ್ತೀರ್ಣರಾದವರಿಗೆ ಮಾತ್ರ ಸಂಪೂರ್ಣ ಉಚಿತ ಶಿಕ್ಷಣ, ವಸತಿ ಸಹಿತ ಊಟೋಪಚಾರ ಸೌಲಭ್ಯ ದೊರೆಯಲಿದೆ.
ಅರ್ಜಿ ಸಲ್ಲಿಸಲು ಭೇಟಿ ನೀಡಬೇಕಾದ ವೆಬ್ ಸೈಟ್ ವಿಳಾಸ : https://scholarship.alvas.org/login.html
ಮೇಲಿನ ಸದರಿ ವೆಬ್‌ಸೈಟ್‌ಗೆ ಭೇಟಿ ನೀಡಿ ಮೊದಲು ‘Register’ ಎಂದಿರುವಲ್ಲಿ ಕ್ಲಿಕ್ ಮಾಡಿ.
ಕೇಳಲಾದ ಮಾಹಿತಿಗಳನ್ನು ನೀಡಿ. ಯಾವುದೇ ದಾಖಲೆಗಳನ್ನು ಕೇಳಿದ್ದಲ್ಲಿ, ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಿ.
ಪೂರ್ಣವಾಗಿ ಅರ್ಜಿ ಸಲ್ಲಿಕೆ ಆದ ನಂತರ ಪ್ರಿಂಟ್ ತೆಗೆದುಕೊಳ್ಳಿ.
ಪ್ರಿಂಟ್ ತೆಗೆದ ಅರ್ಜಿಯೊಂದಿಗೆ, ಪೂರಕ ದಾಖಲೆಗಳನ್ನು ಲಗತ್ತಿಸಿ. ಒಂದು ಪ್ರತಿಯನ್ನು ಮೇಲೆ ತಿಳಿಸಲಾದ ವಿಳಾಸಕ್ಕೆ ಸಲ್ಲಿಸುವುದು.
ಡಾ| ಎಂ. ಮೋಹನ ಆಳ್ವ ಸೂಚನೆ : 02.03.2025 ಅದಿತ್ಯವಾರದಂದು, ಆಳ್ವಾಸ್ ಆವರಣ, ವಿದ್ಯಾಗಿರಿ, ಮೂಡುಬಿದಿರೆ ಇಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಹೆಚ್ಚಿನ ಮಾಹಿತಿಗೆ ಕರೆ ಮಾಡಲು ಸಹಾಯವಾಣಿ ಸಂಖ್ಯೆ : 7026530137, 7026530263, 9071705131
ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯಲ್ಲಿ 2025-26 ನೇ ಶೈಕ್ಷಣಿಕ ವರ್ಷದಲ್ಲಿ 6, 7, 8 ಮತ್ತು 9ನೇ ತರಗತಿಗಳಿಗೆ ಉಚಿತ ಶಿಕ್ಷಣ ಸೌಲಭ್ಯದಡಿಯಲ್ಲಿ ಉಚಿತ ಶಿಕ್ಷಣ ಪಡೆಯಲು ಪ್ರವೇಶ ಬಯಸುವವರು ತಮ್ಮ ಪ್ರಸಕ್ತ ಸಾಲಿನ ಶೈಕ್ಷಣಿಕ ಪ್ರವೇಶಾತಿಯ ದಾಖಲೆ, ಜಾತಿ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ ಸಲ್ಲಿಸುವುದು.