ಜಪಾನ್‌ನ ಐಚಿ ಪ್ರಿಫೆಕ್ಚರಲ್ ಕೊರೊಗಿ ಸ್ಪೋರ್ಟ್ಸ್ ಪಾರ್ಕ್‌ನಲ್ಲಿ ನಡೆದ ಏಷ್ಯನ್ ಗೇಮ್ಸ್ 2026ರ ಮಹಿಳಾ ಟಿ20 ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು 147 ರನ್‌ಗಳ ಬೃಹತ್ ಅಂತರದಿಂದ ಮಣಿಸಿದ ಭಾರತ ಚಿನ್ನದ ಪದಕಕ್ಕೆ ಮುತ್ತಿಕ್ಕಿದೆ.
ಸ್ಮೃತಿ-ಶಫಾಲಿ ಸ್ಫೋಟಕ ಜೊತೆಯಾಟ: ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ ಪರ ಆರಂಭಿಕರಾದ ಸ್ಮೃತಿ ಮಂಧಾನ ಹಾಗೂ ಶಫಾಲಿ ವರ್ಮಾ ಲಂಕಾ ಬೌಲರ್‌ಗಳ ಮೇಲೆ ಸವಾರಿ ಮಾಡಿದರು. ಈ ಜೋಡಿ ಮೊದಲ ವಿಕೆಟ್‌ಗೆ ಕೇವಲ 11.2 ಓವರ್‌ಗಳಲ್ಲಿ 99 ರನ್‌ಗಳ ಭರ್ಜರಿ ಜೊತೆಯಾಟವಾಡಿತು. 29 ಎಸೆತಗಳಲ್ಲಿ 3 ಸಿಕ್ಸರ್ ಹಾಗೂ 3 ಬೌಂಡರಿ ಬಾರಿಸಿದ ಶಫಾಲಿ ವರ್ಮಾ (48 ರನ್) ಕೇವಲ 2 ರನ್‌ಗಳಿಂದ ಅರ್ಧಶತಕ ತಪ್ಪಿಸಿಕೊಂಡರು.
ಮತ್ತೊಂದೆಡೆ ಅಬ್ಬರದ ಬ್ಯಾಟಿಂಗ್ ಮುಂದುವರಿಸಿದ ಉಪನಾಯಕಿ ಸ್ಮೃತಿ ಮಂಧಾನ, ಕೇವಲ 45 ಎಸೆತಗಳಲ್ಲಿ 7 ಬೃಹತ್ ಸಿಕ್ಸರ್ ಹಾಗೂ 5 ಬೌಂಡರಿಗಳ ನೆರವಿನಿಂದ 79 ರನ್ ಚಚ್ಚಿದರು.
ರಿಚಾ ಘೋಷ್ ರುದ್ರತಾಂಡವ: ಮಂಧಾನ ಔಟಾದ ಬಳಿಕ ಕ್ರೀಸ್‌ಗೆ ಬಂದ ವಿಕೆಟ್‌ಕೀಪರ್ ರಿಚಾ ಘೋಷ್ ಮೈದಾನದಲ್ಲಿ ಅಕ್ಷರಶಃ ಬಿರುಗಾಳಿ ಸೃಷ್ಟಿಸಿದರು. ಕೇವಲ 22 ಎಸೆತಗಳಲ್ಲಿ 6 ಬೌಂಡರಿ ಮತ್ತು 3 ಸಿಕ್ಸರ್‌ಗಳೊಂದಿಗೆ ಅಜೇಯ 49 ರನ್ ಸಿಡಿಸಿ ತಂಡದ ಮೊತ್ತವನ್ನು 200ರ ಗಡಿ ದಾಟಿಸಿದರು. ನಾಯಕಿ ಹರ್ಮನ್‌ಪ್ರೀತ್ ಕೌರ್ 19 ರನ್ ಕಾಣಿಕೆ ನೀಡಿದರು. ಈ ಮೂಲಕ ಭಾರತ ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 216 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.
69 ರನ್‌ಗಳಿಗೆ ಲಂಕಾ ಆಲೌಟ್: ಚಿನ್ನದ ಪದಕಕ್ಕಾಗಿ 217 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ಶ್ರೀಲಂಕಾ ತಂಡ, ಭಾರತದ ಶಿಸ್ತುಬದ್ಧ ಬೌಲಿಂಗ್ ದಾಳಿಗೆ ತತ್ತರಿಸಿತು. ಕೇವಲ 15.4 ಓವರ್‌ಗಳಲ್ಲಿ 69 ರನ್‌ಗಳಿಗೆ ಸರ್ವಪತನ ಕಂಡ ಲಂಕಾ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟಿತು. ಭಾರತ 147 ರನ್‌ಗಳ ಅಮೋಘ ಗೆಲುವು ದಾಖಲಿಸಿ ಚಿನ್ನದ ಪದಕ ಮುಡಿಗೇರಿಸಿಕೊಂಡಿತು. ಮೂರನೇ ಸ್ಥಾನಕ್ಕಾಗಿ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಮಣಿಸಿದ ಪಾಕಿಸ್ತಾನ ಕಂಚಿನ ಪದಕ ತನ್ನದಾಗಿಸಿಕೊಂಡಿದೆ.
ಸಂಕ್ಷಿಪ್ತ ಸ್ಕೋರ್:
- ಭಾರತ: 216/3 (20 ಓವರ್)
- ಶ್ರೀಲಂಕಾ: 69/10 (15.4 ಓವರ್)
ಪ್ಲೇಯಿಂಗ್ XI ವಿವರ:
ಭಾರತ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಗುಣಲನ್ ಕಮಲಿನಿ, ರಿಚಾ ಘೋಷ್ (ವಿಕೆಟ್ ಕೀಪರ್), ಭಾರತಿ ಫುಲ್ಮಾಲಿ, ದೀಪ್ತಿ ಶರ್ಮಾ, ಶ್ರೇಯಾಂಕಾ ಪಾಟೀಲ್, ಶ್ರೀ ಚರಣಿ, ನಂದನಿ ಶರ್ಮಾ, ಕ್ರಾಂತಿ ಗೌಡ್.
ಶ್ರೀಲಂಕಾ: ಚಾಮರಿ ಅಥಾಪತ್ತು (ನಾಯಕಿ), ಇಮೇಶಾ ದುಲಾನಿ, ಹಾಸಿನಿ ಪೆರೇರಾ, ಹರ್ಷಿತಾ ಸಮರವಿಕ್ರಮ, ಕವಿಶಾ ದಿಲ್ಹಾರಿ, ಹನ್ಸಿಮಾ ಕರುಣಾರತ್ನೆ, ಕೌಶಾನಿ ನುತ್ಯಂಗನಾ (ವಿಕೆಟ್ ಕೀಪರ್), ಮಿಥಾಲಿ ಅಯೋಧ್ಯಾ, ಕಾವ್ಯಾ ಕವಿಂದಿ, ಚಾಮುಡಿ ಪ್ರಬೋದಾ, ಸುಗಂದಿಕಾ ಕುಮಾರಿ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1
Whats App Channel: https://whatsapp.com/channel/0029VbDbOsBD8SE2H0L3d40j