ಭೀಮಸಮುದ್ರ ಸರ್ಕಾರಿ ಶಾಲಾ ಮಕ್ಕಳಿಗೆ ವಿಘ್ನಹರ ಮಹಾಗಣಪತಿ ಗೆಳೆಯರ ಬಳಗದಿಂದ ಉಚಿತ ಸಮವಸ್ತ್ರ.

ಭೀಮಸಮುದ್ರ:

ವರದಿ ಮತ್ತು ಫೋಟೋ ಕೃಪೆ ವೇದಮೂರ್ತಿ ಭೀಮಸಮುದ್ರ ಮೊ : 8088076203

ಶ್ರೀ ವಿಘ್ನಹರ ಮಹಾಗಣಪತಿ ಗೆಳೆಯರ ಬಳಗದ ವತಿಯಿಂದ ಭೀಮಸಮುದ್ರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತ ಸಮವಸ್ತ್ರಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕ ಧೃವಕುಮಾರ್ ಮಾತನಾಡಿ, ಗೆಳೆಯರ ಬಳಗದ ವತಿಯಿಂದ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಿಸಿರುವುದು ಸಂತೋಷದ ವಿಷಯವಾಗಿದೆ. ಗ್ರಾಮದ ಎಲ್ಲರ ಸಹಕಾರದೊಂದಿಗೆ ಶಾಲೆಯನ್ನು ಇನ್ನಷ್ಟು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಪ್ರಯತ್ನಿಸೋಣ ಎಂದು ಹೇಳಿದರು.

ಗ್ರಾಮದ ಯುವ ಮುಖಂಡ ಸಿರಾಜ್ ಮಾತನಾಡಿ, ಶ್ರೀ ವಿಘ್ನಹರ ಮಹಾಗಣಪತಿ ಗೆಳೆಯರ ಬಳಗವು ಗಣೇಶೋತ್ಸವದ ಜೊತೆಗೆ ವಿವಿಧ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿರುವುದು ಶ್ಲಾಘನೀಯವಾಗಿದೆ. ಗ್ರಾಮದ ಹಿರಿಯರ ಮಾರ್ಗದರ್ಶನದೊಂದಿಗೆ ಸರ್ಕಾರಿ ಶಾಲೆಗಳನ್ನು ಇನ್ನಷ್ಟು ಅಭಿವೃದ್ಧಿಪಡಿಸುವ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕು. ಈ ಸರ್ಕಾರಿ ಶಾಲೆಗೆ ತಮ್ಮ ವತಿಯಿಂದ ಮಿನಿ ಪ್ರೊಜೆಕ್ಟರ್ ನೀಡುವುದಾಗಿ ಘೋಷಿಸಿದರು.

ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಮೇಶ್ ಮಾತನಾಡಿ, ವಿಘ್ನಹರ ಮಹಾಗಣಪತಿ ಪ್ರತಿಷ್ಠಾಪನೆಯ ಸಂದರ್ಭದಲ್ಲಿ ಗ್ರಾಮೀಣ ಸೊಗಡಿನ ಸೋಬಾನೆ ಪದ, ಕೋಲಾಟ, ವಾಲ್ಮೀಕಿ ಮಂಡಳಿಯ ಭಜನಾ ಕಾರ್ಯಕ್ರಮ, ಮನರಂಜನಾ ಆಟಗಳು ಹಾಗೂ ರಂಗೋಲಿ ಸ್ಪರ್ಧೆಗಳನ್ನು ಆಯೋಜಿಸಿ, ಮೂರು ದಿನಗಳ ಕಾಲ ಸಾವಿರಾರು ಜನರಿಗೆ ಅನ್ನಪ್ರಸಾದ ವ್ಯವಸ್ಥೆ ಮಾಡಿರುವ ಯುವಕರ ಕಾರ್ಯವನ್ನು ಶ್ಲಾಘಿಸಿದರು. ಯುವಕರ ಸಮಾಜಮುಖಿ ಕಾರ್ಯಗಳಿಗೆ ಗ್ರಾಮದ ಹಿರಿಯರು ನೀಡುತ್ತಿರುವ ಬೆಂಬಲವೂ ಮೆಚ್ಚುವಂತಹದ್ದು ಎಂದರು.

ಪತ್ರಿಕಾ ಮಾಧ್ಯಮ ಪ್ರತಿನಿಧಿ ವೇದಮೂರ್ತಿ ಮಾತನಾಡಿ, ದಾನಿಗಳ ನೆರವು ಹಾಗೂ ಗ್ರಾಮಸ್ಥರ ಮನಸ್ಸಿನ ಶ್ರೀಮಂತಿಕೆಯಿಂದ ಭೀಮಸಮುದ್ರದ ಸರ್ಕಾರಿ ಶಾಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಉತ್ತಮ ಕಾರ್ಯಗಳು ನಡೆಯುತ್ತಿವೆ. ಕೆಲವು ಕಾರ್ಯಕ್ರಮಗಳಲ್ಲಿ ಪಟಾಕಿ ಹಾಗೂ ಧ್ವನಿವರ್ಧಕಗಳ ಅತಿಯಾದ ಬಳಕೆಯಿಂದ ಶಬ್ದ, ವಾಯು ಹಾಗೂ ಪರಿಸರ ಮಾಲಿನ್ಯ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಪರಿಸರ ಸಂರಕ್ಷಣೆಯ ಬಗ್ಗೆಯೂ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಶ್ರೀ ವಿಘ್ನಹರ ಮಹಾಗಣಪತಿ ಗೆಳೆಯರ ಬಳಗದ ಸಮಾಜಮುಖಿ ಕಾರ್ಯವನ್ನು ಅಭಿನಂದಿಸಿದರು.

ಶಾಲಾ ಶಿಕ್ಷಕಿ ಸುಂದರಮ್ಮ ಮಾತನಾಡಿ, ಸಮವಸ್ತ್ರವು ಮೇಲು-ಕೀಳು, ಬಡವ-ಶ್ರೀಮಂತ ಎಂಬ ಯಾವುದೇ ಭೇದಭಾವವಿಲ್ಲದೆ ಎಲ್ಲರೂ ಸಮಾನರು ಎಂಬ ಸಂದೇಶವನ್ನು ಸಾರುತ್ತದೆ. ಮಕ್ಕಳಿಗೆ ಸಮವಸ್ತ್ರ ವಿತರಿಸುವ ಮೂಲಕ ಉತ್ತಮ ಕಾರ್ಯ ಮಾಡಿರುವ ಎಲ್ಲರಿಗೂ ಧನ್ಯವಾದಗಳು ಎಂದು ತಿಳಿಸಿದರು.

ಶಾಲೆಯ ಹಳೆಯ ವಿದ್ಯಾರ್ಥಿ ಹಾಗೂ ಶಿಕ್ಷಕ ಪ್ರದೀಪ್ ಕುಮಾರ್ ಎಸ್. ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರಾದ ಸಿದ್ದಪ್ಪ, ಈಶ್ವರಪ್ಪ, ನಿಜಲಿಂಗಪ್ಪ, ಅನ್ವರ್, ರಾಮಣ್ಣ, ಸಿದ್ದೇಶ್, ನಾಗರಾಜ್, ರೇವಣಸಿದ್ದೇಶ್, ಶಿವಣ್ಣ, ವೆಂಕಟೇಶ್ ಸೇರಿದಂತೆ ಶಾಲೆಯ ಸಿಬ್ಬಂದಿ ವರ್ಗದವರು ಹಾಗೂ ಗ್ರಾಮದ ಯುವಕರು ಉಪಸ್ಥಿತರಿದ್ದರು.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Whats App Channel: https://whatsapp.com/channel/0029VbDbOsBD8SE2H0L3d40j

Leave a Reply

Your email address will not be published. Required fields are marked *