ಚಿತ್ರದುರ್ಗ, ಜು. 29:
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಭೀಮಸಮುದ್ರ ಗ್ರಾಮದ ತರಳಬಾಳು ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ 2094ನೇ ಮಧ್ಯವ್ಯಸನ ಮುಕ್ತ ಶಿಬಿರದ ಸಮಾರೋಪ ಸಮಾರಂಭವು ಬುಧವಾರ ಮಧ್ಯಾಹ್ನ 12.00 ಗಂಟೆಗೆ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ವಹಿಸಲಿದ್ದು, ಮಾಜಿ ಕೇಂದ್ರ ಸಚಿವ ಜಿ.ಎಂ. ಸಿದ್ದೇಶ್ವರ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಚಿತ್ರದುರ್ಗ ಮಾಜಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಎಸ್. ಮಂಜುನಾಥ್, ಅಖಿಲ ಕರ್ನಾಟಕ ರಾಜ್ಯ ಜನಜಾಗೃತಿ ವೇದಿಕೆ ಅಧ್ಯಕ್ಷ ನಟರಾಜ್ ಬಾದಾಮಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಧಾನ ನಿರ್ದೇಶಕಿ ಶ್ರೀಮತಿ ಗೀತಾ, ಗ್ರಾಮದ ಮುಖಂಡ ಬಿ.ಟಿ. ಸಿದ್ದೇಶ್, ಮಧ್ಯವ್ಯಸನ ಮುಕ್ತ ಶಿಬಿರದ ವ್ಯವಸ್ಥಾಪಕ ಬಿ.ಎಸ್. ಶಂಕರಮೂರ್ತಿ, ಚಿತ್ರದುರ್ಗ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷೆ ಶ್ರೀಮತಿ ರೂಪ ಜನಾರ್ಧನ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಚಿತ್ರದುರ್ಗ ನಿರ್ದೇಶಕಿ ಕಮಲಾಕ್ಷಿ, ಹಾಗೂ ಸುರೇಶ್ ಚಂದ್ರಣ್ಣ ಮತ್ತು ಸಿದ್ದಪ್ಪ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ಮಧ್ಯವ್ಯಸನ ಮುಕ್ತ ಸಮಾಜ ನಿರ್ಮಾಣದ ಉದ್ದೇಶದಿಂದ ಆಯೋಜಿಸಲಾದ ಈ ಶಿಬಿರದಲ್ಲಿ ಭಾಗವಹಿಸಿದವರಿಗೆ ಸಮಾರೋಪ ಸಮಾರಂಭದಲ್ಲಿ ಪ್ರಮಾಣಪತ್ರ ವಿತರಣೆ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶಿಬಿರದ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Follow the ಸಮಗ್ರ ಸುದ್ದಿ Telegram Channel: https://t.me/SamagraSuddi
ಸಮಗ್ರ ಸುದ್ದಿ channel on WhatsApp: https://whatsapp.com/channel/0029VbDbOsBD8SE2H0L3d40j