ಚಿತ್ರದುರ್ಗ: ಗ್ರಾ. ಪಂ.ಗಳಲ್ಲಿ ನೇಮಕಾತಿ; ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ.

ಜಿಲ್ಲೆಯ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಖಾಲಿ ಇರುವ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಚಿತ್ರದುರ್ಗ ಜಿಲ್ಲಾ ಪಂಚಾಯತ್​ ವ್ಯಾಪ್ತಿಯ ಗ್ರಾಮ ಪಂಚಾಯತ್​ನಲ್ಲಿ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ.

ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು ಆರು ಹುದ್ದೆಗಳ ಭರ್ತಿ ನಡೆಯಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಹುದ್ದೆ ವಿವರ: ಚಿತ್ರದುರ್ಗದ ಮದಕರಿಪುರ, ಗೋಡಬನಾಳ್​, ಚಳ್ಳಕೆರೆಯ ಕಾಲುವೇಹಳ್ಳಿ, ಎನ್​ ದೇವರಹಳ್ಳಿ, ಗೌರ ಸಮುದ್ರ ಮತ್ತು ಮೊಳಕಾಲ್ಮೂರಿನ ಜೆಬಿ ಹಳ್ಳಿಗಳಲ್ಲಿ ತಲಾ ಒಂದರಂತೆ ಖಾಲಿ ಇರುವ ಒಟ್ಟು 6 ಹುದ್ದೆಗಳ ಭರ್ತಿಗೆ ಕ್ರಮ ವಹಿಸಲಾಗಿದೆ.

 ಅಧಿಸೂಚನೆ

ವಿದ್ಯಾರ್ಹತೆ: ಪಿಯುಸಿ ವಿದ್ಯಾರ್ಹತೆ. ಸರ್ಟಿಫಿಕೇಷನ್​ ಕೋರ್ಸ್​ ಇನ್​​ ಲೈಬ್ರರಿ ಸೈನ್ಸ್​ ಪ್ರಮಾಣಪತ್ರ ಪಡೆದಿರಬೇಕು. ಕನಿಷ್ಠ 3 ತಿಂಗಳ ಕಂಪ್ಯೂಟರ್​ ಕೋರ್ಸ್​ ಉತ್ತೀರ್ಣರಾಗಿರಬೇಕು. ಸರ್ಟಿಫಿಕೇಷನ್​ ಕೋರ್ಸ್​ ಇನ್​ ಲೈಬ್ರರಿ ಸೈನ್ಸ್​ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸದಿದ್ದಲ್ಲಿ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಹುದ್ದೆಗೆ ಪರಿಗಣಿಸಲಾಗುತ್ತದೆ.

ವಿಶೇಷ ಸೂಚನೆ: ಅಭ್ಯರ್ಥಿಗಳು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿಯಾಗಿರಬೇಕು.

ವಯೋಮಿತಿ: ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷ ವಯೋಮಿತಿ ಹೊಂದಿರಬೇಕು. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ.ಜಾತಿ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷದವರೆಗೆ ವಯೋಮಿತಿ ಸಡಿಲಿಕೆ ಇದೆ.

ಆಯ್ಕೆ: ಮೆರಿಟ್​ ಆಧಾರದ ಮೇಲೆ ದಾಖಲಾತಿ ಪರಿಶೀಲನೆ ಬಳಿಕ ಅಭ್ಯರ್ಥಿಗಳ ಆಯ್ಕೆ.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಜಿಲ್ಲಾಡಳಿತದ ವೆಬ್​ಸೈಟ್​ನಲ್ಲಿ ನೀಡಲಾಗಿರುವ ನಿಗದಿತ ಅರ್ಜಿಯನ್ನು ಭರ್ತಿ ಮಾಡಬೇಕು. ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಈ ಅರ್ಜಿಯನ್ನು ಭರ್ತಿ ಮಾಡಬೇಕಿದೆ.

ಅರ್ಜಿ ಸಲ್ಲಿಕೆ ವಿಳಾಸ: ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಉಪ ಕಾರ್ಯದರ್ಶಿಗಳು ಜಿಲ್ಲಾ ಪಂಚಾಯಿತಿ , ಸ್ಟೇಡಿಯಂ ರಸ್ತೆ, ಚಿತ್ರದುರ್ಗ. ಇಲ್ಲಿಗೆ ಅಂಚೆ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.

ಈ ಹುದ್ದೆಗೆ ಡಿಸೆಂಬರ್​ 6 ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಡಿಸೆಂಬರ್​ 26 ಆಗಿದೆ.

ಈ ಹುದ್ದೆ ಕುರಿತು ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು chitradurga.nic.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.

Source : https://m.dailyhunt.in/news/india/kannada/etvbhar9348944527258-epaper-etvbhkn/chitradurga+gra+pan+galalli+nemakaati+granthaalaya+melvichaarakara+huddege+arji+aahvaana-newsid-n564253568?listname=newspaperLanding&topic=homenews&index=7&topicIndex=0&mode=pwa&action=click

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group : https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharechat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *