ಸಮಗ್ರ ಸುದ್ದಿ, ಭೀಮಸಮುದ್ರ:
ವರದಿ ಮತ್ತು ಫೋಟೋ ಕೃಪೆ ವೇದಮೂರ್ತಿ ಭೀಮಸಮುದ್ರ ಮೊ : 8088076203
ಗಾಂಧಿ ಜಯಂತಿಯ ಅಂಗವಾಗಿ ಸೆಪ್ಟೆಂಬರ್ 25ರಿಂದ ಅಕ್ಟೋಬರ್ 2ರವರೆಗೆ ಭೀಮಸಮುದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಸ್ವಚ್ಛತಾ ಸೇವಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

ಈ ಅಭಿಯಾನದ ಭಾಗವಾಗಿ ಗುರುವಾರ ಭೀಮಸಮುದ್ರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು. ಶಾಲೆಯ ಮುಂಭಾಗದಲ್ಲಿದ್ದ ತ್ಯಾಜ್ಯ ವಸ್ತುಗಳನ್ನು ತೆರವುಗೊಳಿಸಿ, ಬೆಳೆದಿದ್ದ ಗಿಡಗಂಟಿಗಳನ್ನು ಸ್ವಚ್ಛಗೊಳಿಸುವ ಮೂಲಕ ಸ್ವಚ್ಛತೆಗೆ ಆದ್ಯತೆ ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮ ಪಂಚಾಯಿತಿ ಪಿಡಿಒ ಅಂಸಿರ್ ಬಾನು, ಸಾರ್ವಜನಿಕರು ತಮ್ಮ ಮನೆಗಳ ಸುತ್ತಮುತ್ತ, ರಸ್ತೆ ಬದಿ ಹಾಗೂ ಚರಂಡಿಗಳಲ್ಲಿ ಕಸವನ್ನು ಎಸೆಯಬಾರದು. ಗ್ರಾಮ ಪಂಚಾಯಿತಿಯಿಂದ ಹಸಿ ಮತ್ತು ಒಣ ಕಸ ಸಂಗ್ರಹಿಸಲು ವಾಹನಗಳು ಬರುತ್ತಿದ್ದು, ಸಾರ್ವಜನಿಕರು ಅವುಗಳಲ್ಲಿಯೇ ಕಸವನ್ನು ಹಾಕುವ ಮೂಲಕ ಸ್ವಚ್ಛತೆಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಮನೆಗಳ ಸುತ್ತಮುತ್ತ ಕಸ ಸಂಗ್ರಹವಾಗುವುದರಿಂದ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಿ ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ಕಾಯಿಲೆಗಳು ಹರಡುವ ಸಾಧ್ಯತೆಯಿದೆ. ವಿಶೇಷವಾಗಿ ಮನೆಗಳಲ್ಲಿರುವ ಮಕ್ಕಳು ಹಾಗೂ ವೃದ್ಧರ ಆರೋಗ್ಯದ ದೃಷ್ಟಿಯಿಂದ ಪ್ರತಿಯೊಬ್ಬರೂ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಪಿಡಿಒ ಅಂಸಿರ್ ಬಾನು ಅವರು ಸ್ವಚ್ಛತೆಯ ಮಹತ್ವದ ಕುರಿತು ಪ್ರತಿಜ್ಞಾವಿಧಿ ಬೋಧಿಸಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸಿಬ್ಬಂದಿ ರೂಪಾ, ಆರ್ಜಿಸಿ ಜಗದೀಶ್, ಉಮೇಶ್, ಶ್ರೀನಿವಾಸ್, ಅಂಗನವಾಡಿ ಕಾರ್ಯಕರ್ತೆಯರಾದ ಗುಲ್ಸರ್ ಬಾನು, ಲಕ್ಷ್ಮಿ, ಸರಿತಾ, ಗೀತಾ, ಆಶಾ ಕಾರ್ಯಕರ್ತೆ ಜಯಮ್ಮ, ಆಶಾ ಕಾರ್ಯಕರ್ತೆ ಸುಧಾ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು ಭಾಗವಹಿಸಿದ್ದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1
Whats App Channel: https://whatsapp.com/channel/0029VbDbOsBD8SE2H0L3d40j