ಮಂಡ್ಯ : ನಟ ಅಭಿಷೇಕ್ ಅಂಬರೀಷ್-ಅವಿವಾ ದಂಪತಿಗೆ ಗಂಡು ಮಗು ಜನನವಾಗಿದ್ದು, ಅಂಬರೀಷ್ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ.
ರೆಬೆಲೆ ಸ್ಟಾರ್ ಅಂಬರೀಷ್ ಮನೆಯಲ್ಲಿ ಈಗ ಖುಷಿ ಮನೆ ಮಾಡಿದೆ. ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿದಪ್ಪ ಪಾಲಕರಾಗಿದ್ದಾರೆ. ಅವಿವಾ ಅವರು ಗಂಡುಮಗುವಿಗೆ ಜನ್ಮನೀಡಿದ್ದಾರೆ. ಇಂದು (ನವೆಂಬರ್ 12) ಮಗು ಜನಿಸಿದೆ. ಮಗುವಿನ ಜೊತೆ ಸುಮಲತಾ ಅಂಬರೀಷ್ ಅವರು ಪೋಸ್ ಕೊಟ್ಟಿದ್ದಾರೆ. ಈ ಫೋಟೋ ವೈರಲ್ ಆಗಿದೆ. ತಾಯಿ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.
ಅವಿವಾ ಅವರು ಇಂದು ಬೆಳಗ್ಗೆ 8;30 ರ ಸುಮಾರಿಗೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ, ಸುಮಲತಾ ಅವರು ಆಸ್ಪತ್ರೆಯಲ್ಲಿ ಗಂಡು ಮಗುವನ್ನು ಅಪ್ಪಿ ಮುದ್ದಾಡಿದ್ದಾರೆ. 2023 ರಲ್ಲಿ ಅಭಿಷೇಕ್ ಅಂಬರೀಷ್ -ಅವಿವಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.