ಬೆಟ್ಟದನಾಗೇನಹಳ್ಳಿ ಗ್ರಾಮಕ್ಕೆ ಒಂದೇ ಗಣಪತಿ: 61ನೇ ವರ್ಷದ ಗಣೇಶ ವಿಸರ್ಜನೆ ಅದ್ದೂರಿ.

ಭೀಮಸಮುದ್ರ:

ವರದಿ ಮತ್ತು ಫೋಟೋ ಕೃಪೆ ವೇದಮೂರ್ತಿ ಭೀಮಸಮುದ್ರ ಮೊ : 8088076203

ಸಮೀಪದ ಬೆಟ್ಟದನಾಗೇನಹಳ್ಳಿ ಗ್ರಾಮದಲ್ಲಿ ಶ್ರೀ ಸರ್ವಸಿದ್ಧಿ ವಿನಾಯಕ ಸ್ವಾಮಿ ಸೇವಾ ಸಮಿತಿಯ ವತಿಯಿಂದ 61ನೇ ವರ್ಷದ ಗಣೇಶೋತ್ಸವದ ಅಂಗವಾಗಿ ಗಣೇಶ ವಿಸರ್ಜನಾ ಕಾರ್ಯಕ್ರಮವನ್ನು ಅದ್ದೂರಿಯಾಗಿ ನೆರವೇರಿಸಲಾಯಿತು.

ಸುಮಾರು 800 ಮನೆಗಳನ್ನು ಹೊಂದಿರುವ ಬೆಟ್ಟದನಾಗೇನಹಳ್ಳಿ ಗ್ರಾಮದಲ್ಲಿ ಗಣೇಶೋತ್ಸವವನ್ನು ವಿಶಿಷ್ಟವಾಗಿ ಆಚರಿಸಲಾಗುತ್ತಿದೆ. ಗ್ರಾಮದ ಎಲ್ಲ ಸಾರ್ವಜನಿಕರು ಒಗ್ಗೂಡಿ ಪ್ರತಿವರ್ಷ ಒಂದೇ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಗ್ರಾಮದ ಜನರೆಲ್ಲರೂ ಸೇರಿ ಪೂಜೆ ಸಲ್ಲಿಸುವ ಮೂಲಕ ಸಾಮೂಹಿಕವಾಗಿ ಗಣೇಶೋತ್ಸವ ಆಚರಿಸುವುದು ಇಲ್ಲಿನ ವಿಶೇಷತೆಯಾಗಿದೆ.

ಗ್ರಾಮದ ಜನರಲ್ಲಿ ಒಗ್ಗಟ್ಟು, ಸಹೋದರತ್ವ ಹಾಗೂ ಸಾಮರಸ್ಯವನ್ನು ಸಾರುವ ರೀತಿಯಲ್ಲಿ ಗಣೇಶೋತ್ಸವವನ್ನು ಹಲವು ವರ್ಷಗಳಿಂದ ಮುಂದುವರಿಸಿಕೊಂಡು ಬರಲಾಗುತ್ತಿದೆ. ಪ್ರತಿವರ್ಷದಂತೆ ಈ ವರ್ಷವೂ ವಿವಿಧ ಪೂಜಾ ಕಾರ್ಯಕ್ರಮಗಳನ್ನು ನಡೆಸಿ, ಭಕ್ತಿಭಾವದಿಂದ ಗಣೇಶ ಮೂರ್ತಿಯ ವಿಸರ್ಜನಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು.

ಗಣೇಶೋತ್ಸವದ ಸಂದರ್ಭದಲ್ಲಿ ಬಾವುಟ ಹಾಗೂ ಹೂವಿನ ಹರಾಜು ನಡೆಸಲಾಗುತ್ತದೆ. ಹರಾಜಿನಿಂದ ಸಂಗ್ರಹವಾಗುವ ಹಣವನ್ನು ಮುಂದಿನ ವರ್ಷದ ಗಣೇಶೋತ್ಸವದ ಸಂದರ್ಭದಲ್ಲಿ ನಡೆಯುವ ಅನ್ನ ಸಂತರ್ಪಣ ಕಾರ್ಯಕ್ರಮಕ್ಕೆ ಬಳಸಲಾಗುತ್ತದೆ. ಈ ಮೂಲಕ ಗ್ರಾಮಸ್ಥರ ಸಹಕಾರದಿಂದಲೇ ಉತ್ಸವವನ್ನು ನಿರಂತರವಾಗಿ ನಡೆಸಿಕೊಂಡು ಬರಲಾಗುತ್ತಿದೆ.

61ನೇ ವರ್ಷದ ಗಣೇಶ ವಿಸರ್ಜನಾ ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು, ಯುವಕರು, ಮಹಿಳೆಯರು ಹಾಗೂ ಮಕ್ಕಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ, ಸಂಭ್ರಮದಿಂದ ಗಣಪತಿಗೆ ವಿದಾಯ ನೀಡಿದರು. ಈ ಸಾಮೂಹಿಕ ಆಚರಣೆಯು ಗ್ರಾಮದ ಜನರ ಒಗ್ಗಟ್ಟು ಮತ್ತು ಪರಸ್ಪರ ಸಹಕಾರಕ್ಕೆ ಸಾಕ್ಷಿಯಾಯಿತು.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Whats App Channel: https://whatsapp.com/channel/0029VbDbOsBD8SE2H0L3d40j

Leave a Reply

Your email address will not be published. Required fields are marked *