ಚಿತ್ರದುರ್ಗ ಜು. 22
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ನೀಟ್ ಪರೀಕ್ಷೆಯಲ್ಲಿನ ಅಕ್ರಮ ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿರುವುದನ್ನು ಖಂಡಿಸಿ ಪ್ರಧಾನಿ ನರೇಂದ್ರಮೋದಿ ನಿವಾಸದ ಎದುರು ಧರಣಿ ನಡೆಸಿದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಬಂಧನ ವಿರೋಧಿಸಿ ನಿನ್ನೆ ರಾತ್ರಿ ಸಂತೇಪೇಟೆ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸಿ ಮೋದಿ, ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿ ಟೈರ್ ಬೆಂಕಿ ಹಚ್ಚಲಾಯಿತು.
ನೀಟ್ ಪರೀಕ್ಷೆಯಲ್ಲಿನ ಅಕ್ರಮದಲ್ಲಿ ಭಾಗಿಯಾಗಿರುವವರನ್ನು ಶಿಕ್ಷಿಸುವಂತೆ ಸೋನಂ ವಾಂಗ್ಚುಕ್ ದೆಹಲಿಯ ಜಂತರ್ ಮಂರ್ತನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವುದಕ್ಕೆ ಬೆಂಬಲಿಸಿ ಸೋಮವಾರ ಪ್ರತಿಭಟನೆ ನಡೆಸಿದ ಸಹಸ್ರಾರು ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿ ಚದುರಿಸಿರುವುದನ್ನು ವಿರೋಧಿಸಿ ಮೋದಿ ನಿವಾಸದ ಎದುರು ಧರಣಿ ನಡೆಸಿದ ರಾಹುಲ್ ಗಾಂಧಿಯನ್ನು ಬಂಧನದಿಂದ ಬಿಡುಗಡೆ ಗೊಳಿಸಬೇಕು. ಇಲ್ಲವಾದಲ್ಲಿ ದೇಶಾದ್ಯಂತ ಉಗ್ರ ಪ್ರತಿಭಟನೆ ನಡೆಸಲಾಗುವುದೆಂದು ಪ್ರತಿಭಟನಾಕಾರರು ಎಚ್ಚರಿಸಿದರು.
ಸಂವಿಧಾನದಲ್ಲಿ ಎಲ್ಲರಿಗೂ ಪ್ರತಿಭಟಿಸುವ ಹಕ್ಕನ್ನು ಡಾ.ಬಿ.ಆರ್.ಅಂಬೇಡ್ಕರ್ ನೀಡಿದ್ದಾರೆ. ಪ್ರಧಾನಿ ಮೋದಿ ತನ್ನ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ರಾಹುಲ್ ಗಾಂಧಿಯನ್ನು ಬಂಧಿಸಿ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡುತ್ತಿದ್ದಾರೆಂದು ಪ್ರತಿಭಟನಾಕಾರರು ಧಿಕ್ಕಾರಗಳನ್ನು ಕೂಗಿದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಪಿ.ಸಂಪತ್ ಕುಮಾರ್, ಜಿಲ್ಲಾ ಗ್ಯಾರೆಂಟಿ ಅಧ್ಯಕ್ಷ ಶಿವಣ್ಣ ಗಂಜಿಗಟ್ಟೆ, ತಾಲ್ಲೂಕು ಗ್ಯಾರೆಂಟಿ ಅಧ್ಯಕ್ಷ ಪ್ರಕಾಶ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು.ಲಕ್ಷ್ಮಿಕಾಂತ್, ಜಿ.ವಿ.ಮಧುಗೌಡ, ಮುದಾಸಿರ್, ಖುದ್ದುಸ್, ನಾಗರಾಜ್ ಪೈಲಟ್, ಅಶೋಕ್ ನಾಯ್ಡು, ವಾಸಿಂ, ರಹಮಾನ್, ಆಶ್ರಫ್ ಇನ್ನು ಅನೇಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
Follow the ಸಮಗ್ರ ಸುದ್ದಿ Telegram Channel: https://t.me/SamagraSuddi
ಸಮಗ್ರ ಸುದ್ದಿ channel on WhatsApp: https://whatsapp.com/channel/0029VbDbOsBD8SE2H0L3d40j