ಕ್ರಿಕೆಟ್ ಕದನಲ್ಲಿ ಕ್ರಿಕೆಟ್ ದೇವರು ಎಂದೇ ಖ್ಯಾತರಾಗಿರುವ ಟೀಂ ಇಂಡಿಯಾದ ಮಾಜಿ ನಾಯಕ ಸಚಿನ್ ತೆಂಡೂಲ್ಕರ್ (Sachin Tendulkar) ಅವರ ಪುತ್ರ ಅರ್ಜುನ್ ತೆಂಡೂಲ್ಕರ್ (Arjun Tendulkar) ಅವರು ಸಾನಿಯಾ ಚಂದೋಕ್ (Sania Chandok) ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಸಾನಿಯಾ ಚಂದೋಕ್ ಅವರು ಮುಂಬೈನ ಖ್ಯಾತ ಉದ್ಯಮಿ ರವಿ ಘಾಯ್ ಅವರ ಮೊಮ್ಮಗಳಾಗಿದ್ದು ಎರಡೂ ಕಡೆಯ ಆಪ್ತ ಸ್ನೇಹಿತರು ಮತ್ತು ಕುಟುಂಬ ಸದಸ್ಯರು ಭಾಗವಹಿಸಿದ್ದ ಖಾಸಗಿ ಸಮಾರಂಭದಲ್ಲಿ ನಿಶ್ಚಿತಾರ್ಥ ನೆರವೇರಿದೆ. ಆದಾಗ್ಯೂ ತೆಂಡೂಲ್ಕರ್ ಕುಟುಂಬವಾಗಲಿ ಅಥವಾ ಘಾಯ್ ಕುಟುಂಬವಾಗಲಿ ನಿಶ್ಚಿತಾರ್ಥದ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.
ಮುಂಬೈ ತಂಡದಲ್ಲಿ ಅರ್ಜುನ್
ಭಾರತ ತಂಡದಲ್ಲಿ ಸ್ಥಾನ ಪಡೆಯಲು ಸಾಕಷ್ಟು ಕಸರತ್ತು ಮಾಡುತ್ತಿರುವ ಅರ್ಜುನ್ ತೆಂಡೂಲ್ಕರ್ ಇದುವರೆಗೂ ರಣಜಿ ತಂಡವನ್ನು ಬಿಟ್ಟು, ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಿಲ್ಲ. ಇನ್ನು ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಭಾಗವಾಗಿರುವ ಅರ್ಜುನ್ಗೆ 2024 ರ ಐಪಿಎಲ್ ಆವೃತ್ತಿಯಲ್ಲಿ ಕೆಲವು ಅವಕಾಶಗಳು ಸಿಕ್ಕಿದ್ದವು. ಆದರೆ ಆ ಅವಕಾಶಗಳಲ್ಲಿ ಅರ್ಜುನ್ ಪ್ರದರ್ಶನ ಹೇಳಿಕೊಳ್ಳುವಂತಿರಲಿಲ್ಲ. ಹೀಗಾಗಿ ಅವರನ್ನು ಮೆಗಾ ಹರಾಜಿಗೂ ಮುನ್ನ ತಂಡದಿಂದ ಬಿಡುಗಡೆ ಮಾಡಲಾಗಿತ್ತು. ಆದಾಗ್ಯೂ ಮೆಗಾ ಹರಾಜಿನಲ್ಲಿ ಅರ್ಜುನ್ರನ್ನು 30 ಲಕ್ಷಕ್ಕೆ ಮತ್ತೆ ತಂಡದಲ್ಲಿ ಸೇರಿಸಿಕೊಳ್ಳುವಲ್ಲಿ ಮುಂಬೈ ಯಶಸ್ವಿಯಾಗಿತ್ತು. ಆದರೆ ಈ ಆವೃತ್ತಿಯಲ್ಲಿ ಅರ್ಜುನ್ಗೆ ಒಂದೇ ಒಂದು ಪಂದ್ಯವನ್ನಾಡುವ ಅವಕಾಶ ಸಿಗಲಿಲ್ಲ.
Views: 39