
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ (Bay of Bengal) ವಾಯುಭಾರ ಕುಸಿತದ ಪರಿಣಾಮ ಇಂದು (ಡಿ.12) ರಾಜ್ಯದ 9 ಜಿಲ್ಲೆಗಳಿಗೆ ಹವಾಮಾನ ಇಲಾಖೆ (Indian Meteorological Department) ಯಲ್ಲೋ ಅಲರ್ಟ್ ಘೋಷಿಸಿದೆ.
ಬೆಂಗಳೂರು (Bengaluru) ನಗರ ಸೇರಿದಂತೆ ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗ, ರಾಮನಗರ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳ ಅನೇಕ ಕಡೆ ಸಾಧಾರಣ ಮಳೆಯಾಗುವ ಸಾಧೆತೆಯಿದ್ದು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆ ಮಳೆಯಾಗಲಿದೆ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ ಎಂದು ವರದಿ ಮಾಡಿದೆ.
Source : https://publictv.in/air-pressure-drop-in-bay-of-bengal-yellow-alert-for-9-districts-in-karnataka
Views: 0