ಬೆಂಗಳೂರು: ಪಿಜಿಯೊಳಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ.

ಬೆಂಗಳೂರು: ಮಹಿಳಾ ಪೇಯಿಂಗ್​ ಗೆಸ್ಟ್​ (ಪಿ.ಜಿ) ಒಳಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಹತ್ಯೆ ಮಾಡಿರುವ ಘಟನೆ ಮಂಗಳವಾರ ತಡರಾತ್ರಿ ಕೋರಮಂಗಲದ ವಿ.ಆರ್.ಲೇಔಟ್‌ನಲ್ಲಿ ನಡೆದಿದೆ. ಬಿಹಾರ ಮೂಲದ ಕೃತಿ ಕುಮಾರಿ‌ (24) ಕೊಲೆಯಾದ ಯುವತಿ.

ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೃತಿ ಕುಮಾರಿ ಕೆಲಸ ಮಾಡುತ್ತಿದ್ದರು. ತಡರಾತ್ರಿ 11.10ರ ಸುಮಾರಿಗೆ ಚಾಕು ಹಿಡಿದು ಪಿ.ಜಿಯೊಳಗೆ ನುಗ್ಗಿದ ಆರೋಪಿ, 3ನೇ ಮಹಡಿಯಲ್ಲಿನ ರೂಮಿನ ಸಮೀಪದಲ್ಲೇ ಯುವತಿ ಮೇಲೆ ಚಾಕುವಿನಿಂದ ಕತ್ತು ಕೊಯ್ದು ಕೊಲೆಗೈದು ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಕೋರಮಂಗಲ ಪೊಲೀಸರು, ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪರಿಚಯಸ್ಥ ವ್ಯಕ್ತಿಯಿಂದಲೇ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ. ಪಿ.ಜಿಯಲ್ಲಿನ ಭದ್ರತಾ ವೈಫಲ್ಯವೇ ಘಟನೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಕೋರಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Source : https://www.etvbharat.com/kn/!state/man-killed-young-woman-entering-into-paying-guest-in-bengaluru-kas24072401006

Leave a Reply

Your email address will not be published. Required fields are marked *