ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದ ಬಳಿ ಕೆಎಸ್ಆರ್ಟಿಸಿ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ ವಿದ್ಯಾರ್ಥಿಗಳು ಸೇರಿ 20 ಜನ ಪ್ರಯಾಣಿಕರಿಗೆ ಗಾಯಗಳಾಗಿವೆ. ಇನ್ನೊಂದೆಡೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ MB ಅಯ್ಯನಹಳ್ಳಿ ಬಳಿ ಖಾಸಗಿ ಬಸ್ ಪಲ್ಟಿಯಾಗಿದೆ. ಈ ಎರಡು ಸುದ್ದಿ ವಿವರ ಇಲ್ಲಿದೆ.
ಬೆಳಗಾವಿ, (ಸೆಪ್ಟೆಂಬರ್ 26): ಬೆಳಗಾವಿ (Belagavi) ಜಿಲ್ಲೆಯ ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದ ಬಳಿ ಕೆಎಸ್ಆರ್ಟಿಸಿ ಬಸ್ (KSRTC Bus) ಪಲ್ಟಿಯಾಗಿದೆ. ಘಟನೆಯಲ್ಲಿ ವಿದ್ಯಾರ್ಥಿಗಳು(Students) ಸೇರಿ 20 ಜನ ಪ್ರಯಾಣಿಕರಿಗೆ ಗಾಯಗಳಾಗಿವೆ. ಇಂದು (ಸೆಪ್ಟೆಂಬರ್ 26) ಹುಲಕುಂದ ಗ್ರಾಮದಿಂದ ರಾಮದುರ್ಗ ಕಡೆಗೆ ಹೊರಟ್ಟಿದ್ದ 50ಕ್ಕೂ ಅಧಿಕ ಪ್ರಯಾಣಿಕರಿದ್ದ ಬಸ್, ಫಾಟಾ ಕಟ್ ಆಗಿ ಮರಕ್ಕೆ ಡಿಕ್ಕಿ ಹೊಡೆದು ಬಳಿ ಫಲ್ಟಿಯಾಗಿದೆ. ಘಟನೆಯಲ್ಲಿ 20 ಜನ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಕೂಡಲೇ ಗಯಾಳುಗಳನ್ನು ರಾಮದುರ್ಗ ಸರ್ಕಾರಿ ಆಸ್ಪತ್ರೆ ಸಾಗಿಸಲಾಗಿದೆ. ಅದೃಷ್ಟವಶಾತ್, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಖಾಸಗಿ ಬಸ್ ಪಲ್ಟಿ
ಇನ್ನೊಂದೆಡೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ MB ಅಯ್ಯನಹಳ್ಳಿ ಬಳಿ ಇಂದು (ಸೆ.26) ಖಾಸಗಿ ಬಸ್ ಪಲ್ಟಿಯಾಗಿದೆ. 10 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಇನ್ನು ಬಸ್ ಚಾಲಕನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನಿಂದ ಕಲಬುರಗಿಗೆ ತೆರಳುತ್ತಿದ್ದ ಬಸ್, MB ಅಯ್ಯನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group : https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharechat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1