Railway Recruitment: 3624 ಹುದ್ದೆಗಳಿಗೆ ಅರ್ಜಿ ಆಹ್ವಾನ, SSLC ಆದವರು ಇಂದೇ ಅರ್ಜಿ ಸಲ್ಲಿಸಿ

Indian Railway Recruitment: ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಶೇ.50ರಷ್ಟು ಅಂಕಗಳೊಂದಿಗೆ 10ನೇ ತರಗತಿ ಉತ್ತೀರ್ಣರಾಗಿರಬೇಕು. ಇನ್ನು ಸಂಬಂಧಿತ ಟ್ರೇಡ್‌ನಿಂದ ITI ಪ್ರಮಾಣಪತ್ರವನ್ನು ಪಡೆದಿರಬೇಕು. ಇದಲ್ಲದೆ ಜುಲೈ 26ಕ್ಕೆ ಅಭ್ಯರ್ಥಿಗಳ ವಯಸ್ಸು 15-24 ವರ್ಷಗಳಾಗಿರಬೇಕು.

ನವದೆಹಲಿ: ರೈಲ್ವೆ ನೇಮಕಾತಿ ಸೆಲ್ (RRC) ಪಶ್ಚಿಮ ರೈಲ್ವೆ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು RRC WR-rrc-wr.comನ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ ನೀಡಿರುವ ಭಾರತೀಯ ರೈಲ್ವೆ ಇಲಾಖೆಯು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಗಳನ್ನು ಭರ್ತಿ ಮಾಡಲಾಗುವುದು ಎಂದು ಘೋಷಿಸಿದೆ. ಈ ಕುರಿತು ಅಧಿಸೂಚನೆ ಹೊರಡಿಸಲಾಗಿದ್ದು, ಒಟ್ಟು 3,624 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ತಿಳಿಸಿದೆ.

ಈ ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಇದೇ ತಿಂಗಳ 27ರಿಂದ ಪ್ರಾರಂಭವಾಗಲಿದೆ. ಅರ್ಜಿ ಸಲ್ಲಿಸಲು ಜುಲೈ 26 ಕೊನೆಯ ದಿನವಾಗಿದ್ದು, ಆಸಕ್ತ ಅಭ್ಯರ್ಥಿಗಳು ಆ ದಿನಾಂಕದೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು.

ಶೈಕ್ಷಣಿಕ ವಿದ್ಯಾರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಶೇ.50ರಷ್ಟು ಅಂಕಗಳೊಂದಿಗೆ 10ನೇ ತರಗತಿ ಉತ್ತೀರ್ಣರಾಗಿರಬೇಕು. ಇನ್ನು ಸಂಬಂಧಿತ ಟ್ರೇಡ್‌ನಿಂದ ITI ಪ್ರಮಾಣಪತ್ರವನ್ನು ಪಡೆದಿರಬೇಕು. ಇದಲ್ಲದೆ ಜುಲೈ 26ಕ್ಕೆ ಅಭ್ಯರ್ಥಿಗಳ ವಯಸ್ಸು 15-24 ವರ್ಷಗಳಾಗಿರಬೇಕು.

ಅಭ್ಯರ್ಥಿಗಳ ಆಯ್ಕೆ: ಅಭ್ಯರ್ಥಿಗಳ ಆಯ್ಕೆಯು ಅರ್ಹತೆಯ ಆಧಾರದ ಮೇಲೆ ನಡೆಯಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಇತರೆ ಸಂಪೂರ್ಣ ವಿವರಗಳನ್ನು ನೀವು ಅಧಿಸೂಚನೆಯಲ್ಲಿ ನೋಡಬಹುದು.

ಅರ್ಜಿ ಶುಲ್ಕ: ಅಭ್ಯರ್ಥಿಗಳು100 ರೂ. ಅರ್ಜಿ ಶುಲ್ಕ ಪಾವತಿಸಬೇಕು. SC/ST/PWD ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ. ಅಭ್ಯರ್ಥಿಗಳು ಡೆಬಿಟ್ ಕಾರ್ಡ್/ಕ್ರೆಡಿಟ್ ಕಾರ್ಡ್/ಇಂಟರ್ನೆಟ್ ಬ್ಯಾಂಕ್ ಮೂಲಕ ಶುಲ್ಕವನ್ನ ಪಾವತಿಸಬೇಕು

Source : https://zeenews.india.com/kannada/career/rrc-western-region-to-recruit-for-3624-apprentice-posts-know-eligibility-and-other-details-141844

Leave a Reply

Your email address will not be published. Required fields are marked *