ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ನ. 01: ಈ ದಿನ ಕನ್ನಡಿಗರ ಪಾಲಿಗೆ ವಿಶೇಷ ದಿನ. ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡಿಗರು ಕನ್ನಡವೆಂಬ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನವಿದು. ಇಂತಹದ್ದೊಂದು ಕನ್ನಡದ ಕನಸು ಸಾಕಾರಗೊಳ್ಳಲು ನಿಸ್ವಾರ್ಥದಿಂದ ಶ್ರಮಿಸಿದ ಲಕ್ಷಾಂತರ ಕನ್ನಡಾಭಿಮಾನಿಗಳ ಶ್ರಮ, ತ್ಯಾಗ, ಬಲಿದಾನಗಳನ್ನು ನಾವೆಲ್ಲರೂ ಗೌರವದಿಂದ ಸ್ಮರಿಸೋಣ ಎಂದು ಜಿಲ್ಲಾ ಕಾಂಗ್ರೆಸ್ ಪಕ್ಷದ
ಅಧ್ಯಕ್ಷರಾದ ಎಂ.ಕೆ.ತಾಜ್ಪೀರ್ ತಿಳಿಸಿದರು.
ಚಿತ್ರದುರ್ಗ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಇಂದು 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಕನ್ನಡಾಂಬೆಯ
ಭಾವಚಿತ್ರಕ್ಕೆ ಪುಪ್ಪನಮನ ಸಲ್ಲಿಸಿ ಮಾತನಾಡಿದ ಅವರು, 1973 ರ ನವೆಂಬರ್ 1 ರಂದು ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು
ಮರುನಾಮಕರಣ ಮಾಡಿ ಇಂದಿಗೆ 50 ವಸಂತಗಳು ಸಂದಿವೆ. ಕರ್ನಾಟಕದ ಸುವರ್ಣ ಮಹೋತ್ಸವದ ಈ ಸಂದರ್ಭದಲ್ಲಿ ಕನ್ನಡ
ನಾಡಭಾಷೆಯಷ್ಟೇ ಆಗದೆ ನಾಡಿನ ಪ್ರತಿ ಮನೆಯ ಆಡು ಭಾಷೆಯಾಗಲಿ, ಈ ದಿನ ಕನ್ನಡಿಗರ ಪಾಲಿನ ನಿತ್ಯೋತ್ಸವವಾಗಬೇಕಿದೆ.
ಹೆಸರಾಯಿತು ಕರ್ನಾಟಕ ಎಲ್ಲರ ಉಸಿರಾಗಲಿ ಕನ್ನಡವಾಗಬೇಕಿದೆ ಎಂದು ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದಶಿ ಸಂಪತ್ ಕುಮಾರ್, ಮೈಲಾರಪ್ಪ, ಗ್ಯಾರೆಂಟಿ ಯೋಜನೆಯ ಅಧ್ಯಕ್ಷರಾದ ಶಿವಣ್ಣ ಸೇರಿದಂತೆ
ಇತರರು ಉಪಸ್ಥಿತರಿದ್ದರು.