ಸಾವಿರ ದಿನಗಳಲ್ಲಿ ಸಾವಿರ ಸಮಸ್ಯೆಗಳು: ಕಾಂಗ್ರೆಸ್ ಸರ್ಕಾರದ ಸಂಭ್ರಮಕ್ಕೆ ಬಿಜೆಪಿ ಟೀಕೆ.

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ ಫೆ. 15

ರಾಜ್ಯ ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಆಡಳಿತದಲ್ಲಿ ರಾಜ್ಯದಲ್ಲಿ ಸಾವಿರಕ್ಕೂ ಹೆಚ್ಚು ಸಮಸ್ಯೆಗಳು ಸೃಷ್ಟಿಯಾಗಿವೆ. ಅಭಿವೃದ್ಧಿ ಸ್ಥಗಿತಗೊಂಡಿದೆ. ಭ್ರಷ್ಟಾಚಾರ ತಾಂಡವವಾಡುತ್ತಿದೆ, ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ರೈತರ ಸಂಕಷ್ಟ ಹೆಚ್ಚಾಗಿದೆ, ಮಹಿಳೆಯರ ಸುರಕ್ಷತೆ ಪಾತಾಳಕ್ಕಿಳಿದಿದೆ. ಇಂತಹ ಪರಿಸ್ಥಿತಿಯಲ್ಲಿ ಸಂಭ್ರಮಿಸಲು ಹೊರಟಿರುವುದು ಸರ್ಕಾರದ ಲಜ್ಜೆಗೇಡಿತನದ ಪರಮಾವಧಿಯಾಗಿದೆ ಎಂದು ಜಿಲ್ಲಾ ಬಿಜೆಪಿ ಟೀಕಿಸಿದೆ.

ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಆಡಳಿತದಲ್ಲಿ ಕರ್ನಾ ಟಕದಲ್ಲಿ ಸಾವಿರಕ್ಕೂ ಹೆಚ್ಚು ಸಮಸ್ಯೆ ಗಳು ಸೃಷ್ಟಿಯಾಗಿವೆ.ಅಭಿವೃದ್ಧಿ ಸ್ಥಗಿತಗೊಂಡಿದೆ, ಭ್ರಷ್ಟಾಚಾರ ತಾಂಡವವಾಡುತ್ತಿದೆ, ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ರೈತರ ಸಂಕಟ ಹೆಚ್ಚಾಗಿದೆ,ಯುವಕರ ಭವಿಷ್ಯಆಪತ್ತಿನಲ್ಲಿ ಸಿಲುಕಿದೆ ಮತ್ತು ಮಹಿಳೆಯರ ಸುರಕ್ಷತೆ ಪಾತಾಳಕ್ಕೆ ಕುಸಿದಿದೆ. ಇದರ ನಡುವೆಯು 1000ದಿನಗಳ ಸಂಭ್ರಮಿಸಲು ಹೊರಟಿರುವುದು ಈ ಸರ್ಕಾರದ ಲಜ್ಜೆಗೇಡಿತನದ ಪರಮಾವಧಿಯಾಗಿದೆ. ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಹೊತ್ತಿರುವ ಮೂಡಾ ಹಗರಣ, ಮಹರ್ಷಿ ವಾಲ್ಮೀಕಿ ನಿಗಮದ 187 ಕೋಟಿ ರೂ. ಹಣ ಲೂಟಿ, 15,568 ಕೋಟಿ ರೂ. ಮೌಲ್ಯದ ಸ್ಮಾರ್ಟ್ ಮೀಟ-ರ್ ಹಗರಣ, ಅಬಕಾರಿ ಹಗರಣಗಳು ಈ ಸರ್ಕಾರವನ್ನು ಭ್ರಷ್ಟಾಚಾರದ ಅಡ್ಡೆಯನ್ನಾಗಿಸಿವೆ. ಲಂಚಗುಳಿತಕ್ಕೆ ಬೇಸತ್ತು ಗುತ್ತಿಗೆದಾರರು ಈ ಸರ್ಕಾರವನ್ನು 60 ಪರ್ಸೆಂಟ್ ಸರ್ಕಾರ ಎಂದು ಬಹಿರಂಗವಾಗಿ ಹಿಯ್ಯಾಳಿಸುತ್ತಿದ್ದಾರೆ. ಇದು ಸರ್ಕಾರದ ಭ್ರಷ್ಟಾಚಾರಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ನಾಗರಾಜ್ ಬೇದ್ರೆ ಹೇಳಿದ್ದಾರೆ.

ಸರ್ಕಾರವು ಮರಣ ಪ್ರಮಾಣಪತ್ರದ ಶುಲ್ಕವನ್ನು 2 ರಿಂದ 20 ರೂ.ಗೆ ಏರಿಸುವ ಮೂಲಕ ಸತ್ತವರ ಹೆಸರಿನಲ್ಲೂ ಲೂಟಿಗಿಳಿದಿದೆ. ಹಾಲು, ವಿದ್ಯುತ್, ನೀರು, ಬಿತ್ತನೆ ಬೀಜ, ಇಂಧನ ಸೇರಿದಂತೆ ಎಲ್ಲಾ ಪದಾರ್ಥಗಳ ಬೆಲೆ ಏರಿಕೆ ಮಾಡಿದೆ. ಆಸ್ತಿ ನೋಂದಣಿ, ಮೆಟ್ರೋ ಪ್ರಯಾಣ ದರದಲ್ಲಿ ಭಾರಿ ಏರಿಕೆ ಮಾಡಿ ಜನರ ಜೇಬಿಗೆ ಕತ್ತರಿ ಹಾಕಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ 4886 ರೈತರು ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಮತ್ತೊಂದೆಡೆ ರೈತರು ಪರಿಹಾರದ ಹಣಕ್ಕಾಗಿ ಸಾಯುವಂತಾಗಿದೆ. ಬಿಜೆಪಿ ಸರ್ಕಾರ ನೀಡುತ್ತಿದ್ದ 4 ಸಾವಿರ ರೂ. ಕಿಸಾನ್ ಸಮ್ಮಾನ್ ಹಣ ಹಾಗೂ ರೈತರ ಮಕ್ಕಳ ಶಿಕ್ಷಣಕ್ಕಾಗಿ ಜಾರಿಗೆ ತಂದಿದ್ದ ವಿದ್ಯಾನಿಧಿ ಯೋಜನೆಯನ್ನು ರಾಜಕೀಯ ದ್ವೇಷದಿಂದ ನಿಲ್ಲಿಸಿದ್ದಾರೆ ಎಂದು ತಿಳಿಸಿದ್ದಾರೆ.

ಕೋಟಿ ರೂ. ಹಣವನ್ನು ಗ್ಯಾರಂಟಿ ಯೋಜನೆಗೆ ತಿರುಗಿಸುವ ಮೂಲಕ ಸಾಮಾಜಿಕ ನ್ಯಾಯದ ತತ್ವಕ್ಕೆ ಸರ್ಕಾರ ತಿಲಾಂಜಲಿ ಇಟ್ಟಿದೆ. ರಾಜ್ಯದಲ್ಲಿ 2 ಲಕ್ಷಕ್ಕೂ ಹೆಚ್ಚು ಸರ್ಕಾರಿ ಉದ್ಯೋಗ ಖಾಲಿ ಇದ್ದರೂ ನೇಮಕಾತಿ ಸ್ಥಗಿತಗೊಳಿಸಿ ಯುವಜನರ ಬದುಕಿನೊಂದಿಗೆ ಸರ್ಕಾರ ಚೆಲ್ಲಾಟವಾಡುತ್ತಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಇಷ್ಟೆಲ್ಲಾ ಸಮಸ್ಯೆ ಹಗರಣಗಳನ್ನು ಹೊಂದಿರುವ ಕಾಂಗ್ರೆಸ್ ಸರ್ಕಾರ ಸಾವಿರ ದಿನಗಳ ಆಡಳಿತ ಸಂಭ್ರಮಿಸುವುದು ನಾಚಿಕೆಗೇಡು ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *