ಬಹುನಿರೀಕ್ಷಿತ ಭಾರತ ಹಾಗೂ ಪಾಕಿಸ್ತಾನ ನಡುಣ ಹೈವೋಲ್ಟೇಜ್ ಪಂದ್ಯ ಆರಂಭವಾಗಿದೆ. ಏಷ್ಯಾ ಕಪ್ ಟಿ20 ಟೂರ್ನಿಯಲ್ಲಿ ಉಭಯ ತಂಡಗಳು ಕಾದಾಟ ನಡೆಸಲಿವೆ. ಈ ಪಂದ್ಯ ಉಭಯ ತಂಡಗಳಿಗೂ ಮಹತ್ವದಾಗಿದೆ. ಈ ಪಂದ್ಯದಲ್ಲಿ ಗೆಲುವು ದಾಖಲಿಸಿ ಸೂಪರ್ ಫೋರ್ ಹಂತಕ್ಕೆ ಅರ್ಹತೆ ಪಡೆಯಲು ಎರಡೂ ತಂಡಗಳು ಫೈಟ್ ನಡೆಸುತ್ತಿವೆ.
ಈ ಕಾದಾಟ ವಿಶ್ವದ ಚಿತ್ತವನ್ನು ಕದ್ದಿದೆ. ದುಬೈನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಪಾಕಿಸ್ತಾನ ಟಾಸ್ ಗೆದ್ದು ಬ್ಯಾಟಿಂಗ್ ಮಾಡುವ ನಿರ್ಧಾರವನ್ನು ಪ್ರಕಟಿಸಿದೆ.
ಭಾರತ ಈ ಟೂರ್ನಿಯಲ್ಲಿ ಆಡಿದ ಮೊದಲ ಪಂದ್ಯದಲ್ಲಿ ಯುಎಇ ವಿರುದ್ಧ ಭರ್ಜರಿ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ 9 ವಿಕೆಟ್ಗಳ ಜಯ ಸಾಧಿಸಿರುವ ಭಾರತ, ಎರಡನೇ ಗೆಲುವಿನ ಹುಡುಕಾಟದಲ್ಲಿದೆ.
ಇನ್ನು ಪಾಕಿಸ್ತಾನ ಸಹ ತಾನಾಡಿದ ಮೊದಲ ಪಂದ್ಯದಲ್ಲಿ ಜಯ ಸಾಧಿಸಿದ್ದು, ಎರಡನೇ ಗೆಲುವಿನ ಕನಸು ಕಾಣುತ್ತಿದೆ. ಟೀಮ್ ಇಂಡಿಯಾದಲ್ಲಿ ಸ್ಟಾರ್ ಆಟಗಾರರ ಗುಂಪೇ ಇದ್ದು ಎಲ್ಲರ ಕಣ್ಣುಗಳು ನೆಟ್ಟಿವೆ. ಸೂರ್ಯಕುಮಾರ್ ಮುಂದಾಳತ್ವದಲ್ಲಿ ಟೀಮ್ ಇಂಡಿಯಾ ಇದೇ ಮೊದಲ ಬಾರಿಗೆ ಪಾಕಿಸ್ತಾನ ತಂಡವನ್ನು ಎದುರಿಸಲಿದೆ.
Views: 34