ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ ಸೆ. 05: ಭಾರತೀಯ ಜನತಾ ಪಕ್ಷ ವಿಶ್ವದಲ್ಲಿಯೇ ಅತಿ ಹೆಚ್ಚು ಸದಸ್ಯರಿರುವ ದೊಡ್ಡ ಪಕ್ಷ, ಕಳೆದ ಬಾರಿ 7 ಕೋಟಿ ಜನರು ಬಿಜೆಪಿ ಸದಸ್ಯತ್ವ ಪಡೆದುಕೊಂಡಿದ್ದರು. ಈ ಬಾರಿ 10 ಕೋಟಿ ಸದಸ್ಯರನ್ನು ಮಾಡುವ ಗುರಿಯೊಂದಿಗೆ ನಮ್ಮ ರಾಷ್ಟ್ರೀಯ ನಾಯಕರು ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ ಎಂದು ಸಂಸದರಾದ ಗೋವಿಂದ ಕಾರಜೋಳ ತಿಳಿಸಿದರು.
ಅವರು ಗುರುವಾರ ಚಿತ್ರದುರ್ಗದ ಭಾರತೀಯ ಜನತಾ ಪಕ್ಷದವತಿಯಿಂದ ಏರ್ಪಡಿಸಿದ್ದ ಚಿತ್ರದುರ್ಗ ಗ್ರಾಮಾಂತರ ಸದಸ್ಯತ್ವ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿ ನರೇಂದ್ರ ಮೋದಿಯವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಜಯಭೇರಿ ಭಾರಿಸಿ ಮತ್ತೆ ಅಧಿಕಾರ ಹಿಡಿಯಲಿದೆ. ಕೇಂದ್ರದಲ್ಲಿಯೂ ಬಿಜೆಪಿ ಅಧಿಕಾರಕ್ಕೆ ಬಂದು ಮೋದಿಯವರು ನಾಲ್ಕನೇ ಬಾರಿಗೂ ಪ್ರಧಾನಿಯಾಗುತ್ತಾರೆ. ಪಂಡಿತ್ ಜವಾಹರಲಾಲ್ ನೆಹರು ಅವರ ನಂತರ ಸತತ ಮೂರನೆ ಬಾರಿಗೆ ಪ್ರಧಾನಿಯಾಗಿರುವ ದಾಖಲೆ ಇವರದ್ದಾಗಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ನೇತೃತ್ವದಲ್ಲಿ ಅತ್ಯಂತ ಬಲಿಷ್ಠವಾಗಿ ಬೆಳೆಯುತ್ತಿರುವ ಪಕ್ಷ ಬಿಜೆಪಿ. ವಿರೋಧ ಪಕ್ಷಗಳು ಎಷ್ಟೇ ಅಪಪ್ರಚಾರ ಮಾಡಿದರೂ ಭಾರತದ ಜನ ಹಾಗೂ ಕರ್ನಾಟಕದ ಜನರು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿದ್ದರಿಂದ ಅತ್ಯಂತ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದರು.
ಬಿಜೆಪಿಯ ಸದಸ್ಯತ್ವ ನೋಂದಣಿಯು 2 ಹಂತಗಳಲ್ಲಿ 45 ದಿನಗಳ ಕಾಲ ನಡೆಯುವ ಅಭಿಯಾನದಲ್ಲಿ ಈ ಬಾರಿ ರಾಜ್ಯದಲ್ಲಿ ಬಿಜೆಪಿ ಸದಸ್ಯತ್ವ ನೋಂದಣಿಯು ದಾಖಲೆ ಆಗಲಿದೆ ಕಳೆದ ಬಾರಿ 1.04 ಕೋಟಿ ಸದಸ್ಯರ ನೋಂದಣಿ ಆಗಿತ್ತು. ಅದನ್ನು ಮೀರಿ ಸದಸ್ಯತ್ವ ನೋಂದಣಿ ಮಾಡುವ ಸಂಕಲ್ಪ ನಮ್ಮದು. ಪ್ರತಿಯೊಂದು ಬೂತ್‍ನಲ್ಲಿ ಕನಿಷ್ಠ 300 ರಿಂದ 400 ಸದಸ್ಯರನ್ನು ಮಾಡುವ ಗುರಿ ಇದೆ ಎಂದು ತಿಳಿಸಿದ ಸಂಸದರು ಕಾಂಗ್ರೆಸ್ ಪಕ್ಷವು ನಾಯಕರ ಪಕ್ಷ, ನಮ್ಮದು ಕಾರ್ಯಕರ್ತರ ಪಕ್ಷ. ಸದಸ್ಯತ್ವವನ್ನು ಹೆಚ್ಚು ಮಾಡಬೇಕಿದೆ. ಅದಕ್ಕಾಗಿ ಬೀದಿಗೆ ಇಳಿಯಬೇಕು ಎಂದರು.
ಕೇಂದ್ರ 2047ರ ವೇಳೆಗೆ ಭಾರತವನ್ನು ವಿಕಸಿತ ರಾಷ್ಟ್ರವಾಗಿ, ಅಭಿವೃದ್ಧಿ ಹೊಂದಿದ ದೇಶವಾಗಿ ಮಾಡುವ ಕನಸು ಪ್ರಧಾನಿ ನರೇಂದ್ರ ಮೋದಿ ಅವರದಾಗಿದೆ. ಅವರಿಗೆ ಇನ್ನೂ ಹೆಚ್ಚು ಬಲ ಕೊಡುವ ಕೆಲಸ ನಡೆಸಬೇಕಿದೆ. ಅಭಿಯಾನದ ಯಶಸ್ವಿಗಾಗಿ ಪ್ರತಿ ಬೂತ್‍ಗಳಲ್ಲಿ ಕಾರ್ಯಕರ್ತರನ್ನು ಜೋಡಿಸಲಾಗಿದೆ. ದೇಶ ಮೊದಲು, ನಂತರ ಪಕ್ಷ ಉತ್ತಮ ಸಿದ್ಧಾಂತವನ್ನು ಬಿಜೆಪಿ ಹೊಂದಿದೆ ಎಂದು ತಿಳಿಸಿದರು.

ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ ಮಾತನಾಡಿ, ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮದಿನದ ಆಚರಣೆಯ ಈ ಸಂದರ್ಭದಲ್ಲಿ ಸದಸ್ಯತ್ವ ಅಭಿಯಾನದ ಜೊತೆ ಜೊತೆಗೇ ಪ್ರಧಾನಿ ಮೋದಿ ಅವರ 2047ನೇ ಇಸವಿಗೆ ಭಾರತವನ್ನು ವಿಕಸಿತ ರಾಷ್ಟ್ರವಾಗಿ, ಅಭಿವೃದ್ಧಿ ಹೊಂದಿದ ದೇಶವಾಗಿ ಪರಿವರ್ತನೆ ಮಾಡುವ ಸಂಕಲ್ಪಕ್ಕೆ ದೊಡ್ಡ ಶಕ್ತಿ ತುಂಬಲು ಸಮಾಜದ ವಿವಿಧ ಸ್ತರದ ಎಲ್ಲರನ್ನು, ಬೇರೆ ಬೇರೆ ಕ್ಷೇತ್ರದವರನ್ನು ಗುರುತಿಸಿ ಎಲ್ಲರನ್ನೂ ಸದಸ್ಯತ್ವದ ಅಭಿಯಾನದಲ್ಲಿ ನೋಂದಣಿ ಮಾಡುವ ಗುರಿ ಇದೆ ಎಂದರು.
1980ರಲ್ಲಿ ಶೇ.1 ಮತ ಪಡೆದರೆ ಖುಷಿ ಪಡುವ ಪಕ್ಷ ನಮ್ಮದಾಗಿತ್ತು. ಇದೀಗ ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲೇ ಅತಿ ಹೆಚ್ಚು ಸದಸ್ಯರನ್ನು ಹೊಂದಿದ ಪಕ್ಷ ಬಿಜೆಪಿ. ನಮ್ಮ ಶಕ್ತಿ ಈಗ ಏರುಮುಖವಾಗುತ್ತಿದೆ, ಕಾಂಗ್ರೆಸ್ ಪಕ್ಷದ ಆಡಳಿತವುಳ್ಳ ರಾಜ್ಯಗಳು ಇಳಿಮುಖವಾಗುತ್ತಿವೆ. ಪ್ರಜಾತಂತ್ರಕ್ಕೆ ಬಲ ತುಂಬಿದ್ದು ಬಿಜೆಪಿ ದೇಶದಲ್ಲಿ ನೂರಾರು ಪಕ್ಷಗಳಿದ್ದರೂ ಪ್ರಜಾತಂತ್ರ ವ್ಯವಸ್ಥೆಗೆ ಬಲ ತುಂಬಿರುವುದು ಬಿಜೆಪಿ ಪಕ್ಷ ಮಾತ್ರ ಮೂರನೇ ಬಾರಿಗೆ ಪ್ರಧಾನಿಯಾಗಿರುವ ನರೇಂದ್ರ ಮೋದಿಯವರು ಭಾರತವನ್ನು ವಿಶ್ವದಲ್ಲೇ ಅತ್ಯಂತ ಶಕ್ತಿಶಾಲಿಯಾಗಿಸುವ ಮೂಲಕ ಜಗತ್ತಿನಲ್ಲಿ ಅಥಿಕವಾಗಿ ಮೂರನೇ ಸ್ನಾನಕ್ಕೇರಿಸಲು ಪಣ ತೊಟ್ಟಿದ್ದಾರೆ. ಅವರಿಗೆ ನಾವು ಬಲ ತುಂಬಬೇಕಿದೆ ಒಂದು ಪಕ್ಷ ಬಹುಬೇಗನೇ ಸಂಘಟನೆಯಾಗಿ ಬಲಿಷ್ಠ ಪಕ್ಷವಾಗಿ ಹೊರಹೊಮ್ಮಬೇಕಾದರೆ ಅದಕ್ಕೆ ಕಾರ್ಯಕರ್ತರ ಶ್ರಮ, ಕಾರ್ಯಕರ್ತರ ತನುಮನದಿಂದ ಪಕ್ಷ ಇಷ್ಟೊಂದು ಅದ್ಭುತ ಸಾಧನೆ ಮಾಡಿದೆ ಎಂದರು.
ಇಡೀ ರಾಜ್ಯದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ನಡೆಯುತ್ತಿದೆ. ಈ ಬಾರಿ ಜಿಲ್ಲೆಯಲ್ಲಿ ಅತೀ ಹೆಚ್ಚು ಸದಸ್ಯತ್ತನ್ನು ನಮ್ಮ ಜಿಲ್ಲೆ ಹೊಂದಬೇಕು. ಆ ನಿಟ್ಟಿನಲ್ಲಿ ನಾವೆಲ್ಲರೂ ಸದಸ್ಯತ್ವ ಅಭಿಯಾನದಲ್ಲಿ ಪಾಲ್ಗೊಳ್ಳೋಣ. ಸಿದ್ಧಾಂತಕ್ಕಾಗಿ ಯಾವುದಾದರೂ ಮಂತ್ರಿ, ಮುಖ್ಯಮಂತ್ರಿ, ಪ್ರಧಾನಿ, ಉಪಪ್ರಧಾನಿ ಪಕ್ಷ ಇದ್ದರೆ ಅದು ಬಿಜೆಪಿ ಮಾತ್ರ. ದೇಶಭಕ್ತಿ ಸೇರಿದಂತೆ ಹಲವಾರು ಜವಾಬ್ದಾರಿಗಳನ್ನು ಹಾಗೂ ಸಂಘ ಪರಿವಾರದ ಸಂಸ್ಕಾರದಿಂದ ನಿರ್ವಹಿಸಿದರು. ಇದಕ್ಕೆ ಕಾರಣ ಪಕ್ಷದ ಸಿದ್ಧಾಂತ ಹಿಂದುತ್ವವನ್ನೇ ಉಸಿರಾಗಿಸಿಕೊಂಡು ಹಾಗೂ ಪಕ್ಷ ಸಂಘಟನೆಗೆ ಹೆಚ್ಚು ನೀಡಿದಕ್ಕಾಗಿ ತನಗಾಗಿ ಏನನ್ನೂ ಬಯಸದೆ ಪಕ್ಷಕ್ಕಾಗಿ ದುಡಿದ ಮಹನೀಯರೂ ಕೂಡ ಬಿಜೆಪಿಯಲ್ಲಿ ಮಾತ್ರ ಸಿಗುತ್ತಾರೆ ಎಂದರು, ಕಾರ್ಯಕರ್ತರ ಆಧಾರಿತವಾದ ನಮ್ಮ ಪಕ್ಷಕ್ಕೆ ಕಾರ್ಯಕರ್ತರೆ ಆಧಾರಸ್ಥಂಭವಾಗಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾದ್ಯಕ್ಷರಾದ ಎ ಮುರಳಿ ಪ್ರಧಾನಕಾರ್ಯದರ್ಶಿಗಳಾದ ಸುರೇಶ್ ಸಿದ್ದಾಪುರ ಸಂಪತ್ ಕುಮಾರ್ ರೈತ ಮೊರ್ಚ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ್ ಗ್ರಾಮಾಂತರ ಅದ್ಯಕ್ಷ ಕಲ್ಲೇಶಯ್ಯ ಮಹಿಳಾ ಮೊರ್ಚಾ ಅದ್ಯಕ್ಷೆ ಶೈಲಜಾರೆಡ್ಡಿ ವೀರೇಶ ಜಾಲಿಕಟ್ಟೆ ದಗ್ಗೆ ಶಿವಪ್ರಕಾಶ್, ಸುರೇಶ್,ವಸಂತ ,ಸತ್ಯನಾರಾಯಣ, ವೀಣಾ ಶೀಲಾ, ಶಾಂತಮ್ಮ ಕಾಂಚನಾ ಗ್ರಾಮಾಂತರ ಘಟಕದ ಪಧಾದಿಕಾರಿಗಳು ಉಪಸ್ಥಿತರಿದ್ದರು.