ಕೇರಳದಲ್ಲಿ ನಡೆದ ರಾಷ್ಟ್ರೀಯ ವಿಜ್ಞಾನ ವಸ್ತು ಪ್ರದರ್ಶನ : ಚಿತ್ರದುರ್ಗದ ವಿಜೇತ ಮಕ್ಕಳಿಗೆ ಸನ್ಮಾನ

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಫೆ.10) : ಜ.27 ರಂದು ಕೇರಳದಲ್ಲಿ ನಡೆದ ರಾಷ್ಟ್ರೀಯ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಭಾಗವಹಿಸಿ ವಿಜೇತರಾದ ಚಿತ್ರದುರ್ಗ ಡಾನ್ ಬಾಸ್ಕೋ ಆಂಗ್ಲ ಶಾಲೆಯ 10 ನೇ ತರಗತಿ ವಿದ್ಯಾರ್ಥಿಗಳಾದ ಸಫ್ವಾನ್ ಮತ್ತು ಶಾಶ್ವತ್ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ವಿ.ತಿಪ್ಪೇಸ್ವಾಮಿ ಅವರು ಸನ್ಮಾನಿಸಿದರು.

ಇದೇ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಬಾಲಕಿಯರ ಸ.ಪ.ಪೂ.ಕಾಲೇಜಿನ ವಿದ್ಯಾರ್ಥಿನಿ ಶ್ವೇತ ಸಹ ಸನ್ಮಾನಿಸಿ ಗೌರವಿಸಲಾಯಿತು. ಇ.ಸಿ.ಓ ಇನಾಯತ್, ಎಂ.ಆರ್.ನಾಗರಾಜ್, ಸಮೀರಾ ಮತ್ತು ಮುಖ್ಯ ಶಿಕ್ಷಕರು, ಪೋಷಕರು ಹಾಜರಿದ್ದರು.

 

The post ಕೇರಳದಲ್ಲಿ ನಡೆದ ರಾಷ್ಟ್ರೀಯ ವಿಜ್ಞಾನ ವಸ್ತು ಪ್ರದರ್ಶನ : ಚಿತ್ರದುರ್ಗದ ವಿಜೇತ ಮಕ್ಕಳಿಗೆ ಸನ್ಮಾನ first appeared on Kannada News | suddione.

from ಚಿತ್ರದುರ್ಗ – Kannada News | suddione https://ift.tt/eCJEPKs
via IFTTT

Leave a Reply

Your email address will not be published. Required fields are marked *