ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ಸೇರಿದಂತೆ ಒಟ್ಟು 6 ತಾಲೂಕುಗಳಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿ ಭೋವಿ ಸಮುದಾಯದ ನಿರುದ್ಯೋಗ ಯುವಕ-ಯುವತಿಯರಿಗೆ ಸ್ವಯಂ ಉದ್ಯೋಗಾವಕಾಶ ಒದಗಿಸುವ ಉದ್ದೇಶದಿಂದ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವತಿಯಿಂದ ಉಚಿತ ಟೈಲರಿಂಗ್ ತರಬೇತಿ ಹಾಗೂ ಹೊಲಿಗೆ ಯಂತ್ರ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.
ಹಿರಿಯೂರು ತಾಲೂಕಿನಲ್ಲಿ ನಿಗದಿಪಡಿಸಿದ ಗುರಿಗಿಂತ ಕಡಿಮೆ ಅರ್ಜಿಗಳು ಬಂದಿರುವ ಹಿನ್ನೆಲೆಯಲ್ಲಿ, ಆಸಕ್ತ ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 15 ರಿಂದ 20 ರೊಳಗೆ ನಿಗಮದ ಚಿತ್ರದುರ್ಗ ಕಚೇರಿಗೆ ನೇರವಾಗಿ ಭೇಟಿ ನೀಡಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಅರ್ಹತೆ ಮತ್ತು ಷರತ್ತುಗಳು:
- ಅರ್ಜಿದಾರರು ಪರಿಶಿಷ್ಟ ಜಾತಿ ಭೋವಿ ಸಮುದಾಯಕ್ಕೆ ಸೇರಿರಬೇಕು ಹಾಗೂ 18 ರಿಂದ 45 ವರ್ಷದೊಳಗಿನ ವಯೋಮಿತಿಯವರಾಗಿರಬೇಕು.
- ಅಭ್ಯರ್ಥಿಯು ಕಡ್ಡಾಯವಾಗಿ ಕರ್ನಾಟಕದ ನಿವಾಸಿಯಾಗಿರಬೇಕು (ಸ್ಥಳೀಯ ನಿವಾಸದ ದಾಖಲೆ ಲಗತ್ತಿಸುವುದು ಕಡ್ಡಾಯ).
- ತರಬೇತಿಗೆ ಆಯ್ಕೆಯಾದವರು ಪ್ರತಿದಿನ 8 ಗಂಟೆಗಳಂತೆ ಒಟ್ಟು 75 ದಿನಗಳ ಕಾಲ ಪೂರ್ಣ ತರಬೇತಿಗೆ ಕಡ್ಡಾಯವಾಗಿ ಹಾಜರಾಗಬೇಕು.
- ನಿಯಮಗಳನ್ನು ಉಲ್ಲಂಘಿಸಿದರೆ ಅರ್ಹತೆಯನ್ನು ರದ್ದುಗೊಳಿಸಲಾಗುವುದು. ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರವಷ್ಟೇ ಉಚಿತ ಹೊಲಿಗೆ ಯಂತ್ರವನ್ನು ವಿತರಿಸಲಾಗುವುದು.
ಅರ್ಜಿಯೊಂದಿಗೆ ಸಲ್ಲಿಸಬೇಕಾದ ಅಗತ್ಯ ದಾಖಲೆಗಳು:
- ಆಧಾರ್ ಕಾರ್ಡ್ ಪ್ರತಿ
- ನಿವಾಸ ಪ್ರಮಾಣಪತ್ರ
- ಜಾತಿ ಮತ್ತು ಆದಾಯ ಪ್ರಮಾಣಪತ್ರ
- ಬಿಪಿಎಲ್ (BPL) ಕಾರ್ಡ್
- ಪಾಸ್‌ಪೋರ್ಟ್ ಅಳತೆಯ ಫೋಟೋಗಳು
ಅಪೂರ್ಣ ಅಥವಾ ತಪ್ಪು ಮಾಹಿತಿಯುಳ್ಳ ಅರ್ಜಿಗಳನ್ನು ತಿರಸ್ಕರಿಸುವ ಅಧಿಕಾರವನ್ನು ಸಂಸ್ಥೆ ಹೊಂದಿರುತ್ತದೆ.
ಸಂಪರ್ಕಿಸಬೇಕಾದ ವಿಳಾಸ: ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ಸಲ್ಲಿಕೆಗೆ, ಆಸಕ್ತರು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, 2 ನೇ ಮಹಡಿ, ಪಾಲಾಕ್ಷ ಕಾಂಪೌಂಡ್, ಬಿ.ಡಿ. ಮುಖ್ಯ ರಸ್ತೆ, ಐ.ಸಿ.ಐ.ಸಿ.ಐ. ಬ್ಯಾಂಕ್ ಮುಂಭಾಗ, ಚಿತ್ರದುರ್ಗ ಕಚೇರಿಯನ್ನು ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1
Whats App Channel: https://whatsapp.com/channel/0029VbDbOsBD8SE2H0L3d40j