ಚಿತ್ರದುರ್ಗ ಜು 30
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ರಾಜ್ಯದಲ್ಲಿ ನಡೆಯುತ್ತಿರುವ ಸರ್ಕಾರಿ ನೇಮಕಾತಿ ಅಕ್ರಮಗಳು, ಕರ್ನಾಟಕ ಲೋಕಸೇವಾ ಆಯೋಗದಲ್ಲಿನ ಭ್ರಷ್ಟಾಚಾರ ಹಾಗೂ ಖಾಲಿ ಇರುವ ಲಕ್ಷಾಂತರ ಸರ್ಕಾರಿ ಹುದ್ದೆಗಳ ಭರ್ತಿಯಲ್ಲಿ ಕಾಂಗ್ರೆಸ್ ಸರ್ಕಾರದ ಸಂಪೂರ್ಣ ವೈಫಲ್ಯದಿಂದ ರಾಜ್ಯದ ಯುವಜನರ ಭವಿಷ್ಯ ಸಂಕಷ್ಟಕ್ಕೆ ಸಿಲುಕಿದೆ ಎಂದು ಬಿಜೆಪಿ ಮುಖಂಡರಾದ ಬಿ.ಸಿ.ಹನುಮಂತೇಗೌಡ ದೂರಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು ಹಲವು ವರ್ಷಗಳಿಂದ ವಿದ್ಯಾರ್ಥಿಗಳು, ಉದ್ಯೋಗಾ ಕಾಂಕ್ಷಿಗಳು ಹಾಗೂ ವಿವಿಧ ಶಿಕ್ಷಕರ ಸಂಘಟನೆಗಳು ನ್ಯಾಯಕ್ಕಾಗಿ ನಿರಂತರ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಯಾವುದೇ ಶಾಶ್ವತ ಪರಿಹಾರ ನೀಡುವಲ್ಲಿ ವಿಫಲವಾಗಿದೆ ಕಳೆದ ಹಲವು ವರ್ಷಗಳಿಂದ ಏPSಅ, ಈಆಂ ಸೇರಿದಂತೆ ವಿವಿಧ ನೇಮಕಾತಿ ಪ್ರಕ್ರಿಯೆಗಳಲ್ಲಿ ವ್ಯಾಪಕ ಅವ್ಯವಹಾರಗಳು ನಡೆಯುತ್ತಿವೆ. ಪರೀಕ್ಷೆಗಳಲ್ಲಿ ಹಣ ಪಡೆದು ಅನರ್ಹ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗ ಕಲ್ಪಿಸುವ ವ್ಯವಸ್ಥೆ ರೂಪುಗೊಂಡಿದ್ದು, ಅರ್ಹ ಅಭ್ಯರ್ಥಿಗಳ ಭವಿಷ್ಯವನ್ನು ಕಸಿದುಕೊಳ್ಳುವ ಕೆಲಸ ನಡೆಯುತ್ತಿದೆ. ಈ ಮೂಲಕ ಸರ್ಕಾರಿ ನೇಮಕಾತಿ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸವೇ ಕುಸಿಯುವಂತಾಗಿದೆ ಎಂದು ಹೇಳಿದರು.
ದೈಹಿಕ ಶಿಕ್ಷಣ, ಸಂಗೀತ, ಕನ್ನಡ, ವಿಜ್ಞಾನ, ಹಿಂದಿ ಸೇರಿದಂತೆ ವಿವಿಧ ವಿಷಯಗಳ ಶಿಕ್ಷಕರ ನೇಮಕಾತಿ ಹಾಗೂ ಉPSಖಿಖ ಸೇರಿದಂತೆ ಹಲವು ನೇಮಕಾತಿಗಳು ಕಳೆದ 15ರಿಂದ 20 ವರ್ಷಗಳಿಂದ ನಡೆಯದೇ ಇರುವುದನ್ನು ತೀವ್ರವಾಗಿ ಖಂಡಿಸಿದ ಅವರು. ಕಲ್ಯಾಣ ಕರ್ನಾಟಕ ಸೇರಿದಂತೆ ಅನೇಕ ಭಾಗಗಳಲ್ಲಿ ಸಾವಿರಾರು ಶಿಕ್ಷಕರ ಹುದ್ದೆಗಳು ಖಾಲಿ ಇದ್ದರೂ ಸರ್ಕಾರ ನಿರ್ಲಕ್ಷ್ಯ ವಹಿಸಿರುವುದು ಶಿಕ್ಷಣ ವ್ಯವಸ್ಥೆಯ ಮೇಲಿನ ಸರ್ಕಾರದ ಉದಾಸೀನತೆಯನ್ನು ತೋರಿಸುತ್ತದೆ ಎಂದು ಹೇಳಿ ಬಯೋಟೆಕ್ನಾಲಜಿ, ಚಿತ್ರಕಲೆ, ದೈಹಿಕ ಶಿಕ್ಷಣ, ಬಿ.ಕಾಂ., ಬಿ.ಎಡ್. ಸೇರಿದಂತೆ ವಿವಿಧ ವಿದ್ಯಾರ್ಹತೆ ಹೊಂದಿರುವ ಸಾವಿರಾರು ಅಭ್ಯರ್ಥಿಗಳು ವರ್ಷಗಳಿಂದ ಉದ್ಯೋಗಕ್ಕಾಗಿ ಅಲೆದಾಡುತ್ತಿದ್ದಾರೆ. ಬಿಜೆಪಿ ಸದಾ ಅವರ ಹೋರಾಟದೊಂದಿಗೆ ನಿಂತಿದ್ದರೂ, ಸರ್ಕಾರ ಮಾತ್ರ ಸಮಸ್ಯೆಗಳ ಪರಿಹಾರಕ್ಕೆ ಯಾವುದೇ ಗಂಭೀರ ಕ್ರಮ ಕೈಗೊಂಡಿಲ್ಲ ಎಂದು ಟೀಕಿಸಿದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಸುಮಾರು 35 ಸಾವಿರ ಶಿಕ್ಷಕರ ಹುದ್ದೆಗಳು ಇನ್ನೂ ಖಾಲಿ ಇವೆ ಎಂಬುದನ್ನು ಕಾಂಗ್ರೆಸ್ ನಾಯಕರೇ ಈ ಹಿಂದೆ ಸರ್ಕಾರದ ಗಮನಕ್ಕೆ ತಂದಿದ್ದರು. ಆದರೂ ಈವರೆಗೆ ನೇಮಕಾತಿ ಪ್ರಕ್ರಿಯೆ ಆರಂಭಿಸದಿರುವುದು ಸರ್ಕಾರದ ಇಚ್ಛಾಶಕ್ತಿಯ ಕೊರತೆಯನ್ನು ತೋರಿಸುತ್ತದೆ ಇತ್ತೀಚಿನ ಏPSಅ ನೇಮಕಾತಿ ಪ್ರಕ್ರಿಯೆಗಳಲ್ಲೂ ಗಂಭೀರ ಅಕ್ರಮಗಳ ಆರೋಪಗಳು ಕೇಳಿಬರುತ್ತಿವೆ. ವಿಶೇಷವಾಗಿ 400 ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಒಂದೊಂದು ಹುದ್ದೆಗೆ 80 ಲಕ್ಷದಿಂದ 90 ಲಕ್ಷದವರೆಗೆ ಲಂಚ ಪಡೆಯಲಾಗುತ್ತಿದೆ ಎಂಬ ಆರೋಪಗಳು ರಾಜ್ಯದ ಜನತೆಯನ್ನು ಬೆಚ್ಚಿಬೀಳಿಸಿವೆ 400 ಹುದ್ದೆಗಳ ನೇಮಕಾತಿಯಲ್ಲಿ ಸುಮಾರು 350 ಕೋಟಿ ಲಂಚದ ವಹಿವಾಟು ನಡೆದಿರಬಹುದೆಂಬ ಗಂಭೀರ ಆರೋಪ ಗಳು ಕೇಳಿಬರುತ್ತಿವೆ. ಈ ಹಣ ಯಾರಿಗೆ ತಲುಪಿದೆ ಇದರ ಹಿಂದೆ ಯಾರು ಇದ್ದಾರೆ? ಎಂಬುದನ್ನು ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರ ರಾಜ್ಯದ ಜನತೆಗೆ ಸ್ಪಷ್ಟಪಡಿಸಬೇಕು ಎಂದು ಅವರು ಆಗ್ರಹಿಸಿದರು.
ಏPSಅಯಲ್ಲಿ ಪಾರದರ್ಶಕತೆ ಕಾಪಾಡುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಆದ್ದರಿಂದ ಏPSಅ ಸೇರಿದಂತೆ ಎಲ್ಲಾ ನೇಮಕಾತಿ ಅಕ್ರಮಗಳನ್ನು ತಕ್ಷಣವೇ ಕೇಂದ್ರ ತನಿಖಾ ದಳಕ್ಕೆ ವಹಿಸಿ ಸಮಗ್ರ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡು ಸತ್ಯಾಂಶವನ್ನು ರಾಜ್ಯದ ಜನತೆಯ ಮುಂದೆ ತರಬೇಕು ಎಂದು ಒತ್ತಾಯಿಸಿ ರಾಜ್ಯದಲ್ಲಿ UPSಅ ಮಾದರಿಯ ಪಾರದರ್ಶಕ, ತಂತ್ರಜ್ಞಾನ ಆಧಾರಿತ ಹಾಗೂ ಭ್ರಷ್ಟಾಚಾರ ಮುಕ್ತ ನೇಮಕಾತಿ ವ್ಯವಸ್ಥೆಯನ್ನು ಜಾರಿಗೆ ತರಬೇಕು. ಪರೀಕ್ಷಾ ಪ್ರಕ್ರಿಯೆಯಿಂದ ಫಲಿತಾಂಶದವರೆಗೆ ಸಂಪೂರ್ಣ ಪಾರದರ್ಶಕತೆ ಖಚಿತಪಡಿಸುವ ಸುಧಾರಣಾ ಕ್ರಮಗಳನ್ನು ಸರ್ಕಾರ ತಕ್ಷಣ ಕೈಗೊಳ್ಳಬೇಕು ಎಂದು ಹೇಳಿದರು.
ಯುವಕರ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿರುವ ಕಾಂಗ್ರೆಸ್ ಸರ್ಕಾರ: ಕೆಪಿಎಸ್‍ಸಿ ಸೇರಿದಂತೆ ಎಲ್ಲಾ ನೇಮಕಾತಿ ಅಕ್ರಮಗಳನ್ನು ಸಿಬಿಐ ತನಿಖೆಗೆ ಬಿಜೆಪಿ ಮುಖಂಡ ಬಿ.ಸಿ.ಹನುಮಂತೇಗೌಡ ಆಗ್ರಹ.