Ashes 2023: ಮಚಲ ಸಟರಕ ಔಟ! ಮದಲ ಆಶಸ ಪದಯಕಕ ಆಸಟರಲಯ ತಡ ಪರಕಟ

Ashes 2023: ಮಿಚೆಲ್ ಸ್ಟಾರ್ಕ್ ಔಟ್! ಮೊದಲ ಆಶಸ್ ಪಂದ್ಯಕ್ಕೆ ಆಸ್ಟ್ರೇಲಿಯಾ ತಂಡ ಪ್ರಕಟ
Ashes2023 Australia dropped Mitchell Starc for the 1st Test Josh Hazelwood playing XI

ಇಂದಿನಿಂದ ಆರಂಭವಾಗಿರುವ ಆಶಸ್ ಸರಣಿಯ ಮೊದಲ ಟೆಸ್ಟ್ ಪಂದ್ಯಕ್ಕೆ ಆಸೀಸ್ ತಂಡ ಪ್ರಕಟವಾಗಿದ್ದು, ತಂಡದ ಆಡುವ ಹನ್ನೊಂದರ ಬಳಗದಿಂದ ಸ್ಟಾರ್ ಬೌಲರ್ ಮಿಚೆಲ್ ಸ್ಟಾರ್ಕ್ ಅವರನ್ನು ಕೈಬಿಟ್ಟಿದೆ. ಅವರ ಜಾಗದಲ್ಲಿ ಜೋಶ್ ಹ್ಯಾಜಲ್‌ವುಡ್​ಗೆ ಅವಕಾಶ ನೀಡಲಾಗಿದೆ. ಸ್ಟಾರ್ಕ್ ಈ ಹಿಂದೆ ವಿಶ್ವ ಟೆಸ್ಟ್ ಚಾಂಪಿಯನ್ ಆಡಿದ್ದ ಆಸೀಸ್ ತಂಡದ ಬಾಗವಾಗಿದ್ದರು. ಇದಾದ ನಂತರ ಆಶಸ್ ಸರಣಿಯಲ್ಲೂ ಕಾಣಿಸಿಕೊಳ್ಳುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಮೊದಲ ಟೆಸ್ಟ್‌ನಲ್ಲೇ ಆಸ್ಟ್ರೇಲಿಯಾ ದೊಡ್ಡ ನಿರ್ಧಾರವನ್ನು ತೆಗೆದುಕೊಳ್ಳುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದೆ.

ಆಸ್ಟ್ರೇಲಿಯಾ ತಂಡ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲಬುಶೇನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೂರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ನಾಥನ್ ಲಿಯಾನ್, ಜೋಶ್ ಹ್ಯಾಜಲ್ವುಡ್, ಸ್ಕಾಟ್ ಬೋಲ್ಯಾಂಡ್.

ಇಂಗ್ಲೆಂಡ್ ತಂಡ: ಜ್ಯಾಕ್ ಕ್ರಾಲಿ, ಬೆನ್ ಡಕೆಟ್, ಓಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಮೊಯಿನ್ ಅಲಿ, ಓಲಿ ರಾಬಿನ್ಸನ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆಂಡರ್ಸನ್

source https://tv9kannada.com/sports/cricket-news/ashes2023-australia-dropped-mitchell-starc-for-the-1st-test-josh-hazelwood-playing-xi-psr-602320.html

Leave a Reply

Your email address will not be published. Required fields are marked *