Bitter Gourd Side Effects: ರುಚಿಯಲ್ಲಿ ಹಾಗಲಕಾಯಿ ಕಹಿಯಾಗಿರುತ್ತದೆ. ಆದರೆ, ನಿತ್ಯ ಹಾಗಲಕಾಯಿ ಸೇವನೆಯಿಂದ ಆರೋಗ್ಯಕ್ಕೆ ಹಾನಿಯುಂಟಾಗುತ್ತದೆ (Health News In Kannada).

ಬೆಂಗಳೂರು: ಹಾಗಲಕಾಯಿ ರುಚಿಯಲ್ಲಿ ತುಂಬಾ ಕಹಿಯಾಗಿರುತ್ತದೆ ಎಂಬ ವಿಷಯ ಎಲ್ಲರಿಗೂ ತಿಳಿದೇ ಇದೆ. ಆದರೆ ಇದು ಆರೋಗ್ಯಕ್ಕೆ ತುಂಬಾ ಹಿತಕಾರಿ ಎಂದು ಪರಿಗಣಿಸಲಾಗುತ್ತದೆ, ಹಾಗಲಕಾಯಿ ವಿಶೇಷವಾಗಿ ಆರೋಗ್ಯಕರ ಹೃದಯಕ್ಕೆ ತುಂಬಾ ಒಳ್ಳೆಯದು. ಆದರೆ ಹಾಗಲಕಾಯಿಯನ್ನು ಅತಿಯಾಗಿ ಸೇವಿಸುವುದರಿಂದ ಆರೋಗ್ಯಕ್ಕೂ ಹಾನಿಯಾಗುತ್ತದೆ ಎಂಬ ಸಂಗತಿ ನಿಮಗೆ ತಿಳಿದಿದೆಯಾ. ಹೌದು, ಹಾಗಲಕಾಯಿಯನ್ನು ನಿತ್ಯ ಸೇವಿಸುವುದರಿಂದ ಆರೋಗ್ಯದ ಮೇಲೆ ತುಂಬಾ ಕೆಟ್ಟ ಪರಿಣಾಮ ಬೀರುತ್ತದೆ. ಯಾವ ಜನರು ಹಾಗಲಕಾಯಿಯನ್ನು ಸೇವಿಸಬಾರದು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ (Health News In Kannada).
ಈ ಜನರು ಮರೆತು ಕೂಡ ಹಾಗಲಕಾಯಿಯನ್ನು ಸೇವಿಸಬಾರದು
ಗರ್ಭಿಣಿಯರು ಸೇವಿಸಬಾರದು
ಹಾಗಲಕಾಯಿಯ ರಸವನ್ನು ಸೇವಿಸುವುದರಿಂದ ಋತುಚಕ್ರದ ಹರಿವು ಹೆಚ್ಚಾಗುತ್ತದೆ. ಇದೇ ವೇಳೆ, ಗರ್ಭಾವಸ್ಥೆಯಲ್ಲಿ ಹಾಗಲಕಾಯಿಯ ಅತಿಯಾದ ಸೇವನೆಯು ಗರ್ಭಪಾತಕ್ಕೆ ಕಾರಣವಾಗಬಹುದು, ಆದ್ದರಿಂದ ಗರ್ಭಿಣಿಯರು ಹಾಗಲಕಾಯಿ ರಸವನ್ನು ಕುಡಿಯುವುದನ್ನು ತಪ್ಪಿಸಬೇಕು.
ಯಕೃತ್ತು ಹಾನಿಗೊಳಗಾಗಬಹುದು
ಮಧುಮೇಹಿಗಳು ಹಾಗಲಕಾಯಿಯ ರಸವನ್ನು ಪ್ರತಿದಿನ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸಬಹುದು. ಆದರೆ ಇದು ನಿಮ್ಮ ಯಕೃತ್ತಿಗೆ ಅಪಾಯಕಾರಿ ಎಂದು ಸಾಬೀತಾಗಬಹುದು. ಇದು ಯಕೃತ್ತಿಗೆ ಹಾನಿ ಉಂಟುಮಾಡಬಹುದು. ಆದ್ದರಿಂದ, ಮಧುಮೇಹಿಗಳು ಹಾಗಲಕಾಯಿಯನ್ನು ಪ್ರತಿದಿನ ಸೇವಿಸುವುದನ್ನು ತಪ್ಪಿಸಬೇಕು. ಇನ್ನೊಂದೆಡೆ, ನಿಮಗೆ ಯಕೃತ್ತಿಗೆ ಸಂಬಂಧಿಸಿದ ಯಾವುದೇ ಸಮಸ್ಯೆ ಇದ್ದರೆ, ಹಾಗಲಕಾಯಿಯನ್ನು ಮರೆತೂ ಕೂಡ ಸೇವಿಸಬಾರದು
ರಕ್ತದಲ್ಲಿ ಕಡಿಮೆ ಸಕ್ಕರೆ ಹೊಂದಿರುವ ರೋಗಿಗಳು ಸೇವಿಸಬಾರದು
ಹಾಗಲಕಾಯಿ ಸೇವನೆಯಿಂದ ರಕ್ತದಲ್ಲಿನ ಸಕ್ಕರೆ ಅಂಶ ನಿಯಂತ್ರಣಕ್ಕೆ ಬರುತ್ತದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ, ಯಾರ ರಕ್ತದಲ್ಲಿನ ಸಕ್ಕರೆ ಕಡಿಮೆ ಇರುತ್ತದೆಯೋ, ಅಂಥವರು ಹಾಗಲಕಾಯಿಯನ್ನು ಸೇವಿಸಬಾರದು. . ಇದು ನಿಮ್ಮ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಮತ್ತಷ್ಟು ಕಡಿಮೆ ಮಾಡಬಹುದು.
(ಹಕ್ಕುತ್ಯಾಗ- ಈ ಲೇಖನದಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಅನುಸರಿಸುವ ಮುನ್ನ ವೈದ್ಯಕೀಯ ಸಲಹೆ ಪಡೆದುಕೊಳ್ಳಿ. ಸಮಗ್ರ ಸುದ್ದಿ ಮಾಹಿತಿಯನ್ನು ಪುಷ್ಠಿಕರಿಸುವುದಿಲ್ಲ)
ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ: https://chat.whatsapp.com/KnDIfiBURQ9G5sLEJLqshk
ನಮ್ಮ Facebook page: https://www.facebook.com/samagrasudii