ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರನ್ನು ನೇಮಕ ಮಾಡಿ ಪಕ್ಷದ ಹೈಕಮಾಂಡ್ ಆದೇಶ ಹೊರಡಿಸಿದೆ.

ನವದೆಹಲಿ: ಬಹು ದಿನಗಳಿಂದ ಚರ್ಚೆಯಲ್ಲಿದ್ದ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಯು ಕೊನೆಗೂ ಆಗಿದೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಹಾಗೂ ಶಿಕಾರಿಪುರ ಶಾಸಕ ಬಿ.ವೈ.
ವಿಜಯೇಂದ್ರ ಅವರನ್ನು ನೂತನ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ. ಈ ನೇಮಕ ತಕ್ಷಣಕ್ಕೆ ಜಾರಿಗೆ ಬರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ದಕ್ಷಿಣ ಕನ್ನಡ ಸಂಸದರಾಗಿರುವ ನಳಿನ್ ಕುಮಾರ್ ಕಟೀಲ್ ಇದುವರೆಗೆ ರಾಜ್ಯಾಧ್ಯಕ್ಷರಾಗಿದ್ದರು. ಅವರ ಅಧಿಕಾರಾವಧಿ ರಾಜ್ಯ ವಿಧಾನಸಭೆ ಚುನಾವಣೆಗೂ ಮುನ್ನವೇ ಪೂರ್ಣಗೊಂಡಿತ್ತು.
ವಿಧಾನಸಭಾ ಚುನಾವಣೆಯಲ್ಲಿ ಸೋತ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಸಾಕಷ್ಟು ಚರ್ಚೆಗಳು ಶುರುವಾಗಿದ್ದವು. ಇದರ ನಡುವೆ ಹಲವು ನಾಯಕರ ಹೆಸರುಗಳು ಮುಂಚೂಣಿಗೆ ಬಂದಿದ್ದವು. ಇದೇ ವೇಳೆ, ಅಧಿಕೃತ ವಿಪಕ್ಷ ನಾಯಕರನ್ನು ಆಯ್ಕೆ ಮಾಡದ ವಿಷಯ ಕೂಡ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಹೀಗಾಗಿ ರಾಜ್ಯದ ಉನ್ನತ ಹುದ್ದೆಗಳಿಗೆ ಯಾರನ್ನು ನೇಮಕ ಮಾಡಲಾಗುತ್ತದೆ ಎಂಬ ಪ್ರಶ್ನೆಗಳು ಎದ್ದಿದ್ದವು.
ಕೊನೆಗೆ ಇಂದು ಬಿ.ವೈ.ವಿಜಯೇಂದ್ರ ಅವರನ್ನು ರಾಜ್ಯ ಘಕಟದ ಅಧ್ಯಕ್ಷರನ್ನಾಗಿ ಹೈಕಮಾಂಡ್ ಆಯ್ಕೆ ಮಾಡಿದೆ. ಶಿಕಾರಿಪುರ ಹಾಲಿ ಶಾಸಕರೂ ಆಗಿರುವ ವಿಜಯೇಂದ್ರ, ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಈಗ ಅವರಿಗೆ ಪಕ್ಷದಲ್ಲಿ ಬಡ್ತಿ ನೀಡಿದಂತಾಗಿದೆ. ಈ ಹಿಂದೆ ವಿಜಯೇಂದ್ರ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.
ಪ್ರಧಾನಿ, ಅಮಿತ್ ಶಾ ಗೆ ಧನ್ಯವಾದ ಸಮರ್ಪಣೆ ಮಾಡಿದ ವಿಜಯೇಂದ್ರ: ”ಅಚಲ ವಿಶ್ವಾಸವಿಟ್ಟು ಪಕ್ಷ ಸಂಘಟನೆಯ ಬಹುದೊಡ್ಡ ಜವಾಬ್ದಾರಿ ವಹಿಸಿದ ಮಾನ್ಯ ಪ್ರಧಾನಿ ಶ್ರೀ@narendramodi ji ಅವರಿಗೆ , ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ @JPNaddaji ಅವರಿಗೆ, ಗೃಹ ಸಚಿವ ಶ್ರೀ @AmitShahji ಅವರಿಗೆ ಹಾಗೂ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ@blsanthoshji ಅವರುಗಳಿಗೆ ತುಂಬು ಹೃದಯದ ಕೃತಜ್ಞತೆಗಳು. ಸಂಘದ ಹಾಗೂ ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಸರ್ವರ ನಿರೀಕ್ಷೆ ಹಾಗೂ ಜನರ ಅಪೇಕ್ಷೆಗೆ ಪೂರಕವಾಗಿ ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿಗೆ ಹೊಸ ಚೈತನ್ಯ ತುಂಬಲು ಕಾರ್ಯಕರ್ತರೊಂದಿಗೆ ಕಾರ್ಯಕರ್ತನಾಗಿ ಅಹರ್ನಿಶಿ ದುಡಿಯುವ ಸಂಕಲ್ಪ ತೊಟ್ಟಿರುವೆ. ನಾಡಿನ ಜನರ ಆಶೀರ್ವಾದವೇ ನನಗೆ ಶ್ರೀರಕ್ಷೆ” ಎಂದು ವಿಜಯೇಂದ್ರ ಟ್ವೀಟ್ ಮಾಡಿ ಹರ್ಷ ವ್ಯಕ್ತಪಡಿಸಿದ್ದಾರೆ.
ಸಂಸದ ರಾಘವೇಂದ್ರ ಟ್ವೀಟ್: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಆಯ್ಕೆಯಾದ ಬೆನ್ನಲ್ಲೇ ಶಿವಮೊಗ್ಗದ ಸಂಸದರಾದ ಸಹೋದರ ಬಿ.ವೈ.ರಾಘವೇಂದ್ರ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ. ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾಗಿ ನೇಮಕವಾಗಿರುವ ಬಿ.ವೈ ವಿಜಯೇಂದ್ರ ಅವರಿಗೆ ಹಾರ್ದಿಕ ಶುಭಾಶಯಗಳು. ಹಿರಿಯರ ಆಶೀರ್ವಾದ ಹಾಗೂ ಕಿರಿಯರ ಬೆಂಬಲದೊಂದಿಗೆ ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸಿ ಮುನ್ನಡೆಸುತ್ತಾರೆ ಎಂಬ ಆಶಯವನ್ನು ಅವರು ವ್ಯಕ್ತಪಡಿಸಿದ್ದಾರೆ.
ಮುಂದುವರೆದು, ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ , ದಿ. ಅನಂತಕುಮಾರ್ ಮುಂತಾದ ನಾಯಕರುಗಳ ದಾರಿಯಲ್ಲಿ ನಡೆಯುತ್ತಾರೆ ಅನ್ನುವ ಭರವಸೆ ನನಗಿದೆ. ಅವರ ನಾಯಕತ್ವದಲ್ಲಿ ಪಕ್ಷ ಹೊಸ ಚೈತನ್ಯದೊಂದಿಗೆ ಬೆಳೆಯಲಿ, ರಾಜ್ಯವನ್ನು ಆವರಿಸಿಕೊಂಡಿರುವ ಕಾಂಗ್ರೆಸ್ ದುರಾಡಳಿತದ ಕಾರ್ಮೋಡದ ನಡುವೆ ಭರವಸೆಯ ಒಂದು ಹೊಸ ಕಿರಣವಾಗಿ ಹೊರಹೊಮ್ಮಲಿ ಎಂದು ಹಾರೈಸುತ್ತೇನೆ ಎಂದು ರಾಘವೇಂದ್ರ ತಿಳಿಸಿದ್ದಾರೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group : https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharechat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1