
ಚಿತ್ರದುರ್ಗ ಜೂ. 20 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 85%ಕ್ಕಿಂತ ಹೆಚ್ಚು ಅಂಕ ಪಡೆದ ಗಾಣಿಗ ಸಮಾಜದ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿಯನ್ನು ಕರೆಯಲಾಗಿದೆ.
ಅರ್ಜಿಯನ್ನು ಸಲ್ಲಿಸಲು ಕಡೆಯ ದಿನಾಂಕ : 30-06-2025 ಕೂನೆಯ ದಿನವಾಗಿದೆ. ಅರ್ಜಿಗಳನ್ನು ಶ್ರೀ ಕಂಠೇಶ್ವರಸ್ವಾಮಿ ದಲ್ಲಾಳಿ ಮಂಡಿ ಎ ಬ್ಲಾಕ್ ಎ.ಪಿ.ಎಂ.ಸಿ ಯಾರ್ಡ್, ಚಿತ್ರದುರ್ಗ ಇಲ್ಲಿಗೆ ಸಲ್ಲಿಸಬೇಕಿದೆ. ಹೆಚ್ಚಿನ ಮಾಹಿತಿಗಾಗಿ 9449974004, 7795374334, 9886954676, 9886843597 ದೂರವಾಣಿಯನ್ನು ಸಂಪರ್ಕ ಮಾಡಬಹುದಾಗಿದೆ.
ಜುಲೈ 13 ರಂದು ನಗರದ ಸ್ಟೇಡಿಯಂ ರಸ್ತೆಯ ಜಿ.ಜಿ.ಸಮುದಾಯ ಭವನದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಕ್ಕಳನ್ನು ಸನ್ಮಾನಿಸಲಾಗುವುದು.