ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಬೇಕು ಎಂಬ ಕನಸು ಕಾಣುತ್ತಿರುವ ಯುವಜನತೆಗೆ ಇಲ್ಲಿದೆ ಗುಡ್ ನ್ಯೂಸ್. ಮಹಾರಾಷ್ಟ್ರದ ಮುಂಬೈಯಲ್ಲಿ ಕೇಂದ್ರ ಕಚೇರಿ ಹೊಂದಿರುವ ಭಾರತದ ಪ್ರತಿಷ್ಠಿತ ಬ್ಯಾಂಕ್ ಆಫ್ ಇಂಡಿಯಾ (Bank of India) ಖಾಲಿ ಇರುವ ಕ್ರೆಡಿಟ್ ಆಫೀಸರ್ಸ್ (GBO Stream) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 779 ಹುದ್ದೆಗಳು ಖಾಲಿ ಇದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನಾಂಕವಾಗಿದೆ. ಹುದ್ದೆಗಳ ಸಂಪೂರ್ಣ ವಿವರ, ಶೈಕ್ಷಣಿಕ ಅರ್ಹತೆ, ವಯೋಮಿತಿ ಮತ್ತು ಅರ್ಜಿ ಸಲ್ಲಿಸುವ ವಿಧಾನದ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ: ಒಟ್ಟು 779 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಹುದ್ದೆಗಳ ವರ್ಗೀಕರಣ ಈ ಕೆಳಗಿನಂತಿದೆ:
- ಎಂಎಂಜಿಎಸ್-II (MMGS-II): 677 ಹುದ್ದೆಗಳು
- ಎಂಎಂಜಿಎಸ್-III (MMGS-III): 61 ಹುದ್ದೆಗಳು
- ಎಸ್‌ಎಂಜಿಎಸ್-IV (SMGS-IV): 41 ಹುದ್ದೆಗಳು
ಶೈಕ್ಷಣಿಕ ಅರ್ಹತೆ ಮತ್ತು ಕಾರ್ಯಾನುಭವ:
- ಭಾರತದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹುದ್ದೆಗೆ ಅನುಗುಣವಾಗಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರಬೇಕು.
- ಇದರ ಜೊತೆಗೆ ಸಿಎ, ಸಿಎಂಎ-ಐಸಿಡಬ್ಲ್ಯುಎ, ಸಿಎಸ್ ಅಥವಾ ಸಿಎಫ್‌ಎ (CA/CMA-ICWA/CS/CFA) ಓದಿದ ಅಭ್ಯರ್ಥಿಗಳೂ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
- ವಿವಿಧ ಹುದ್ದೆಗಳ ಶ್ರೇಣಿಗೆ ಅನುಗುಣವಾಗಿ ಅಭ್ಯರ್ಥಿಗಳು 3 ರಿಂದ 7 ವರ್ಷಗಳ ವೃತ್ತಿಪರ ಕಾರ್ಯಾನುಭವ ಹೊಂದಿರಬೇಕಾದದ್ದು ಕಡ್ಡಾಯವಾಗಿದೆ.
ವಯೋಮಿತಿ:
- ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳ ವಯಸ್ಸು 25 ರಿಂದ 45 ವರ್ಷದೊಳಗಿರಬೇಕು.
- ಸರ್ಕಾರದ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ: ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಅರ್ಜಿ ಶುಲ್ಕ:
- ಸಾಮಾನ್ಯ ಮತ್ತು ಇತರ ವರ್ಗದ ಅಭ್ಯರ್ಥಿಗಳಿಗೆ: 850 ರೂ.
- ಎಸ್‌ಸಿ, ಎಸ್‌ಟಿ ಹಾಗೂ ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ: 175 ರೂ.
- ಶುಲ್ಕವನ್ನು ಆನ್‌ಲೈನ್ ಮೂಲಕವೇ ಪಾವತಿಸಬೇಕು.
ಆಯ್ಕೆ ಪ್ರಕ್ರಿಯೆ: ಅರ್ಹ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆನ್‌ಲೈನ್ ಪರೀಕ್ಷೆಯು ಒಟ್ಟು 125 ಅಂಕಗಳಿಗೆ ನಡೆಯಲಿದ್ದು, ಇಂಗ್ಲಿಷ್ ಭಾಷೆ ಮತ್ತು ಹುದ್ದೆಗೆ ಸಂಬಂಧಿಸಿದ ವಿಷಯಗಳ ಮೇಲೆ ಪ್ರಶ್ನೆಗಳಿರುತ್ತವೆ. ಕರ್ನಾಟಕದ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಬೆಂಗಳೂರು, ಹುಬ್ಬಳ್ಳಿ ಮತ್ತು ಧಾರವಾಡದಲ್ಲಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ:
- ಬ್ಯಾಂಕ್ ಆಫ್ ಇಂಡಿಯಾದ ನೇಮಕಾತಿ ಲಿಂಕ್ (ibpsreg.ibps.in/boicojun26/) ಅಥವಾ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
- ಮೊದಲು ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳಿ (Registration).
- ಬಳಿಕ ಹೊಸ ಪಾಸ್‌ವರ್ಡ್ ಬಳಸಿ ಲಾಗಿನ್ ಆಗಿ.
- ಸ್ಕ್ರೀನ್ ಮೇಲೆ ಕಾಣುವ ಅಪ್ಲಿಕೇಷನ್ ಫಾರ್ಮ್ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
- ಕೇಳಲಾದ ಅಗತ್ಯ ದಾಖಲೆಗಳ ಸ್ಕ್ಯಾನ್ ಪ್ರತಿಯನ್ನು ಅಪ್‌ಲೋಡ್ ಮಾಡಿ.
- ಆನ್‌ಲೈನ್ ಮೂಲಕ ನಿಗದಿತ ಅರ್ಜಿ ಶುಲ್ಕ ಪಾವತಿಸಿ.
- ಭರ್ತಿ ಮಾಡಿದ ಎಲ್ಲ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ ‘Submit’ ಬಟನ್ ಕ್ಲಿಕ್ ಮಾಡಿ.
- ಮುಂದಿನ ರೆಫರೆನ್ಸ್ ಗಾಗಿ ಭರ್ತಿ ಮಾಡಿದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ.
ಹೆಚ್ಚಿನ ಮಾಹಿತಿಗಾಗಿ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್‌ಸೈಟ್ ವಿಳಾಸ:bankofindia.co.inಗೆ ಭೇಟಿ ನೀಡಬಹುದು ಅಥವಾ ಸಹಾಯವಾಣಿ ಸಂಖ್ಯೆ 1800 103 1906 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು.
Follow the ಸಮಗ್ರ ಸುದ್ದಿ Telegram Channel: https://t.me/SamagraSuddi
ಸಮಗ್ರ ಸುದ್ದಿ channel on WhatsApp: