ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ ವಿರೋಧಿಸಿ ಡಿ.24ಕ್ಕೆ ಚಿತ್ರದುರ್ಗದಲ್ಲಿ ಬಿಜೆಪಿ ಪ್ರತಿಭಟನೆ.

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ, ಡಿ. 23:

ಬೆಳಗಾವಿ ಅಧಿವೇಶನದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಕರ್ನಾಟಕ ದ್ವೇಷ ಭಾಷಣ ಹಾಗೂ ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕವನ್ನು ವಿರೋಧಿಸಿ ಡಿ. 24 (ಬುಧವಾರ) ಚಿತ್ರದುರ್ಗ ವಿಧಾನಸಭಾ ವ್ಯಾಪ್ತಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಭಾರತೀಯ ಜನತಾ ಪಾರ್ಟಿಯ ಚಿತ್ರದುರ್ಗ ನಗರ ಮಂಡಲದ ಅಧ್ಯಕ್ಷ ಹೆಚ್.ಎನ್. ಲೋಕೇಶ್ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ. 24ರಂದು ಬೆಳಿಗ್ಗೆ 10.30ಕ್ಕೆ ನಗರದ ಡಿ.ಸಿ. ಸರ್ಕಲ್‌ನಲ್ಲಿ ಕರ್ನಾಟಕ ಸರ್ಕಾರದ ಈ ವಿಧೇಯಕದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು. ಜೊತೆಗೆ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸುವ ಕಾರ್ಯಕ್ರಮವೂ ಆಯೋಜಿಸಲಾಗಿದೆ ಎಂದು ಹೇಳಿದರು.

ಈ ಪ್ರತಿಭಟನೆಯಲ್ಲಿ ಬಿಜೆಪಿ ನಗರದ ಜಿಲ್ಲಾ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಲೋಕೇಶ್ ಮನವಿ ಮಾಡಿದ್ದಾರೆ.

Views: 56

Leave a Reply

Your email address will not be published. Required fields are marked *