WTC Final: ತಂಡದಲ್ಲಿ ಅಶ್ವಿನ್​ಗಿಲ್ಲ ಸ್ಥಾನ…ರೋಹಿತ್ ಶರ್ಮಾ ವಿರುದ್ಧ ಸುನಿಲ್ ಗವಾಸ್ಕರ್ ಅಸಮಾಧಾನ..!

WTC Final 2023: ಲಂಡನ್​ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ಮೊದಲ ದಿನದಾಟ ಮುಕ್ತಾಯಗೊಂಡಿದೆ. ಮೊದಲ ದಿನದಾಟದಲ್ಲಿ ಟೀಮ್ ಇಂಡಿಯಾ 3 ವಿಕೆಟ್ ಪಡೆದರೆ, ಆಸ್ಟ್ರೇಲಿಯಾ 327 ರನ್ ಪೇರಿಸಿದೆ.ಅಂದರೆ ಮೊದಲ ದಿನದ ಅಟದಲ್ಲಿ ಆಸ್ಟ್ರೇಲಿಯಾ ಬ್ಯಾಟರ್​ಗಳು ಮೇಲುಗೈ ಸಾಧಿಸಿದ್ದಾರೆ. ಹೀಗೆ ಆಸೀಸ್ ಆಟಗಾರರು ಪಂದ್ಯದ ಮೇಲೆ ಹಿಡಿತ ಸಾಧಿಸಲು ಮುಖ್ಯ ಕಾರಣ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ ಆಯ್ಕೆ ಎಂದಿದ್ದಾರೆ ಮಾಜಿ ಆಟಗಾರ ಸುನಿಲ್ ಗವಾಸ್ಕರ್.ಏಕೆಂದರೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಏಕೈಕ ಸ್ಪಿನ್ನರ್​ಗೆ ಸ್ಥಾನ ನೀಡಲಾಗಿತ್ತು. ಅಂದರೆ ರವೀಂದ್ರ ಜಡೇಜಾ ಅವರನ್ನು ಹೊರತುಪಡಿಸಿದರೆ 2ನೇ ಸ್ಪಿನ್ ಬೌಲರ್ ಆಡುವ ಬಳಗದಲ್ಲಿಲ್ಲ. ಅದರಲ್ಲೂ ಅಶ್ವಿನ್ ಅವರನ್ನು ತಂಡದಿಂದ ಕೈ ಬಿಟ್ಟಿರುವುದೇ ಅಚ್ಚರಿ ಎಂದಿದ್ದಾರೆ ಗವಾಸ್ಕರ್.ಏಕೆಂದರೆ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ಗೆ ತಲುಪಲು ಅಶ್ವಿನ್ ಅವರ ಕೊಡುಗೆ ಇದೆ. ಇದಾಗ್ಯೂ ಅವರನ್ನು ಕೈ ಬಿಟ್ಟಿದ್ದಾರೆ. ಇಲ್ಲಿ ಉಮೇಶ್ ಯಾದವ್ ಅವರ ಬದಲಿಗೆ ಅನುಭವಿ ಸ್ಪಿನ್ನರ್ ಅಶ್ವಿನ್ ಅವರಿಗೆ ಚಾನ್ಸ್ ನೀಡಬೇಕಿತ್ತು ಎಂದು ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.
ಅಲ್ಲದೆ ಪ್ರಸ್ತುತ ಟೆಸ್ಟ್​​ ಕ್ರಿಕೆಟ್​ನ ನಂಬರ್ 1 ಬೌಲರ್​ನನ್ನು ನಿರ್ಣಾಯಕ ಪಂದ್ಯದಿಂದ ಕೈ ಬಿಟ್ಟಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ನಡೆಯ ಬಗ್ಗೆ ಸುನಿಲ್ ಗವಾಸ್ಕರ್ ಅಸಮಾಧಾನ ಹೊರಹಾಕಿದ್ದಾರೆ.ಒಟ್ಟಿನಲ್ಲಿ ರವಿಚಂದ್ರನ್ ಅಶ್ವಿನ್ ಅವರನ್ನು ಹೊರಗಿಟ್ಟು ಕಣಕ್ಕಿಳಿದ ಟೀಮ್ ಇಂಡಿಯಾ ಮೊದಲ ದಿನದಾಟದಲ್ಲಿ ಕೇವಲ 3 ವಿಕೆಟ್ ಪಡೆಯುವಲ್ಲಿ ಮಾತ್ರ ಯಶಸ್ವಿಯಾಗಿದೆ. ಇದಾಗ್ಯೂ ದ್ವಿತೀಯ ದಿನದಾಟದಲ್ಲಿ ಭಾರತೀಯ ಬೌಲರ್​ಗಳು ಮೇಲುಗೈ ಸಾಧಿಸಲಿದ್ದಾರಾ ಕಾದು ನೋಡಬೇಕಿದೆ.ಫೈನಲ್ ಪಂದ್ಯದಲ್ಲಿ ಕಣಕ್ಕಿಳಿದ ಟೀಮ್ ಇಂಡಿಯಾ ಪ್ಲೇಯಿಂಗ್ 11 ಹೀಗಿದೆ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಶ್ರೀಕರ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.

source https://tv9kannada.com/photo-gallery/cricket-photos/wtc-final-2023-sunil-gavaskar-slams-team-india-for-ignoring-r-ashwin-kannada-news-zp-596424.html

Leave a Reply

Your email address will not be published. Required fields are marked *