Kabaddi player Dhanalakshmi Suicide: ಸ್ನೇಹಿತರ ಜೊತೆಗೆ ಮೈಸೂರು ದಸರಾ ನೋಡಿಕೊಂಡು ಬಂದಿದ್ದ ಧನಲಕ್ಷ್ಮೀಯವರು ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಅರಿಶಿನಕುಂಟೆ ಆದರ್ಶನಗರದ ನಿವಾಸದಲ್ಲಿ ಧನಲಕ್ಷ್ಮೀ(25) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸ್ನೇಹಿತರೊಂದಿಗೆ ಮೈಸೂರು ದಸರಾ ನೋಡಿಕೊಂಡು ಬಂದಿದ್ದ ಧನಲಕ್ಷ್ಮೀಯವರು ಮನೆಯ ರೂಂನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿ ಧನಲಕ್ಷ್ಮೀಯವರ ತಂದೆ ಹಾಗೂ ಸಹೋದರ ಇದ್ದಾಗಲೇ ಈ ಘಟನೆ ನಡೆದಿದೆ. ಮೂಲತಃ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕೆ.ತಿಮ್ಮಲಾಪುರ ನಿವಾಸಿಯಾಗಿರುವ ಧನಲಕ್ಷ್ಮೀ ಕಳೆದ 5 ವರ್ಷದಿಂದ ನೆಲಮಂಗಲದ ಅರಿಶಿನಕುಂಟೆಯ ಆದರ್ಶನಗರದ ಬಾಡಿಗೆ ಮನೆಯಲ್ಲಿ ವಾಸವಿದ್ದರು.
ಅಂತಾರಾಷ್ಟ್ರೀಯ ಮಟ್ಟದಲ್ಲಿ 3 ಬಾರಿ ಕಬ್ಬಡಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಧನಲಕ್ಷ್ಮೀಯವರು ಕಾಡುಗೋಡಿಯ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಸ್ನೇಹಿತರ ಜೊತೆಗೆ ಮೈಸೂರು ದಸರಾ ನೋಡಿಕೊಂಡು ಬಂದಿದ್ದ ಧನಲಕ್ಷ್ಮೀಯವರು ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೋಷಕರು ನೀಡಿದ ದೂರಿನ ಮೇರೆಗೆ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group : https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharechat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1