ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ಸರ್ಕಾರವು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವಂತಹ ವ್ಯಕ್ತಿಗಳಿಗೆ ತಲಾ ರೂ.25,000/-ಗಳ ನಗದು ಬಹುಮಾನ ಮತ್ತು ಪ್ರಶಸ್ತಿಪತ್ರ ಹಾಗೂ ಸಂಸ್ಥೆಗಳಿಗೆ ತಲಾ ರೂ 1,00,000/-ಲಕ್ಷಗಳ ನಗದು ಬಹುಮಾನ ಹಾಗೂ ಪ್ರಶಸ್ತಿಪತ್ರಗಳನ್ನು ನೀಡಲು ಅರ್ಜಿ ಆಹ್ವಾನಿಸಿದೆ. ಆಯ್ಕೆಯಾದವರಿಗೆ ಮಕ್ಕಳ ದಿನಾಚರಣೆಯಂದು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುತ್ತದೆ.

ಬೆಂಗಳೂರು: ಕರ್ನಾಟಕ ಸರ್ಕಾರವು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವಂತಹ ವ್ಯಕ್ತಿಗಳಿಗೆ ತಲಾ ರೂ.25,000/-ಗಳ ನಗದು ಬಹುಮಾನ ಮತ್ತು ಪ್ರಶಸ್ತಿಪತ್ರ ಹಾಗೂ ಸಂಸ್ಥೆಗಳಿಗೆ ತಲಾ ರೂ 1,00,000/-ಲಕ್ಷಗಳ ನಗದು ಬಹುಮಾನ ಹಾಗೂ ಪ್ರಶಸ್ತಿಪತ್ರಗಳನ್ನು ನೀಡಲು ಅರ್ಜಿ ಆಹ್ವಾನಿಸಿದೆ. ಆಯ್ಕೆಯಾದವರಿಗೆ ಮಕ್ಕಳ ದಿನಾಚರಣೆಯಂದು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುತ್ತದೆ.

2023 ನೇ ಸಾಲಿನ ಪ್ರಶಸ್ತಿಗಾಗಿ ನಿಗದಿಪಡಿಸಿರುವ ಅರ್ಜಿ ನಮೂನೆಗಳನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಧಾರವಾಡ ಕಛೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ದ್ವಿಪ್ರತಿಯಲ್ಲಿ ಉಪನಿರ್ದೇಶಕರ ಕಛೇರಿಗೆ ಸೆಪ್ಟೆಂಬರ 15, 2023 ರೊಳಗೆ ಸಲ್ಲಿಸಬೇಕು.

ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸುವ ವ್ಯಕ್ತಿ, ಸಂಸ್ಥೆಗಳ ವಿರುದ್ದ ಕ್ರಿಮಿನಲ್ ಮೊಕದ್ದಮೆ ಇಲ್ಲದಿರುವ ಬಗ್ಗೆ ಗುಪ್ತಚರ ಇಲಾಖೆಯಿಂದ ವರದಿ ಪಡೆದು ಸಲ್ಲಿಸತಕ್ಕದ್ದು ಅರ್ಜಿಗಳನ್ನು ಕನ್ನಡ ಭಾಷೆಯಲ್ಲಿಯೇ ಸಲ್ಲಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Source : https://zeenews.india.com/kannada/karnataka/for-individuals-and-organizations-who-have-served-in-the-field-of-child-welfare-application-invitation-for-state-award-152643

Leave a Reply

Your email address will not be published. Required fields are marked *