10 ರೂ.ಗೆ ಲಘು ಉಪಹಾರ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಸವೇಶ್ವರ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ಪಾಲಾಕ್ಷಯ್ಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ, (ಮಾ.31): ಕರ್ನಾಟಕ ರಾಜ್ಯ ನಿರ್ಗತಿಕರ ಮತ್ತು ಮಕ್ಕಳ ಹಿತರಕ್ಷಣಾ ಸಮಿತಿ ವತಿಯಿಂದ ನಗರದ ಪ್ರತಿಷ್ಟಿತ ಬಸವೇಶ್ವರ ಆಸ್ಪತ್ರೆ ಮುಂಭಾಗ ಶುಕ್ರವಾರ ಬಡ ರೋಗಿಗಳಿಗೆ ಹಾಗೂ ಅವರ ಸಂಬಂಧಿಕರಿಗೆ ಹತ್ತು ರೂ.ಗೆ ಲಘು ಉಪಹಾರ, ನೀರು ಗಂಜಿ ನೀಡುವ ಕಾರ್ಯಕ್ರಮಕ್ಕೆ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಪಾಲಾಕ್ಷಯ್ಯ ಚಾಲನೆ ನೀಡಿದರು.

ಉಪಹಾರ ವಿತರಣೆಗೆ ಚಾಲನೆ ನೀಡಿ ಮಾತನಾಡಿದ ಡಾ.ಪಾಲಾಕ್ಷಯ್ಯ ಇಂತಹ ದುಬಾರಿ ಕಾಲದಲ್ಲಿ ಹತ್ತು ರೂ.ಗೆ ಲಘು ಉಪಹಾರ ನೀಡುತ್ತಿರುವುದು ನಿಜಕ್ಕೂ ಪುಣ್ಯದ ಕೆಲಸ. ಇದರಿಂದ ಆಸ್ಪತ್ರೆಗೆ ಬರುವ ರೋಗಿಗಳಿಗೆ ಹಾಗೂ ಸಂಬಂಧಿಕರಿಗೆ ಅನುಕೂಲವಾಗಲಿದೆ. ಇಂತಹ ಪರೋಪಕಾರದ ಕೆಲಸಕ್ಕೆ ನಮ್ಮ ಬೆಂಬಲ ಸದಾ ಇದ್ದೇ ಇದೆ. ಇದರ ಪ್ರಯೋಜನ ಪಡೆದುಕೊಳ್ಳುವಂತೆ ರೋಗಿಗಳಲ್ಲಿ ಮನವಿ ಮಾಡಿದರು.

ಲೇಖಕ ಹೆಚ್.ಆನಂದ್‍ಕುಮಾರ್ ಮಾತನಾಡಿ ಕರ್ನಾಟಕ ರಾಜ್ಯ ನಿರ್ಗತಿಕರ ಮತ್ತು ಮಕ್ಕಳ ಹಿತರಕ್ಷಣಾ ಸಮಿತಿ ಕೋವಿಡ್ ಸಂದರ್ಭದಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಹಾಗೂ ಸಂಬಂಧಿಕರಿಗೆ ಉಚಿತ ಊಟ ನೀಡಿ ಉಪಚರಿಸಿತು. ಆಸ್ಪತ್ರೆ ಬರುವ ಬಡ ರೋಗಿಗಳಿಗೆ ಇದು ಅತ್ಯಂತ ಪ್ರಯೋಜನವಾಗಲಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ನಿರ್ಗತಿಕ ಮತ್ತು ಮಕ್ಕಳ ಹಿತರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ಹೆಚ್.ಹೆಚ್.ಮಂಜುನಾಥ್ ಮಾತನಾಡಿ ಸದಸ್ಯತ್ವ ಪಡೆದ ಕುಟುಂಬಗಳಿಗೆ ನಗರದ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಶೇ.10 ರಿಂದ 50 ಪರ್ಸೆಂಟ್ ಶಾಲಾ ಕಾಲೇಜುಗಳಲ್ಲಿ ಹತ್ತರಿಂದ ನಲವತ್ತು ಪರ್ಸೆಂಟ್, ಮೆಡಿಕಲ್ ಸ್ಟೋರ್‍ಗಳಲ್ಲಿ ಶೇ.10 ರಷ್ಟು ದಿನಸಿ ಅಂಗಡಿಗಳಲ್ಲಿ ಶೇ.5 ರಷ್ಟು, ಇನ್ನು ನೂರಕ್ಕೂ ಹೆಚ್ಚು ಸ್ಟೋರ್‍ಗಳಲ್ಲಿ ಐದರಿಂದ ಐವತ್ತು ರಷ್ಟು ರಿಯಾಯಿತಿ ಪಡೆಯಬಹುದಾಗಿದೆ.

ನಮ್ಮ ಸದಸ್ಯತ್ವದ ಗುರುತಿನ ಚೀಟಿ ತೋರಿಸಿದಲ್ಲಿ ಸರ್ಕಾರಿ ಆಸ್ಪತ್ರೆ ಮತ್ತು ಬಸವೇಶ್ವರ ಆಸ್ಪತ್ರೆ, ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಬಡ ರೋಗಿಗಳಿಗೆ ಹಾಗೂ ಸಂಬಂಧಿಕರಿಗೆ ಮಧ್ಯಾಹ್ನ ಹತ್ತು ರೂ.ಗೆ ಲಘು ಉಪಹಾರ ನೀಡಲಾಗುವುದು. ಜೊತೆಗೆ ಸದಸ್ಯತ್ವ ಪಡೆದ ಕಡು ಬಡ ಕುಟುಂಬದ ಪ್ರತಿಭಾವಂತ ಮಕ್ಕಳಿಗೆ ಉಚಿತವಾಗಿ ಪಠ್ಯ ಪುಸ್ತಕ ಮತ್ತು ಹೆಚ್ಚಿನ ವಿದ್ಯಾಭ್ಯಾಸ್ಕಕಾಗಿ ಪ್ರೋತ್ಸಾಹಿಸಲಾಗುವುದು ಎಂದು ಹೇಳಿದರು.

ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಕೆ.ಆರ್.ಮಂಜುನಾಥ್, ಜಾನಪದ ಜಾಗೃತಿ ಪರಿಷತ್ ರಾಜ್ಯಾಧ್ಯಕ್ಷ ಹೆಚ್.ಪ್ಯಾರೆಜಾನ್, ಕಣಿವೆ ಮಾರಮ್ಮ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ, ಕರ್ನಾಟಕ ರಾಜ್ಯ ನಿರ್ಗತಿಕರ ಮತ್ತು ಮಕ್ಕಳ ಹಿತರಕ್ಷಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಶ್ರೀಮತಿ ವೆಂಕಟಲಕ್ಷ್ಮಿ ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.

The post 10 ರೂ.ಗೆ ಲಘು ಉಪಹಾರ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಸವೇಶ್ವರ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ಪಾಲಾಕ್ಷಯ್ಯ first appeared on Kannada News | suddione.

from ಚಿತ್ರದುರ್ಗ – Kannada News | suddione https://ift.tt/Mhd2PDY
via IFTTT

Views: 0

Leave a Reply

Your email address will not be published. Required fields are marked *