
ಚಿತ್ರದುರ್ಗ ಏ. 26
ಪೋಟೋ ಮತ್ತು ವರದಿ ಸುರೇಶ್ ಪಟ್ಟಣ್
ಇಂದಿನ ಯುವ ರಾಜಕಾರಣಿಗಳಿಗೆ ಹಾಗೂ ಯುವ ಪೀಳಿಗೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದಾರಿ ದೀಪವಾಗಿದ್ದಾರೆ. ಅವರ 50 ವರ್ಷದ ರಾಜಕೀಯ ಜೀವನ ಬೇರೆಯವರಿಗೆ ಮಾರ್ಗದರ್ಶನವಾಗಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದರು.


ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 50 ವರ್ಷದ ರಾಜಕೀಯ ಜೀವನದ ಹಿನ್ನಲೆಯಲ್ಲಿ ಮೇ. 9 ರಂದು ಚಿತ್ರದುರ್ಗ ನಗರದ ಹೊರವಲಯದ ಶ್ರೀ ಮಾದರ ಚೆನ್ನಯ್ಯ ಗುರುಪೀಠದ ಪಕ್ಕದಲ್ಲಿರುವ ಮೈದಾನದಲ್ಲಿ ನಡೆಸಲು ಉದ್ದೇಶಿಸಿರುವ ಅಭೀಮಾನೋತ್ಸವ ಕಾರ್ಯಕ್ರಮದ ಹಿನ್ನಲೆಯಲ್ಲಿ ಭಾನುವಾರ ಭೂಮಿ ಪೂಜೆ ಧ್ವಜಾರೋಹನ ಹಾಗೂ ಗೋ ಪೂಜೆಯನ್ನು ನೇರವೇರಿಸಿ ಮಾತನಾಡಿದ ಅವರು, ಯಡಿಯೂರಪ್ಪರವರೆಂದರೆ ರಾಜ್ಯದಲ್ಲಿ ಹೋರಾಟವನ್ನು ನಡೆಸುವ ವ್ಯಕ್ತಿ ಎಂದು ಗುರುತಿಸಲಾಗಿದೆ. ಬಿಎಸ್.ವೈ ಎಂದರೆ ಹೋರಾಟ ಎಂಬ ಮನೋಭಾವ ಎಲ್ಲರಲ್ಲೂ ಸಹಾ ಮೂಡಿದೆ.


ಛಲಕ್ಕೆ ಮತ್ತೋಂದು ಹೆಸರೆ ಯಡೆಯೂರಪ್ಪ ಎನ್ನಬಹುದಾಗಿದೆ. ಜನ ಸೇವೆಗಾಗಿಯೇ ತಮ್ಮ ಜಿವನನ್ನೇ ಮುಡುಪಾಗಿ ಇಟ್ಟಿದ್ದಾರೆ. ದಲಿತರು, ಪರಿಶಿಷ್ಟ ಜಾತಿ ಮತ್ತು ಪಂಗಡ, ಮಹಿಳೆಯರಿಗೆ ಧ್ವನಿಯಾಗಿ ಕೆಲಸವನ್ನು ಮಾಡಿದ್ದಾರೆ. ಅಧಿಕಾರಕ್ಕಾಗಿ ಎಂದು ಸಹಾ ಹೋರಾಟವನ್ನು ಮಾಡಲಿಲ್ಲ, ಬಟಡವರ ಕಣ್ಣಿರನ್ನು ಒರೆಸುವ ಸಲುವಾಗಿ ಕೆಲಸವನ್ನು ಮಾಡಿದ್ದಾರೆ 50 ವರ್ಷ ಬಡವರ ಪರವಾಗಿ ಕೆಲಸವನ್ನು ಮಾಡಿದ್ದಾರೆ ಸೈಕಲ್ ಮೇಲೆ ರಾಜ್ಯ ಪ್ರವಾಸ ಮಾಡಿ, ಪಕ್ಷವನ್ನು ಕಟ್ಟಿ ಬೆಳೆಸಿದ ಅವರ ಹೋರಾಟ ಮುಂದಿನ ಪೀಳಿಗೆಗೆ ಪ್ರೇರಣೆಯಾಗಲಿ ಎಂದರು.
ಹಣದಿಂದ ಅಧಿಕಾರವನ್ನು ಪಡೆಯಲು ಸಾಧ್ಯವಿಲ್ಲ ಜನರ ಪ್ರೀತಿ ವಿಶ್ವಾಸದ ಮೂಲಕ ಅಧಿಕಾರವನ್ನು ಹಿಡಿಯುವ ಪ್ರಯತ್ನವನ್ನು ಮಾಡಿದ್ದಾರೆ. ಅವರು ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸುವಲ್ಲಿ ತನ್ನ ಕುಟುಂಬದ ಬಗ್ಗೆಯೂ ಸಹಾ ಆಲೋಚನೆಯನ್ನು ಮಾಡದೆ ಬಿಜೆಪಿಯನ್ನು ಸಂಘಟಿಸಿ ಅಧಿಕಾರಕ್ಕೆ ಬರುವಂತೆ ಮಾಡಿದ್ದಾರೆ.
ಹಬ್ಬ ಹರಿದಿನ ಎನ್ನದೆ ವರ್ಷ ಪೂರ್ತಿಯಾಗಿ ರಾಜ್ಯದಲ್ಲಿ ಪ್ರವಾಸವನ್ನು ಮಾಡುವುದರ ಮೂಲಕ ಪಕ್ಷವನ್ನು ಬೆಳಸಿದ್ದಾರೆ. ತಮ್ಮ ಮುಂದೆ ಬಂದ ಹಲವಾರು ರೀತಿಯ ಸವಾಲುಗಳನ್ನು ಎದುರಿಸುವುದರ ಮೂಲಕ ಅವುಗಳನ್ನು ಮೆಟ್ಟಿ ನಿಂತು ಪಕ್ಷವನ್ನು ರಾಜ್ಯದಲ್ಲಿ ಕಟ್ಟಿದ್ದಾರೆ. ಅವರ 50 ವರ್ಷದ ರಾಜಕೀಯ ಜೀವನ ಇಂದಿನ ಯುವ ರಾಜಕಾರಣಿಗಳಿಗೆ ಮಾರ್ಗದರ್ಶನವಾಗಬೇಕಿದೆ, ರಾಜಕಾರಣಿ ಎಂದರೆ ಯಾವ ರೀತಿ ಇರಬೇಕು ಎಂಬುದನ್ನು ಯಡೆಯೂರಪ್ಪರವರನ್ನು ನೋಡಿ ಕಲಿಯಬೇಕಿದೆ ನುಡಿದಂತೆ ನಡೆದ ವ್ಯಕ್ತಿಯಾಗಿದ್ದಾರೆ, ಈ ಹಿನ್ನಲೆಯಲ್ಲಿ ಮೇ. 9ರಂದು ಅವರಿಗೆ ಅಭಿಮಾನವನ್ನು ತೋರಿಸುವ ಕ್ಷಣವಾಗಿದೆ, ಮೇ. 8ರಂದು ವಿವಿಧ ಜಾನಪದ ಕಲಾ ತಂಡದೊಂದಿಗೆ ಯಡೆಯೂರಪ್ಪರವರ ಪುರ ಪ್ರವೇಶವಾಗಲಿದೆ.
ಮೇ.9 ರಂದು 2.30ಕ್ಕೆ ವೇದಿಕೆ ಕಾರ್ಯಕ್ರಮ ಪ್ರಾರಂಭವಾಗಲಿದ್ದು, ಉದ್ಘಾಟನೆ ಯನ್ನು ಕೇಂದ್ರ ಗೃಹ ಸಚಿವ ಅಮಿತ್ಷಾ ನೆರವೇರಿಸಿ ಯಡಿಯೂರಪ್ಪರವನ್ನು ಸನ್ಮಾನಿಸಲಿದ್ದಾರೆ ಗಾಯಕರಾದ ವಿಜಯ ಪ್ರಕಾಶ್ ಮತ್ತು ಅನುರಾಧ ಭಟ್ ಅವರ ಸಂಗೀತ ಸುಧೆ ಕಾರ್ಯಕ್ರಮಕ್ಕೆ ಮೆರುಗು ನೀಡಲಿದೆ. ಎಂದರು,.
ವಿಧಾನ ಸಭೆಯ ವಿರೋಧ ಪಕ್ಷದ ನಾಯಕರಾದ ಆರ್ ಆಶೋಕ್ ಮಾತನಾಡಿ, ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಪಯಣವನ್ನು ಸಂಭ್ರಮದಿಂದ ಆಚರಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ. ನಾಡಿಗೆ ಯಡಿಯೂರಪ್ಪ ಸಿದ್ಧತೆ ನೀಡಿದ ಕೊಡುಗೆಗೆ ಎಲ್ಲ ವರ್ಗದವರೂ ಮೆಚ್ಚುಗೆ ವ್ಯಕ್ತಪಡಿಸುತ್ತಾರೆ. ಇದಕ್ಕಾಗಿ ಅರ್ಥಪೂರ್ಣ. ಭವ್ಯ ಕಾರ್ಯಕ್ರಮ ನಡೆಸುತ್ತಿದ್ದೇವೆ ಎಂದ ಅವರು. ರಾಜ್ಯದ ಮೂಲೆಮೂಲೆಗಳಿಂದ ಅಭಿಮಾನಿಗಳು ಲಕ್ಷಾಂತರ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಜನರು ಬರಲಿದ್ದಾರೆ. ಒಂದು ಐತಿಹಾಸಿಕ ಕಾರ್ಯಕ್ರಮ ಇದಾಗಲಿದೆ ಎಂದು ವಿವರಿಸಿದರು.
ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವ ಕಾಂಗ್ರೆಸ್ಗೆ ಶಕ್ತಿ ನೀಡಿದಂತೆ, ಚಿತ್ರದುರ್ಗದ ಈ ಅಭಿಮಾನೋತ್ಸವ ಬಿಜೆಪಿಯನ್ನು ಮತ್ತೆ ಅಧಿಕಾರದ ಗದ್ದುಗೆಗೆ ಏರಿಸಲಿದೆ,” ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಾಜಿ ಸಚಿವರಾದ ಬಿ.ಶ್ರೀರಾಮುಲು, ಸಂಸದರಾದ ಗೋವಿಂದ ಕಾರಜೋಳ ಸೇರಿದಂತೆ ಹಲವು ಗಣ್ಯರು ಈ ಸಮಾರಂಭವು ರಾಜ್ಯದ ಇತಿಹಾಸದಲ್ಲಿ ದಾಖಲಾಗಲಿದೆ ಎಂದು ಬಣ್ಣಿಸಿದರು. ಚಿತ್ರದುರ್ಗ, ದಾವಣಗೆರೆ, ತುಮಕೂರು, ಶಿವಮೊಗ್ಗ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸೇರಿಸುವ ಮೂಲಕ ಬಿಜೆಪಿಯ ಸಂಘಟನಾ ಶಕ್ತಿಯನ್ನು ಪ್ರದರ್ಶಿಸಲು ವೇದಿಕೆ ಸಿದ್ಧವಾಗಿದೆ.
ಕಾರ್ಯಕ್ರಮಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಅಭಿಮಾನಿಗಳು ಆಗಮಿಸುವ ನಿರೀಕ್ಷೆಯಿದೆ. ಬಂದವರಿಗೆ ಯಾವುದೇ ತೊಂದರೆಯಾಗದಂತೆ ಒಂದೂವರೆ ಲಕ್ಷ ಜನರು ಏಕಕಾಲಕ್ಕೆ ಕುಳಿತು ಊಟ ಮಾಡುವಂತಹ ಬೃಹತ್ ಸಭಾಂಗಣ ನಿರ್ಮಿಸಲಾಗುತ್ತಿದೆ. ಬೆಂಗಳೂರಿನ ಕಾರ್ಯಕರ್ತರು ಈ ಭೋಜನದ ಉಸ್ತುವಾರಿ ವಹಿಸಿಕೊಂಡಿರುವುದು ವಿಶೇಷ.
ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರಾದ ಜಿ.ಎಂ.ಸಿದ್ದೇಶ್ವರ, ಬಿ.ಸಿ.ಪಾಟೀಲ್, ಎ.ನಾರಾಯಣಸ್ವಾಮಿ, ಎನ್.ರವಿಕುಮಾರ್, ಜಿ.ಎಚ್.ತಿಪ್ಪಾರೆಡ್ಡಿ, ರೇಣುಕಾಚಾರ್ಯ, ಮುನಿರತ್ನ, ಎನ್.ಮಹೇಶ್, ಹರತಾಳು ಹಾಲಪ್ಪ, ಕೆ.ಎಸ್.ನವೀನ್, ರೂಪಾಲಿನಾಯ್ಕ್, ಸಂಜಯ್ ಪಾಟೀಲ್, ಮಂಜುಳಾ, ಎಸ್.ಕೆ.ಬಸವರಾಜನ್, ಪ್ರೀತಂ ಗೌಡ್ರು, ಹರೀಶ್ ಪೂಂಜಾ, ಎಂ.ಚಂದ್ರಪ್ಪ, ದೊಡ್ಡನಗೌಡ ಪಾಟೀಲ್, ಬಸವರಾಜ ದಡೆಸೂಗುರು, ಧನಂಜಯ ಸರ್ಜಿ, ಶಿವಯೋಗಿಸ್ವಾಮಿ, ಕೃಷ್ಣನಾಯ್ಕ್, ಕುಡಚಿ ರಾಜೀವ್, ತಮ್ಮೇಶ್ ಗೌಡ್ರು, ಲಿಂಗಮೂರ್ತಿ, ಜ್ಯೊತಿ ಗಣೇಶ್, ವೈ.ಎ.ನಾರಾಯಣಸ್ವಾಮಿ ವಿಭಾಗ ಸಹಾ ಪ್ರಬಾರಿ ಎ.ಮುರಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಧುರಿ ಗೀರೀಶ್, ವೆಂಕಟೇಶ್ ಯಾದವ್, ವೀರಶೈವ ಬ್ಯಾಂಕ್ ಅಧ್ಯಕ್ಷರಾದ ಪಟೇಲ್ ಶಿವಕುಮಾರ್, ನಗರಾಭೀವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾ ಸಿದ್ದಾಪುರದ ಸುರೇಶ್, ಮಾಜಿ ಪ್ರಧಾನ ಕಾರ್ಯದರ್ಶಿಗಳಾದ ಸಂಪತ್ ಕುಮಾರ್, ಜಿಲ್ಲಾ ವಕ್ತಾರ ನಾಗರಾಜ್ ಬೇದ್ರೇ, ಎಸ್.ಸಿ.ಮೋರ್ಚಾದ ಅಧ್ಯಕ್ಷ ಪರಶುರಾಮ್, ಗ್ರಾಮಾಂತರ ಅಧ್ಯಕ್ಷ ನಾಗರಾಜ್, ದಗ್ಗೆ ಶಿವಪ್ರಕಾಶ್, ಹನುಮಂತಪ್ಪ ಉಪ್ಪರ್ ಅರುಣ ಮುರುಳಿ ಸೇರಿದಂತೆ ಇತರರು ಭಾಗವಹಿಸಿದ್ದರು.
ಇದಕ್ಕೂ ಮುನ್ನಾ ನಗರದ ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀಗಳು ಕಬೀರಾನಂದಾಶ್ರಮದ ಶ್ರೀ ಶಿವಲಿಂಗಾನಂದ ಶ್ರೀಗಳು, ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು, ಯಾದ ಗುರಪೀಠದ ಶ್ರೀ ಕೃಷ್ಣಯಾದವನಂದ ಶ್ರಿಗಳು, ಕುಂಚಿಟಿಗ ಮಹಾ ಮಠದ ಶ್ರೀ ಶಾಂತವೀರ ಶ್ರೀಗಳು ಮುರುಘಾಮಠದ ಶ್ರೀ ಬಸವಪ್ರಭು ಶ್ರೀಗಳು ಧ್ವಜಾರೋಹಣ ಕಾರ್ಯಕ್ರಮದಲ್ಲಿ ಹಾಜರಿದ್ದರು.