ಕೆಎಸ್‌ಆರ್‌ಟಿಸಿ ವಿದ್ಯಾರ್ಥಿ ಬಸ್ ಪಾಸ್‌ಗೆ ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು: ಶೈಕ್ಷಣಿಕ ವರ್ಷದ ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳು ಪ್ರಾರಂಭವಾಗಿದ್ದು 2024-25ನೇ ಸಾಲಿನಲ್ಲಿ ಕರಾರಸಾ ನಿಗಮದ (KSRTC) ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು (Seva Sindhu Portal) ಪೋರ್ಟಲ್‍ನ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರಸಕ್ತ ವರ್ಷದಲ್ಲಿ ಸರ್ಕಾರದ ಆದೇಶದಂತೆ ಸಂಪೂರ್ಣ ಗಣಕೀಕೃತವಾಗಿ ವಿದ್ಯಾರ್ಥಿ ಬಸ್ ಪಾಸುಗಳನ್ನು (Student Bus Pass) ವಿತರಿಸಲಾಗುತ್ತದೆ.
ಅರ್ಜಿ ಸಲ್ಲಿಕೆ ವಿಧಾನ
ಜೂನ್ 1 ರಿಂದ ಬಸ್‍ಪಾಸ್ ಗೆ ಅರ್ಜಿ ಸಲ್ಲಿಸಬಹುದು. ಆನ್‍ಲೈನ್ ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ವಿದ್ಯಾರ್ಥಿಗಳು ಕರ್ನಾಟಕ-ಒನ್, ಗ್ರಾಮ ಒನ್ ಕೇಂದ್ರಗಳಲ್ಲಿಯೂ ಅರ್ಜಿ ಸಲ್ಲಿಸಬಹುದು. ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ರೂ. 30 ಸೇವಾ ಶುಲ್ಕವನ್ನು ಸದರಿ ಕೇಂದ್ರಗಳ ಸಿಬ್ಬಂದಿಗಳು ಪಡೆಯಲು ಅವಕಾಶವಿದೆ.
ಆನ್‌ಲೈನ್‌ನಲ್ಲಿ ಹೇಗೆ?
ವಿದ್ಯಾರ್ಥಿ ಬಸ್‍ಪಾಸ್ ಗೆ ಅರ್ಜಿ ಸಲ್ಲಿಸಲು Declaration Form ಅನ್ನು ಸೇವಾಸಿಂಧು ತಂತ್ರಾಂಶದಲ್ಲಿ ಅಥವಾ ಕರಾರಸಾ ನಿಗಮದ ವೆಬ್‍ಸೈಟ್ https://ksrtc.karnataka.gov.in/student ಡೌನ್‍ಲೋಡ್ ಮಾಡಿಕೊಂಡು ಭರ್ತಿಮಾಡಿ ಶಾಲಾ/ಕಾಲೇಜು, ಮುಖೋಪಾಧ್ಯಾಯರ/ಪ್ರಾಂಶುಪಾಲರ ಸಹಿ ಮತ್ತು ಶಾಲಾ/ಕಾಲೇಜು ಮೊಹರಿನೊಂದಿಗೆ ಅಪ್ಲೋಡ್ ಮಾಡಬೇಕು.
ಶುಲ್ಕ ಪಾವತಿ ಹೇಗೆ?
ಅರ್ಜಿ ಅನುಮೋದನೆಯಾದ ವಿದ್ಯಾರ್ಥಿಗಳಿಗೆ ಪಾಸು ಪಡೆಯಲು ಭೇಟಿ ನೀಡಬೇಕಿರುವ ಕೌಂಟರ್‌ನ ಹೆಸರು/ವಿಳಾಸ ಮಾಹಿತಿಯನ್ನು ಅರ್ಜಿಯಲ್ಲಿ ನೀಡಲಾದ ಮೊಬೈಲ್ ಸಂಖ್ಯೆಗೆ ಎಸ್‍ಎಂಎಸ್ ಮೂಲಕ ಕಳುಹಿಸಲಾಗುತ್ತದೆ. ವಿದ್ಯಾರ್ಥಿಗಳು ಆಯ್ಕೆ ಮಾಡಿದ ಕೌಂಟರ್‌ಗೆ ತೆರಳಿ, ನಿಗದಿತ ಪಾಸಿನ ಶುಲ್ಕ ನಗದು, ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ ಮೂಲಕ ಪಾವತಿಸಿ ಪಾಸ್ ಪಡೆಯಬಹುದು ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.