Sports News: Asia Cup 2025: ಹ್ಯಾಟ್ರಿಕ್ ಗೆಲುವು ಸಾಧಿಸಿ ಇತಿಹಾಸ ಸೃಷ್ಟಿಸುತ್ತಾ ಟೀಂ ಇಂಡಿಯಾ? India vs Pakistan Asia Cup 2025 Final: 2025 ರ ಏಷ್ಯಾಕಪ್ ಫೈನಲ್ನಲ್ಲಿ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗುತ್ತಿವೆ.
ಈ ಐತಿಹಾಸಿಕ ಪಂದ್ಯದಲ್ಲಿ ಗೆದ್ದರೆ, ಭಾರತ ತಂಡವು ದಾಖಲೆಯ 9ನೇ ಏಷ್ಯಾಕಪ್ ಪ್ರಶಸ್ತಿಯನ್ನು ಗೆಲ್ಲುವುದಲ್ಲದೆ, ಒಂದೇ ಟೂರ್ನಿಯಲ್ಲಿ ಒಂದೇ ಎದುರಾಳಿಯನ್ನು ಮೂರು ಬಾರಿ ಸೋಲಿಸಿದ ಮೊದಲ ತಂಡ ಎಂಬ ಅನನ್ಯ ವಿಶ್ವ ದಾಖಲೆಯನ್ನು ನಿರ್ಮಿಸಲಿದೆ. ಈ ಫೈನಲ್ ಭಾರತಕ್ಕೆ ಹ್ಯಾಟ್ರಿಕ್ ಗೆಲುವಿನ ಅವಕಾಶವಾಗಿದೆ. 2025 ರ ಏಷ್ಯಾಕಪ್ನ (Asia Cup 2025) ಫೈನಲ್ ಪಂದ್ಯವು ನಾಳೆ ಅಂದರೆ ಸೆಪ್ಟೆಂಬರ್ 28 ರಂದು ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವೆ ನಡೆಯಲಿದೆ. ಏಷ್ಯಾಕಪ್ ಫೈನಲ್ನಲ್ಲಿ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗುತ್ತಿರುವುದು ಇದೇ ಮೊದಲು.
ಭಾರತ ತಂಡವು ಗುಂಪು ಹಂತದಲ್ಲಿ, ನಂತರ ಸೂಪರ್ 4 ಸುತ್ತಿನಲ್ಲಿ ಪಾಕಿಸ್ತಾನವನ್ನು ಸೋಲಿಸಿತು. ಇದೀಗ ಫೈನಲ್ನಲ್ಲಿ ಮೂರನೇ ಬಾರಿಗೆ ಮುಖಾಮುಖಿಯಾಗಲು ಸಜ್ಜಾಗಿವೆ. ಈ ಪಂದ್ಯದಲ್ಲೂ ಟೀಂ ಇಂಡಿಯಾ ಗೆಲುವು ಸಾಧಿಸಿದರೆ, ದಾಖಲೆಯ 9ನೇ ಬಾರಿಗೆ ಏಷ್ಯಾಕಪ್ ಟ್ರೋಫಿಯನ್ನು ಎತ್ತಿಹಿಡಿಯುವುದಲ್ಲದೆ ಕ್ರಿಕೆಟ್ ಇತಿಹಾಸದಲ್ಲಿ ಇದುವರೆಗೆ ಯಾವುದೇ ತಂಡ ಮಾಡಿರದ ದಾಖಲೆಯನ್ನು ನಿರ್ಮಿಸಲಿದೆ.
ಹ್ಯಾಟ್ರಿಕ್ ಗೆಲುವು ಸಿಗುತ್ತದೆಯೇ? ಈ ಫೈನಲ್ ಭಾರತ ತಂಡಕ್ಕೆ ವಿಶೇಷವಾಗಿರುತ್ತದೆ. ಏಕೆಂದರೆ ಸೂರ್ಯಕುಮಾರ್ ಪಡೆಗೆ ಇತಿಹಾಸ ನಿರ್ಮಿಸುವ ಅವಕಾಶವಿದೆ. ಈ ಫೈನಲ್ನಲ್ಲಿ ಟೀಂ ಇಂಡಿಯಾ ಗೆದ್ದರೆ, ಒಂದೇ ಟೂರ್ನಮೆಂಟ್ನಲ್ಲಿ ತಂಡವೊಂದು ಮೂರು ಬಾರಿ ಒಂದೇ ಎದುರಾಳಿಯನ್ನು ಸೋಲಿಸಿದ ಮೊದಲ ತಂಡ ಎಂಬ ದಾಖಲೆ ಬರೆಯಲಿದೆ. ಐದು ಅಥವಾ ಹೆಚ್ಚಿನ ತಂಡಗಳು ಪಾಲ್ಗೊಳ್ಳುವ ಟೂರ್ನಿಗಳಲ್ಲಿ, ಎರಡು ತಂಡಗಳು ಪರಸ್ಪರ ಮೂರು ಬಾರಿ ಮುಖಾಮುಖಿಯಾದ ಎರಡು ನಿದರ್ಶನಗಳು ಮಾತ್ರ ಇವೆ.
ಮೊದಲನೆಯದಾಗಿ, 1983 ರ ವಿಶ್ವಕಪ್ನಲ್ಲಿ, ಭಾರತ ಮತ್ತು ವೆಸ್ಟ್ ಇಂಡೀಸ್ ಮೂರು ಬಾರಿ ಮುಖಾಮುಖಿಯಾಗಿದ್ದವು. ಆ ವೇಳೆ ಭಾರತ ಎರಡು ಪಂದ್ಯಗಳನ್ನು ಗೆದ್ದಿದ್ದರೆ, ವೆಸ್ಟ್ ಇಂಡೀಸ್ ಒಂದು ಪಂದ್ಯವನ್ನು ಗೆದ್ದುಕೊಂಡಿತ್ತು. ನಂತರ, 2004 ರ ಏಷ್ಯಾಕಪ್ನಲ್ಲಿ ಭಾರತ ಮತ್ತು ಶ್ರೀಲಂಕಾ ಮೂರು ಬಾರಿ ಮುಖಾಮುಖಿಯಾಗಿದ್ದವು. ಇದರಲ್ಲಿ ಶ್ರೀಲಂಕಾ ಎರಡು ಪಂದ್ಯಗಳನ್ನು ಗೆದ್ದುಕೊಂಡರೆ, ಭಾರತ ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿತ್ತು. ಇದೀಗ ಈ ಫೈನಲ್ನಲ್ಲಿ ಟೀಮ್ ಇಂಡಿಯಾ ಗೆದ್ದರೆ ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಮೊದಲ ಹ್ಯಾಟ್ರಿಕ್ ಗೆಲುವು ಸಾಧಿಸಿದಂತ್ತಾಗುತ್ತದೆ.
ಟೀಂ ಇಂಡಿಯಾಗೆ ಸುಲಭ ಗೆಲುವು ಈ ಏಷ್ಯಾಕಪ್ ಬಗ್ಗೆ ಹೇಳುವುದಾದರೆ, ಭಾರತ ಮತ್ತು ಪಾಕಿಸ್ತಾನ ಗುಂಪು ಹಂತದಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗಿದ್ದವು. ಆ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ಕೇವಲ 127 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಭಾರತ ಕೇವಲ 16 ಓವರ್ಗಳಲ್ಲಿ 7 ವಿಕೆಟ್ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ನಂತರ ಸೂಪರ್ ಫೋರ್ನಲ್ಲಿ ಎರಡೂ ತಂಡಗಳು ಮುಖಾಮುಖಿಯಾಗಿದ್ದವು. ಅಲ್ಲಿಯೂ ಕೂಡ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 171 ರನ್ ಕಲೆಹಾಕಿತು. ಗುರಿ ಬೆನ್ನಟ್ಟಿದ ಟೀಂ ಇಂಡಿಯಾ 19 ಓವರ್ಗಳಲ್ಲಿ 6 ವಿಕೆಟ್ಗಳಿಂದ ಪಂದ್ಯವನ್ನು ಗೆದ್ದುಕೊಂಡಿತ್ತು.
Views: 12