
ಬಾರ್ಡರ್- ಗವಾಸ್ಕರ್ ಟೆಸ್ಟ್ ಸರಣಿಯ ಸಲುವಾಗಿ ಭಾರತ ಪ್ರವಾಸದಲ್ಲಿ ಆಸ್ಟ್ರೇಲಿಯಾಕ್ಕೆ ಇದುವರೆಗೂ ಯಾವುದೇ ಶುಭ ಸುದ್ದಿ ಸಿಕ್ಕಿಲ್ಲ. ಮೊದಲು ನಾಗ್ಪುರ ಮತ್ತು ದೆಹಲಿ ಟೆಸ್ಟ್ನಲ್ಲಿ ಹೀನಾಯ ಸೋಲು ಕಂಡಿದ್ದ ಕಾಂಗರೂಗಳಿಗೆ ಇದೀಗ ಮತ್ತೊಂದು ದೊಡ್ಡ ಹೊಡೆತ ಬಿದ್ದಿದೆ. ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಮೂರನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ. ವಾಸ್ತವವಾಗಿ ಕೌಟುಂಬಿಕ ಕಾರಣಗಳಿಂದಾಗಿ ದೆಹಲಿ ಟೆಸ್ಟ್ ನಂತರ ಆಸ್ಟ್ರೇಲಿಯಾಕ್ಕೆ ಮರಳಿದ್ದ ಪ್ಯಾಟ್ ಕಮ್ಮಿನ್ಸ್ 3ನೇ ಟೆಸ್ಟ್‌ಗೆ ಗೈರಾಗಲಿದ್ದಾರೆ ಎಂದು ವರದಿಯಾಗಿದೆ. ಈಗ ಹೊರಬಿದ್ದಿರುವ ಸುದ್ದಿ ಪ್ರಕಾರ ಪ್ಯಾಟ್ ಕಮ್ಮಿನ್ಸ್ ಅವರ ತಾಯಿಯ ಆರೋಗ್ಯ ಹದಗೆಟ್ಟಿರುವುದರಿಂದ ಇಂದೋರ್ ಟೆಸ್ಟ್‌ಗೆ ಅವರು ಅಲಭ್ಯರಾಗಲಿದ್ದಾರೆ ಎಂದು ತಿಳಿದುಬಂದಿದೆ.
Views: 0